ಕಲಬುರಗಿ : ನೆರೆಯ ತೆಲಂಗಾಣದ ರಾಜ್ಯದ ನಾರಾಯಣಪೇಟ್ ವಿಧಾನ ಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಾ.ಪರಿಣಿಕಾ ರೆಡ್ಡಿ ಅವರ ಗೆಲುವು ಖಚಿತ ಎಂದು ಎಐಸಿಸಿ ವಿಕ್ಷಕರಾಗಿ ಚುನಾವಣಾ ಪ್ರಚಾರಕ್ಕೆ ತೆರಳಿರುವ ವಿಧಾನ ಪರಿಷತ್ತಿನ ಸದಸ್ಯ ತಿಪ್ಪಣ್ಣಪ್ಪ ಕಮಕನೂರ ಹೇಳಿದ್ದಾರೆ.
ಮಂಗಳವಾರ ಅಭ್ಯರ್ಥಿ ಪರ ಪ್ರಚಾರಕ್ಕಾಗಿ ತೆರಳಿದ ಅವರು, ಕ್ಷೇತ್ರದ ಕೇಂದ್ರ ಸ್ಥಾನ ನಾರಾಯಣಪೇಟ್ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತೆಲಂಗಾಣ ರಾಜ್ಯದಲ್ಲಿ ಕೆಸಿಆರ್ ನೇತೃತ್ವದ ಸರಕಾರ ಜನವಿರೋಧಿಯಾಗಿದೆ. ಭಾರಿ ಭ್ರಷ್ಟಚಾರ ನಡೆಸುವ ಮೂಲಕ ಅಭಿವೃದ್ಧಿ ಮರೆಮಾಚಿದೆ ಎಂದು ದೂರಿದರು.
ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರ ನೀಡುತ್ತಿರುವ ಉಚಿತ ಯೋಜನೆಗಳು ಜನಮನ್ನಣೆ ಗಳಿಸಿವೆ. ನುಡಿದಂತೆ ನಡೆಯುತ್ತಿದ್ದೆವೆ. ನಾರಾಯಣಪೇಟ್ ಕ್ಷೇತ್ರದಲ್ಲಿ ಮಹಿಳಾ ಅಭ್ಯರ್ಥಿ ಕಣದಲ್ಲಿ ಇದ್ದು, ಅವರಿಗೊಂದು ಅವಕಾಶ ನೀಡಬೇಕೆಂದು ಕಮಕನೂರ ಮನವಿ ಮಾಡಿದರು.
ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ ನೇತೃತ್ವದ ಸರಕಾರ ರಾಜ್ಯದಲ್ಲಿ ಉತ್ತಮ ಕೆಲಸ ಮಾಡುತ್ತಿದೆ. ಇದು ಬೇರೆ, ಬೇರೆ ರಾಜ್ಯಗಳಿಗೆ ಮಾದರಿಯಾಗಿದೆ. ಈಗ ತೆಲಂಗಾಣದಲ್ಲಿ ಕಾಂಗ್ರೆಸ್ ಗಾಳಿ ಬಿಸುತ್ತಿದೆ. ಟಿಆರ್‍ಎಸ್‍ನ ಚಂದ್ರಶೇಖರ ಅವರು ಸುಳ್ಳು ಹೇಳುವ ಮೂಲಕ ಮತ್ತೇ ಅಧಿಕಾರಕ್ಕೆ ಬರಲು ಯತ್ನಿಸುತ್ತಿದ್ದಾರೆ, ಆದರೆ ಜನ ತೆಲಂಗಾಣದಲ್ಲಿ ಬದಲಾವಣೆ ಬಯಸಿದ್ದಾರೆ. ಹೀಗಾಗಿ ನಾರಾಯಣಪೇಟ ಕ್ಷೇತ್ರ ಸೇರಿದಂತೆ ಇಡಿ ರಾಜ್ಯದಲ್ಲಿ ಕಾಂಗ್ರೆಸ್ ಬಹುಮತ ಪಡೆದು ಅಧಿಕಾರಕ್ಕೆ ಬರಲಿದೆ ಎಂದು ಹೇಳಿದರು.
ಯುವ ನಾಯಕ ಚೇತನ ಗೋನಾಯಕ ಇತರರು ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…