ಬೀದರ; ಬೀದರ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ದಾಖಲಾದ 20 ಕಳ್ಳತನ ಪ್ರಕರಣಗಳನ್ನು ಭೇಧಿಸಿ 14 ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ. ಆರೋಪಿಗಳಿಂದ 44,07,062 ರೂ. ಮೌಲ್ಯದ ಸ್ವತ್ತು ವಶಪಡಿಸಿಕೊಳ್ಳಲಾಗಿದೆ ಎಂದು ಬೀದರ ಜಿಲ್ಲಾ ಪೊಲೀಸ್ ವರೀಷ್ಠಾಧಿಕಾರಿ ಚನ್ನಬಸವಣ್ಣ ಎಸ್.ಎಲ್ ಹೇಳಿದಿರು.
ಅವರು ಗುರುವಾರ ಬೀದರ ಜಿಲ್ಲಾ ಪೊಲೀಸ್ ವರೀಷ್ಠಾಧಿಕಾರಿಗಳ ಕಛೇರಿ ಆವರಣದಲ್ಲಿ ಕರೇದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಬೀದರ ಗಾಂಧಿ ಗಂಜ ಠಾಣಾ ವ್ಯಾಪ್ತಿಯ ಹಕ್ ಕಾಲೋನಿಯಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದು ಆರೋಪಿಗಳಿಂದ 7,25,000 ರೂ. ಬೆಲೆಯ 155 ಗ್ರಾಂ. ಬಂಗಾರದ ಬಿಸ್ಕಟ್‌ಗಳು, 3 ಸಾವಿರ ನಗದು ಹಣ ಹಾಗೂ ಕಳುವು ಮಾಡಿದ ಬಂಗಾರ ಮಾರಿ ಖರೀದಿ ಮಾಡಿದ 2.50 ಲಕ್ಷ ರೂ. ಮೌಲ್ಯದ ಸ್ಕಾರ್ಪಿಯೋ ಕಾರು ವಶಕ್ಕೆ ಪಡೆಯಲಾಗಿದೆ. ಆರೋಪಿತರಲ್ಲಿ ಓರ್ವ ಅಪ್ರಾಪ್ತನಾಗಿದ್ದು ಅವನಿಗೆ ರಿಮ್ಯಾಂಡ್ ಹೋಮಗೆ ಒಪ್ಪಿಸಲಾಗಿದೆ ಎಂದು ಹೇಳಿದರು.
ಹುಮನಾಬಾದ ಹಾಗೂ ಹಳ್ಳಿಖೇಡ (ಬಿ) ಠಾಣಾ ವ್ಯಪ್ತಿಯಲ್ಲಿ ನಡೆದ 8 ಕಳ್ಳತನ ಪ್ರಕಣದಲ್ಲಿ ಭಾಗಿಯಾಗಿರುವ ಓರ್ವ ಆರೋಪಿಯನ್ನು ಬಂಧಿಸಿ ಆರೋಪಿತನಿಂದ 20,10,000 ಸಾವಿರ ರೂ.ಗಳ 31 ತೊಲೆ 9 ಗ್ರಾಂ ಬಂಗಾರದ ಆಭರಣಗಳು ಮತ್ತು 150 ತೊಲೆಯ ಬೆಳ್ಳಿಯ ಆಭರಣಗಳು ವಶಕ್ಕೆ ಪಡೆಯಲಾಗಿದೆ ಈ ಆರೋಪಿಯು ತೆಲಂಗಾಣ ರಾಜ್ಯದಲ್ಲಿ ವಿವಿಧ 53 ಪ್ರಕರಣಗಳಲ್ಲಿ ಭಾಗಿಯಾಗಿದ್ದ ಎಂದು ತಿಳಿದು ಬಂದಿದೆ. ಬೆಮಳಖೇಡಾ ಠಾಣಾ ವ್ಯಪ್ತಿಯಲ್ಲಿ ನಡೆದ 6 ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ 3 ಆರೋಪಿಗಳನ್ನು ಬಂಧಿಸಿದ್ದು ಅವರಿಂದ 3,62,600 ರೂ. ಮೌಲ್ಯದ ಸ್ವತ್ತುಗಳನ್ನು ಜಪ್ತಿ ಮಾಡಲಾಗಿದೆ.
ಅದೇ ರೀತಿ ಬೀದರ ನೂತನ ನಗರ ಪೊಲೀಸ್ ಠಾಣೆ, ಮನ್ನಳಿ ಪೊಲೀಸ್ ಠಾಣೆ, ಜನವಾಡ ಪೊಲೀಸ್ ಠಾಣೆ, ಬಸವಕಲ್ಯಾಣ ಗ್ರಾಮೀಣ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನಡೆದಿರುವ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಟು ಜನ ಆರೋಪಿಗಳನ್ನು ಬಂಧಿಸಿ ಆರೋಪಿಗಳಿಂದ 10,56,462 ಬೆಲೆಯ ವಿದ್ಯುತ್ ಕಂಡಕ್ಟರ್‌ಗಳು, ಕಿರಾಣಿ ಅಂಗಡಿ ಸಾಮಾನುಗಳು, ಎತ್ತು ಮತ್ತು ಬಂಡಿ, ಕೃತ್ಯಕ್ಕೆ ಬಳಸಿದ ಗೂಡ್ಸ್ ವಾಹನ ಸೇರಿದಂತೆ ಇತರೆ ಸ್ವತ್ತುಗಳನ್ನು ಜಪ್ತಿ ಮಾಡಲಾಗಿದೆ ಎಂದರು.
ಈ ಸಂದರ್ಭದಲ್ಲಿ ಬೀದರ ಪೊಲೀಸ್ ಉಪಾಧೀಕ್ಷಕ ಶಿವನಗೌಡ ಪಾಟೀಲ್, ಗಾಂಧಿಗಂಜ ಠಾಣೆಯ ಪೊಲೀಸ್ ನಿರೀಕ್ಷಕ ಹನುಮರಡ್ಡೆಪ್ಪ, ಬೀದರ ಗ್ರಾಮೀಣ ವೃತ್ತದ ಪೊಲೀಸ್ ನಿರೀಕ್ಷಕ ಶ್ರೀನಿವಾಸ ಅಲ್ಲಾಪೂರೆ, ನೂತನ ನಗರ ಠಾಣೆಯ ಪೊಲೀಸ್ ನಿರೀಕ್ಷಕ ವಿಜಯಕುಮಾರ, ಚಿಟಗುಪ್ಪಾ ಸಿಪಿಐ ಮಹೇಶಗೌಡ ಪಾಟೀಲ್, ಪಿಎಸ್‌ಐ ತಸ್ಲೀಂ ಸುಲ್ತಾನಾ ಸೇರಿದಂತೆ ಇತರೆ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…