ಕಲಬುರಗಿ: ಪತ್ರಕರ್ತರ ವೇದಿಕೆ ಬೆಂಗಳೂರು, ಡಾ. ಸಿದ್ದಯ್ಯ ಪುರಾಣಿಕ್ ಸ್ಮಾರಕ ಟ್ರಸ್ಟ್ , ಕನ್ನಡ ಮತ್ತು ಸಂಸ್ಕøತಿ ಇಲಾಖೆ ಬೆಂಗಳೂರು ಸಂಯುಕ್ತಾಶ್ರಯದಲ್ಲಿ ನ.16 ರಂದು ಬೆಂಗಳೂರಿನ ರವಿಂದ್ರ ಕಲಾಕ್ಷೇತ್ರದ ಕನ್ನಡ ಭವನದಲ್ಲಿ ಸಂಜೆ 5-30 ಕ್ಕೆ ರಾಷ್ಠ್ರೀಯ ಪತ್ರಿಕಾ ದಿನಾಚರಣೆ ಮತ್ತು ಸುವರ್ಣ ಕರ್ನಾಟಕ ಸಂಭ್ರಮ ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು.
ಆ ಕಾರ್ಯಕ್ರಮದಲ್ಲಿ ರಾಜ್ಯದ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದವರಿಗೆ ರಾಜ್ಯಮಟ್ಟದ ಸುವರ್ಣ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕಾರ ಮಾಡಲಾಗುತ್ತಿದ್ದು. ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಕಲಹಿಪ್ಪರಗಿ ಗ್ರಾಮದ ಧರ್ಮರಾಜ ಕಲಹಿಪ್ಪರಗಿ ಅವರ ಸಮಾಜಿಕ ಕ್ಷೇತ್ರದ ಗಣನೀಯ ಸೇವೆಯನ್ನು ಪರಿಗಣಿಸಿ ರಾಜ್ಯಮಟ್ಟದ ಸುವರ್ಣ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಅಯ್ಕೆ ಮಾಡಲಾಗಿದೆ ಎಂದು ಪತ್ರಕರ್ತರ ವೇದಿಕೆ ರಾಜ್ಯಧ್ಯಕ್ಷರಾದ ಮಹೇಶ ಬಾಬು ಸುರ್ವೆ ತಿಳಿಸಿದ್ದಾರೆ.