ಸುರಪುರ-ತಾಲೂಕು ಪಂಚಾಯತಿ ಸಾಮಾನ್ಯ ಸಭೆ

0
33

ಸುರಪುರ: ಇಲ್ಲಿಯ ತಾಲ್ಲೂಕ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಯಾದಗಿರಿ ಜಿ.ಪಂ ಉಪ ಕಾರ್ಯದರ್ಶಿ ಹಾಗೂ ಸುರಪುರ ತಾಪಂ ಆಡಳಿತಾಧಿಕಾರಿಗಳಾದ ಶರಣಬಸವರಾಜ್ ರವರ ಅಧ್ಯಕ್ಷತೆಯಲ್ಲಿ ತಾಲೂಕ ಪಂಚಾಯತ ಸಾಮಾನ್ಯ ಸಭೆ ನಡೆಯಿತು.

ತಾಲೂಕಿ ವಿವಿಧ ಇಲಾಖೆವಾರು ಕೈಗೊಂಡ ನಾನಾ ಅಭಿವೃದ್ಧಿ ಕಾಮಗಾರಿಗಳು ಹಾಗೂ ಸರ್ಕಾರದ ಜನಪರ ಕಾರ್ಯಕ್ರಮ, ಯೋಜನೆಗಳು ತ್ವರಿತಗತಿಯಲ್ಲಿ ಅನುಷ್ಠಾನಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳು ನೋಡಿಕೊಳ್ಳಬೇಕಿದೆ. ಮಹಾತ್ಮಗಾಂಧಿ ನರೇಗಾ ಯೋಜನೆಡಿ ಅಂಗನವಾಡಿ, ಶಾಲಾ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಬಹುದಾಗಿದೆ ಎಂದರು.ಬರಗಾಲದ ಹಿನ್ನಲೆ ಗ್ರಾಮೀಣ ಭಾಗದಲ್ಲಿ ಜನರಿಗೆ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಹಾಗೂ ವಸತಿ ನಿಲಯ, ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಿಗೆ ಗುಣಮಟ್ಟದ ಆಹಾರ ಒದಗಿಸಲು ಸಭೆಯಲ್ಲಿ ಸೂಚಿಸಿದರು.

Contact Your\'s Advertisement; 9902492681

ಈ ಸಂದರ್ಭದಲ್ಲಿ ಸುರಪುರ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿಗಳಾದ ಬಸವರಾಜ ಸಜ್ಜನ್,ಹುಣಸಗಿ ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಸ್ವಾಮಿ,ತಾಲೂಕು ಆರೋಗ್ಯಾಧಿಕಾರಿ ಡಾ:ಆರ್.ವಿ ನಾಯಕ,ಸಮಾಜ ಕಲ್ಯಾಣ ಅಧಿಕಾರಿ ಶೃತಿ,ಪರಿಶಿಷ್ಟ ಪಂಗಡ ಕಲ್ಯಾಣಾಧಿಕಾರಿ ಎಮ್.ಡಿ ಸಲೀಂ,ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ತಿಪ್ಪಾರಡ್ಡಿ ಮಾಲಿ ಪಾಟೀಲ್,ಕ್ಷೇತ್ರ ಶಿಕ್ಷಣಾಧಿಕಾರಿ ಯಲ್ಲಪ್ಪ ಕಾಡ್ಲೂರ್,ಮಹಿಳಾ ಮತ್ತು ಮಕ್ಕಳ ಅಭಿವೃಧ್ಧಿ ಇಲಾಖೆ ಮಹಿಳಾ ಮೇಲ್ವಿಚಾರಕಿ ಗುರುದೇವಿ ಹಿರೇಮಠ,ಶಾಂತಮ್ಮ, ಹಾಗೂ ತಾಲೂಕಿನ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here