ಬಿಸಿ ಬಿಸಿ ಸುದ್ದಿ

ಇಲಾಖೆಗಳ ಟೆಂಡರ್ ಪ್ರಕ್ರಿಯೆಗಳ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರು ಮಾಹಿತಿ ಸಲ್ಲಿಸಲು ಅವಧಿ ವಿಸ್ತರಣೆ

ಬೆಂಗಳೂರು; ಕರ್ನಾಟಕ ಸರ್ಕಾರವು ಅಧಿಸೂಚನೆ ಸಂಖ್ಯೆ : ಓಇ 98 ಪಿಸಿಐ 2023 ದಿನಾಂಕ : 25.08.2023 ಮತ್ತು (06,10,2023 ರಲ್ಲಿ ಕರ್ನಾಟಕ ಸ್ಟೇಟ್ ಕಂಟ್ರಾಕ್ಟರ್ ಅಸೋಸಿಯೇಷನ್ ಅಧ್ಯಕ್ಷರಾದ ಡಿ.ಕೆಂಪಣ್ಣ ಇವರು ಮಾನ್ಯ ಪ್ರಧಾನ ಮಂತ್ರಿಗಳಿಗೆ ಹಾಗು ನಿಕಟಪೂರ್ವ ಮಾನ್ಯ ಮುಖ್ಯ ಮಂತ್ರಿಗಳಿಗೆ ಮನವಿ ಪತ್ರಗಳನ್ನು ಸಲ್ಲಿಸಿ ರಾಜ್ಯದಲ್ಲಿ ಪ್ರಮುಖ ಕಾಮಗಾರಿಗಳನ್ನು ನಡೆಸುವ ಇಲಾಖೆಗಳಲ್ಲಿ ನಡೆಯುತ್ತಿರುವ ಪ್ಯಾಕೇಜ್ ಪದ್ಧತಿ, ಬಾಕಿ ಮೊತ್ತ ಬಿಡುಗಡೆ ಮತ್ತು ಟೆಂಡರ್ ಪ್ರಕ್ರಿಯೆ, ಇತ್ಯಾದಿಗಳಲ್ಲಿ ಶೇಕಡ 40% ಕ್ಕಿಂತಲೂ ಹೆಚ್ಚಿನ ಪ್ರಮಾಣದಲ್ಲಿ ಲಂಚಗುಳಿತನ / ಭ್ರμÁ್ಟಚಾರ ನಡೆಯುತ್ತಿರುವುದಾಗಿ ವಿವರಿಸಿರುವ ಹಿನ್ನೆಲೆಯಲ್ಲಿ ಕರ್ನಾಟಕ ಸ್ಟೇಟ್ ಕಂಟ್ರಾಕ್ಟರ್ ಅಸೋಸಿಯೇಷನ್, ಬೆಂಗಳೂರು ಇವರು ಸಲ್ಲಿಸಿರುವ ಮನವಿಯಲ್ಲಿನ ಆರೋಪಗಳ ಕುರಿತು ತನಿಖೆಯನ್ನು ನಡೆಸಲು ಅನುವಾಗುವಂತೆ ಅommissioಟಿ oಜಿ Iಟಿquiಡಿಥಿ ಂಛಿಣ -1952 (ಅeಟಿಣಡಿಚಿಟ ಂಛಿಣ ಐಘಿ oಜಿ 1952)ರ ನಿಯಮ 3ರ ಉಪ ನಿಯಮ 1ರಲ್ಲಿ ಪದತ್ತವಾದ ಅಧಿಕಾರದನ್ವಯ ಸರ್ಕಾರವು ಮಾನ್ಯ ಗೌರವಾನ್ವಿತ ನ್ಯಾಯಮೂರ್ತಿ ಹೆಚ್.ಎನ್. ನಾಗಮೋಹನ್ ದಾಸ್ ರವರ ನೇತೃತ್ವದಲ್ಲಿ ವಿಚಾರಣಾ ಆಯೋಗವನ್ನು ನೇಮಿಸಿದ್ದು, ಪ್ರಥಮವಾಗಿ ಈ ವಿಚಾರಣೆಯನ್ನು ದಿನಾಂಕ 26.07.2019 ರಿಂದ 31-03-2023 ರ ಅವಧಿಯಲ್ಲಿ ನಡೆದಿರುವ ಕಾಮಗಾರಿಗಳನ್ನು ತನಿಖೆಗೆ ಒಳಪಡಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಮಾನ್ಯ ವಿಚಾರಣಾ ಆಯೋಗವು, ದಿ:17.10.2023ರಂದು ರಾಜ್ಯದ ಕೆಲವು ದಿನಪತ್ರಿಕೆಯಲ್ಲಿ ಪ್ರಕಟವಾದ ಅಧಿಸೂಚನೆಯಲ್ಲಿ ಸಾರ್ವಜನಿಕರು ಯಾವುದೇ ರೀತಿಯ ಸಲಹೆ / ಆಕ್ಷೇಪಣೆ / ಅಹವಾಲು ಹೇಳಿಕೆಗಳು / ದಾಖಲೆಗಳು ಇದ್ದಲ್ಲಿ 2023, ನವೆಂಬರ್ 10 ರೊಳಗಾಗಿ ಕಛೇರಿಯ ವೇಳೆಯಲ್ಲಿ (ಬೆಳಿಗ್ಗೆ 10.00 ಗಂಟೆಯಿಂದ ಸಂಜೆ 5.30ರವರೆಗೆ) ಗೌರವಾನ್ವಿತ ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನ್ ದಾಸ್, ವಿಚಾರಣಾ ಆಯೋಗ, 3ನೇ ಮಾಡಿ – ಲೋಕೋಪಯೋಗಿ ಇಲಾಖೆ ಮುಖ್ಯ ಕಟ್ಟಡ, ಕೆ.ಆರ್.ವೃತ್ತ,ಬೆಂಗಳೂರು 560001 ಕಛೇರಿಗೆ ಖುದ್ದಾಗಿ ಅಥವಾ ಅಂಚೆಯ ಮೂಲಕ ಅಥವಾ ಇ-ಮೇಲ್ justicenmdasinquirycommission@gmail.com ಮೂಲಕ ಸಲ್ಲಿಸಲು ತಿಳಿಸಲಾಗಿತ್ತು.

ವಿಚಾರಣಾ ಪ್ರಕ್ರಿಯೆಯಲ್ಲಿ ಸಾರ್ವಜನಿಕರ ಗರಿಷ್ಠ ಭಾಗವಹಿಸುವಿಕೆಗೆ ಅವಕಾಶ ಕಲ್ಪಿಸಲು ಮೇಲ್ಕಂಡ ಅವಧಿಯನ್ನು 2023, ನವೆಂಬರ್ 29ರ ವರೆಗೆ ವಿಸ್ತರಿಸಲಾಗಿದೆಯೆಂದು ಗೌರವಾನ್ವಿತ ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನ್ ದಾಸ್, ವಿಚಾರಣಾ ಆಯೋಗದ ಸದಸ್ಯ ಕಾರ್ಯದರ್ಶಿಗಳು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

8 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

8 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

8 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago