ಕಲಬುರಗಿ: ನಗರದ ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಮಹಾವಿದ್ಯಾಲಯದ ಪ್ರಾಣಿಶಾಸ್ತ್ರ ವಿಭಾಗದ ವತಿಯಿಂದ ಆಯೋಜಿಸಿದ್ದ ಮೌಲ್ಯವರ್ಧಿತ ತರಬೇತಿ ಕೋರ್ಸ್ನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾ ರೈತ ತರಬೇತಿ ಕೇಂದ್ರ ಕೋಟನೂರ (ಡಿ) ಸಹಾಯಕ ನಿರ್ದೇಶಕರಾದ ಅನೀಲಕುಮಾರ ಅವರು ಕೃಷಿಯು ಪ್ರತಿಯೊಂದು ಜೀವ ವಿಜ್ಞಾನದ ಮೂಲ ಎಂದು ಹೇಳಿದರು.
ಇಂತಹ ಕೊರ್ಸಗಳನ್ನು ಆಯೋಜಿಸಿ ವಿದ್ಯಾರ್ಥಿನಿಯರು ಕೇವಲ ಪಠ್ಯಕ್ಕೆ ಮಾತ್ರ ಸೀಮಿತವಾಗದೆ ಬೇರೆ ವಿಷಯಗಳ ಬಗ್ಗೆ ಮಾಹಿತಿ ಒದಗಿಸುವ ಇಂತಹ ಕಾರ್ಯಕ್ರಮ ಶ್ಲಾಘನೀಯ ಎಂದರು.
ಕಾರ್ಯಕ್ರಮದಲ್ಲಿ ಇನ್ನೋರ್ವ ಮುಖ್ಯ ಅತಿಥಿಗಳಾದ ಮಹಾವಿದ್ಯಾಲಯದ ಹಳೆ ವಿದ್ಯಾರ್ಥಿ ಹಾಗೂ ಉಪನ್ಯಾಕಿಯಾದ ಮರ್ಸಿ ಅವರು ನಮಗೆ ಇಂತಹ ಅವಕಾಶಗಳು ವಿದ್ಯಾರ್ಥಿ ಜೀವನದಲ್ಲಿ ಇರಲಿಲ್ಲ ಅದೃಷ್ಟವಂತರು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ.ರಾಜೇಂದ್ರ ಕೊಂಡಾ ವಹಿಸಿಕೊಂಡಿದ್ದರು ವೇದಿಕೆಯಲ್ಲಿ ವಿಭಾಗದ ಮುಖ್ಯಸ್ಥರಾದ ಡಾ.ಚಂದ್ರಕಲಾ ಪಾಟೀಲ ,ಉಪನ್ಯಾಸಕರಾದ ಕುಮಾರಿ,ಅರ್ಪೀತಾ ಕೊಪ್ಪಳಕರ್,ಕುಮಾರಿ ವಾಸವಿ ಜೋಷಿ ಉಪಸ್ಥಿತರಿದ್ದರು ಡಾ.ಮಹೇಶ ಗಂವ್ಹಾರ ,ಉಪನ್ಯಾಸ ಕರಾದ ಮಿಸ್ ಸ್ಮೀತಾ ಪಾಟೀಲ,ಮಿಸ್.ಪಲ್ಲವಿ,ಮಿಸ್ ಸುರಕ್ಚಾ ಠಾಕೂರ್ ಭಾಗವಹಿಸಿದ್ದರು.
ಕುಮಾರಿ.ಪಲ್ಲವಿ ಪ್ರಾರ್ಥಿಸಿದರು,ಕುಮಾರಿ.ವಿದ್ಯಾಶ್ರೀ,ಕುಮಾರಿ.ಉಜ್ಮಾ ವಿಷಯದ ಬಗ್ಗೆ ತಮ್ಮ ಅಭಿಪ್ರಾಯ ಹಂಚಿಕೊಂಡರು,ಕುಮಾರಿ ಶ್ರೇಯಾ ಹಾಗೂ ಸಿಮ್ರಾನ್ ಕಾರ್ಯಕ್ರಮ ನಿರೂಪಿಸಿದರು ಕುಮಾರಿ .ಅರ್ಷಿಯಾ ವಂದಿಸಿದರು
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…