ಬಾಂದು ಜವಾನರ ನೇಮಕಾತಿ ರದ್ದು ವಿರೋಧಿಸಿ ಪ್ರತಿಭಟನೆ: ಸಂಸದರಿಗೆ ಮನವಿ ಪತ್ರ ಸಲ್ಲಿಕೆ

0
76

ಕಲಬುರಗಿ: ಹೈದ್ರಾಬಾದ್ ಕರ್ನಾಟಕ ಪ್ರದೇಶಕ್ಕೆ ಜಾರಿಯಾದ ೩೭೧(ಜೆ) ಅಡಿಯಲ್ಲಿ ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆಯಲ್ಲಿ ನೇಮಕಾತಿಯಾದ ೧೫೧ ಬಾಂದು ಜವಾನರು ಹಾಗೂ ೧೦ ಕಚೇರಿ ಸಿಪಾಯಿಗಳ ನೇಮಕಾತಿಯನ್ನು ರಾಜ್ಯ ಸರ್ಕಾರವು ರದ್ದುಪಡಿಸಿದ್ದನ್ನು ವಿರೋಧಿಸಿ ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಿ ಸಂಸದ ಡಾ. ಉಮೇಶ್ ಜಾಧವ್ ಅವರ ಮೂಲಕ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.

ಈಶಾನ್ಯ ವಲಯ ಶಿಕ್ಷಕರ ವೇದಿಕೆಯ ಅಧ್ಯಕ್ಷ ಎಂ.ಬಿ. ಅಂಬಲಗಿ ಅವರು ಸಂಸದರಿಗೆ ಮನವಿ ಪತ್ರ ಸಲ್ಲಿಸಿ, ಕಳೆದ ೨೦೧೭ರ ಸೆಪ್ಟೆಂಬರ್ ೮ರಂದು ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆಯಲ್ಲಿ ನೇಮಕಾತಿ ಕುರಿತು ಅಧಿಸೂಚನೆ ಹೊರಡಿಸಲಾಗಿತ್ತು. ನೇರ ನೇಮಕಾತಿಯಾಗಿದ್ದರಿಂದ ಎಸ್‌ಎಸ್‌ಎಸ್‌ಎಲ್‌ಸಿಯಲ್ಲಿ ಅತೀ ಹೆಚ್ಚು ಅಂಕಗಳನ್ನು ಗಳಿಸಿದ್ದ ಪ್ರತಿಭಾವಂತ ವಿದ್ಯಾರ್ಥಿಗಳು ಆಯ್ಕೆಯಾಗಿದ್ದರು. ಕಳೆದ ಏಪ್ರಿಲ್‌ನಲ್ಲಿ ದಾಖಲೆಪತ್ರಗಳ ಪರಿಶೀಲನೆ ಸಹ ಆಗಿತ್ತು. ಕಳೆದ ೨೧ರಂದು ಇಲಾಖೆಯ ಆಯುಕ್ತರಿಗೆ ಈ ಕುರಿತು ಮನವಿ ಮಾಡಿದಾಗ ನೇಮಕಾತಿ ರದ್ದುಪಡಿಸಲಾಗಿದೆ ಎಂದು ಸರ್ಕಾರದ ಆದೇಶ ಪ್ರಕಟಿಸಲಾಗಿದೆ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

Contact Your\'s Advertisement; 9902492681

ನಂತರ ಈ ಕುರಿತು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ನೇಮಕಾತಿ ಪ್ರಕ್ರಿಯೆ ರದ್ದುಪಡಿಸಬಾರದು ಎಂದು ಮನವಿ ಮಾಡಿದಾಗ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಹೇಳಿದರೂ ಸಹ ಅದು ಕೇವಲ ಭರವಸೆಯಾಗಿಯೇ ಉಳಿದಿದೆ ಎಂದು ಅವರು ಆರೋಪಿಸಿದರು.

ಒಂದು ವಾರದಲ್ಲಿ ನೇಮಕಾತಿ ಪ್ರಕ್ರಿಯೆಯಲ್ಲಿ ನೇಮಕಾತಿ ಹೊಂದಿದವರಿಗೆ ಆದೇಶ ಪತ್ರ ನೀಡಬೇಕು. ಇಲ್ಲದೇ ಹೋದಲ್ಲಿ ಉಗ್ರ ಹೋರಾಟ ರೂಪಿಸಲಾಗುವುದು ಎಂದು ಅವರು ಎಚ್ಚರಿಸಿದರು. ಪ್ರತಿಭಟನೆಯಲ್ಲಿ ಹಲವಾರು ಅಭ್ಯರ್ಥಿಗಳು ಪಾಲ್ಗೊಂಡಿದ್ದರು. ಈ ಮುನ್ನ ಕನ್ನಡ ಭವನದಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಯಿತು. ಜಿಲ್ಲಾಧಿಕಾರಿಗಳು ಹಾಗೂ ಪ್ರಾದೇಶಿಕ ಆಯುಕ್ತರಿಗೂ ಸಹ ಬೇಡಿಕೆಯ ಮನವಿ ಪತ್ರವನ್ನು ಸಲ್ಲಿಸಲಾಯಿತು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here