ಕಲಬುರಗಿ: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಶಿಕಾರಿಪುರ ಶಾಸಕ ಬಿ ವೈ ವಿಜಯೇಂದ್ರ ಅವರ ನೇಮಕ ಅತ್ಯಂತ ಸ್ವಾಗತಾರ್ಹ ಎಂದು ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ಹಾಗೂ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರಾದ ಡಾ ಅಂಬಾರಾಯ ಅಷ್ಠಗಿ ಬಣ್ಣಿಸಿದ್ದಾರೆ.
ಬಿ ವೈ ವಿಜಯೇಂದ್ರ ಅವರ ನೇಮಕದಿಂದ ರಾಜ್ಯದಾದ್ಯಂತ ಬಿಜೆಪಿ ಪರ ಹೊಸ ಅಲೆ ಸೃಷ್ಟಿಯಾಗಲಿದ್ದೂ, ರಾಜ್ಯ ಉಪಾಧ್ಯಕ್ಷರಾಗಿ, ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಪಕ್ಷವನ್ನು ಸಂಘಟಿಸಿದ ಅನುಭವ ಅವರಿಗಿದೆ. ರಾಜ್ಯದಲ್ಲಿ ಹಿಂದೆ ನಡೆದ ಅನೇಕ ಉಪಚುನಾವಣೆ ಹಾಗೂ ಸಾರ್ವತ್ರಿಕ ಚುನಾವಣೆಗಳಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಲು ಶ್ರಮಿಸಿದ್ದಾರೆ.
ಯುವಕರು ಹಾಗೂ ಹಿರಿಯ ನಾಯಕರನ್ನು ಒಗ್ಗೂಡಿಸಿ ಪಕ್ಷ ಕಟ್ಟುವ ಸಾಮರ್ಥ್ಯ ಬಿವೈವಿ ಅವರಲ್ಲಿದೆ. ಹಾಗಾಗಿ ಅವರ ನಾಯಕತ್ವದಲ್ಲಿ ಮುಂಬರುವ ಸ್ಥಳೀಯ ಸಂಸ್ಥೆ ಮತ್ತು ಮುಖ್ಯವಾಗಿ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂದು ಡಾ.ಅಂಬಾರಾಯ ಅಷ್ಠಗಿ ಅಭಿಪ್ರಾಯ ಪಟ್ಟಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…