ಶಹಾಬಾದ: ನಗರದಲ್ಲಿ ಡಿಸೆಂಬರ 26 ರಂದು 12ನೇ ಶತಮಾನದ ಕಾಯಕ ಶಿವಶರಣ ಮಾದರ ಚೆನ್ನಯ್ಯ ನವರ 973ನೇ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ದಲಿತ ಮಾದಿಗ ಸಮನ್ವಯ ಸಮಿತಿಯ ತಾಲೂಕ ಅಧ್ಯಕ್ಷರಾದ ಶಿವರಾಜ ಕೋರೆ ಹೇಳಿದರು.
ಅವರು ಶನಿವಾರ ನಗರದ ಪ್ರವಾಸಿ ಮಂದಿರದಲ್ಲಿ ದಲಿತ ಮಾದಿಗ ಸಮನ್ವಯ ಸಮಿತಿಯರು ಕರೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದರು.
ಶರಣರು ಸಮಾಜದಲ್ಲಿ ಸಮಾನತೆಯನ್ನು ಸಾರಿ, ಕಾಯಕ-ದಾಸೋಹವನ್ನು ಮಾಡುವ ಮೂಲಕ ಉತ್ತಮ ಸಮಾಜದ ನಿರ್ಮಾಣಕ್ಕೆ ಮುನ್ನುಡಿ ಬರೆದರು. ಆ ನಿಟ್ಟಿನಲ್ಲಿ ನಗರದಲ್ಲಿ ಕಾಯಕ ಶಿವಶರಣ ಮಾದಾರ ಚೆನ್ನಯ್ಯ ನವರ ಜಯಂತಿ ಡಿ. 26 ರಂದು ಆಚರಿಸಲು ನಿರ್ಧರಿಸಿದ್ದು, ಅಂದು ಮಾದಾರ ಚೆನ್ನಯ್ಯ ಬಡಾವಣೆಯಿಂದ ವೇದಿಕೆಯವರೆಗೂ ಕಲಾ ತಂಡಗಳಿಂದ ಮೆರವಣಿಗೆ ಕಾರ್ಯಕ್ರಮದಲ್ಲಿ ವಿವಿಧ ಗ್ರಾಮದ ದಲಿತ ಮಾದಿಗ ಸಮನ್ವಯ ಸಮಿತಿಯ ಪದಾಧಿಕಾರಿಗಳು ಹಾಗೂ ಸಮಾಜದ ಗಣ್ಯರು ಪಾಲ್ಗೊಳ್ಳಲಿದ್ದಾರೆ.
ಅಲ್ಲದೇ ವಚನಗಳ ಕುರಿತು ಗೀತಗಾಯನ ಹಾಗೂ ಸಂಪನ್ಮೂಲ ವ್ಯಕ್ತಿಗಳಿಂದ ಕಾಯಕ ಶಿವಶರಣರ ಆದರ್ಶ ಮತ್ತು ಚಿಂತನೆ ಹಾಗೂ ಸಮಾಜಕ್ಕೆ ಅವರ ಕೊಡುಗೆ ತಿಳಿಸುವ ನಿಟ್ಟಿನಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮ ಏರ್ಪಡಿಸಲಾಗುವುದು ಎಂದು ತಿಳಿಸಿದರು.
ಪತ್ರಿಕಾ ಗೋಷ್ಠಿಯಲ್ಲಿ ಪ್ರಧಾನ ಕಾರ್ಯದರ್ಶಿ ರವಿ ಬೆಳಮಗಿ, ಸಂ. ಕಾರ್ಯದರ್ಶಿ ನಾಗಪ್ಪ ರಾಯಚೂರಕರ, ಯಲ್ಲಾಲಿಂಗ ಹೈಯಾಳಕರ, ಶಿವರಾಜ ಜೀನಕೇರಿ, ಭೀಮರಾಯ ಕನಗನಳ್ಳಿ, ಮಹೇಶ ಕಾಂಬಳೆ, ಮಹೇಶ ಹಲಕಟ್ಟಿ ಉಪಸ್ಥಿತರಿದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…