ಸುರಪುರ: ತಾಲೂಕಿನಾದ್ಯಂತ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗಾಗಿ ವಿಶೇಷ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಹಸೀಲ್ದಾರ್ ಕೆ.ವಿಜಯಕುಮಾತ ತಿಳಿಸಿದರು.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು,18 ವರ್ಷ ಮೇಲ್ಪಟ್ಟ ಯಾರು ಕೂಡ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎನ್ನುವ ಕಾರಣಕ್ಕಾಗಿ ಇದೇ ನವಂಬರ್ 18 ಮತ್ತು 19 ರಂದು ಹಾಗೂ ಡಿಸೆಂಬರ್ 2 ಮತ್ತು 3 ರಂದು ವಿಶೇಷ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ.
ಅರ್ಜಿಯನ್ನು ಮತದಾರರ ನೊಂದಣಾಧಿಕಾರಿ,ಗ್ರಾಮ ಆಡಳಿತ ಅಧಿಕಾರಿ ಅಥವಾ ಮತಗಟ್ಟೆ ಅಧಿಕಾರಿ ಅವರಿಂದ ಪಡೆದು ಭರ್ತಿ ಮಾಡಿದ ಅರ್ಜಿಯೊಂದಿಗೆ ವಯಸ್ಸಿನ ದೃಢೀಕರಣ,ಅರ್ಜಿದಾರರ ಫೋಟೊ,ಸಂಬಂಧಿಕರ ಮತದಾರರ ಗುರುತಿನ ಚೀಟಿ ಹಾಗೂ ಆಧಾರ್ ಪಡಿತರ ಚೀಟಿ ಇತ್ಯಾದಿಗಳೊಂದಿಗೆ ಸಲ್ಲಿಸಬೇಕು ಹಾಗೂ ಅರ್ಜಿದಾರರು ಅರ್ಜಿಯನ್ನು www.nvsp.in mobile App,VHA App ಮೂಲಕ ಅರ್ಜಿ ಅಪ್ಲೋಡ್ ಮಾಡಬಹುದು ಮತ್ತು ಮತದಾರರ ಪ್ಟಟಿಯಲ್ಲಿ ನಿಮ್ಮ ಹೆಸರು ಇದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಲು ವೆಬ್ ಸೈಟ್ www.Voter.kar.nic.in ಗೆ ಭೇಟಿ ನೀಡಿ ಪರಿಶೀಲಿಸಿಕೊಳ್ಳಬಹುದು ಎಂದು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…