ಬಿಸಿ ಬಿಸಿ ಸುದ್ದಿ

‘ಪಾಶ’ ಚಿತ್ರದ ಅಧಿಕೃತ ಪೋಸ್ಟರ್ ಬಿಡುಗಡೆ

ಗಧಾಗ್ರಜ ಫಿಲಂಸ್ ನ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ‘ಪಾಶ’ ಕಿರುಚಿತ್ರದ ಪೋಸ್ಟರ್ ರಿಲೀಸ್ ಮಾಡಲಾಗಿದೆ. ರಂಗಭೂಮಿ ಕಲಾವಿದ ಹಾಗೂ ಚಲನಚಿತ್ರಗಳಲ್ಲಿ ಕಲಾ ನಿರ್ದೇಶಕರಾಗಿ ಕೆಲಸ ಮಾಡಿರುವ ಲಕ್ಷ್ಮೀಕಾಂತ ಜೋಶಿಯವರು ಚೊಚ್ಚಲ ನಿರ್ದೇಶನ ಮಾಡಿದ್ದಾರೆ.

ಈ ಕಿರುಚಿತ್ರದ ಕತೆ ಹಿರಿಯ ಸಾಹಿತಿ ಹಾಗೂ ನಿರ್ದೇಶಕರಾದ ‘ಜೋಗಿ’ ( ಗಿರೀಶರಾವ ಹತ್ವಾರ) ಅವರ ಲೈಫ್ ಈಸ್ ಬ್ಯೂಟಿಫುಲ್ ಕೃತಿಯ ಒಂದು ಕತೆಯಾಧಾರಿತವಾಗಿದೆ. ಚಿತ್ರೀಕರಣ ಕಲಬುರಗಿ ನಗರದ ಸುತ್ತಮುತ್ತ ನಡೆದಿದ್ದು, ಚಿತ್ರತಂಡ ಚಿತ್ರೀಕರಣ ಮುಗಿಸಿ ಇವತ್ತು ಅಧಿಕೃತವಾಗಿ ಪೋಸ್ಟರ್ ಬಿಡುಗಡೆ ಮಾಡಿದೆ.

ಪೋಸ್ಟರ್ ಪ್ರೇಕ್ಷಕರನ್ನು ಸೆಳೆಯುತ್ತಿದ್ದು , ಚಿತ್ರದ ಮೇಲಿನ ಕುತೂಹಲ ಹೆಚ್ಚಿಸಿದೆ. ಈ ಚಿತ್ರವು ಫಿಲ್ಮ್ ಫೆಸ್ಟಿವಲ್ ಗಳಲ್ಲಿ ಭಾಗವಹಿಸಿ ನಂತರ ಪ್ರೇಕ್ಷಕರ ಎದುರಿಗೆ ಬರಲಿದೆ ಎಂದು ನಿರ್ದೇಶಕರು ತಿಳಿಸಿದ್ದಾರೆ.

ಮುಖ್ಯಪಾತ್ರದಲ್ಲಿ ಕಿರುತೆರೆಯ (ಮುಕ್ತ ಮುಕ್ತ , ಮಹಾಸತಿ, ಗಂಗಾ ಧಾರಾವಾಹಿ ಖ್ಯಾತಿಯ ) ಹಿರಿಯ ನಟ ವಿಜಯ ಕುಲಕರ್ಣಿ ನಟಿಸಿದ್ದರೆ, ನ್ಯಾಷನಲ್ ಸ್ಕೂಲ್ ಆಫ್ ಡ್ರಾಮಾ (NSD) ಪದವೀಧರ, ಕಲರ್ಸ್ ಕನ್ನಡ ವಾಹಿನಿಯ , ಕಾಮಿಡಿ ಕಂಪನಿ ಖ್ಯಾತಿಯ ಸೋಮಶಂಕರ್ ಬಿರಾದಾರ ಅವರು ಪ್ರಮುಖ ಪಾತ್ರವೊಂದರಲ್ಲಿ ತೆರೆ ಹಂಚಿಕೊಂಡಿದ್ದಾರೆ.

ರಂಗಾಯಣ ಕಲಾವಿದರಾದ ಉಮೇಶ್ ಪಾಟೀಲ್ , ಶ್ರೀನಿವಾಸ ದೋರನಳ್ಳಿ , ಕೌಶಿಕ್ ಕುಲಕರ್ಣಿ , ಪ್ರದೀಪ ಬೆಳಮಗಿ , ರಿಷಿಕೇಶ ಕುಲಕರ್ಣಿ , ನೀಲಾಂಬಿಕಾ , ಲಕ್ಷ್ಮೀ ಅಥಣಿ ತಾರಾಗಣದಲ್ಲಿದ್ದಾರೆ. ಕು. ಸ್ಪೂರ್ತಿ ಅಥಣಿ , ಸ್ನೇಹ , ಕಾವ್ಯ , ವೈಷ್ಣವಿ ಬಾಲ ಕಲಾವಿದೆಯರಾಗಿ ಅಭಿನಯಿಸಿದ್ದಾರೆ.

ಚಿತ್ರಕ್ಕೆ ಸಹ ನಿರ್ದೇಶಕರಾಗಿ ಸೋಮಶಂಕರ್ ಬಿರಾದಾರ, ಸಹಾಯಕ ನಿರ್ದೇಶಕರಾಗಿ ಅಂಬರೀಶ್ ಮರಾಠಾ ನಿರ್ದೇಶನ ತಂಡದಲ್ಲಿದ್ದಾರೆ‌. ಛಾಯಾಗ್ರಾಹಕರಾಗಿ ರಾಘು ಮರೆನೂರ , ಸಂಕಲನ ಓಂಕಾರ ಮತ್ತು ಭಾಗ್ಯೇಶ್ ಪಾಟೀಲ್ ಜಂಟಿಯಾಗಿ ಕಾರ್ಯ ನಿರ್ವಹಿಸಿದ್ದಾರೆ. ಹಂಸಲೇಖ ಅವರ ಗರಡಿಯಲ್ಲಿ ಪಳಗಿದ ಸುಚೀನ್ ಶರ್ಮಾ ಅವರ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

5 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

6 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

6 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

22 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago