ಕಲಬುರಗಿ; ಜಿಲ್ಲೆಯಲ್ಲಿ ಗೃಹಲಕ್ಷ್ಮೀ ಯೋಜನೆಯಡಿ ನೋಂದಣಿಯಾದ ಫಲಾನುಭವಿಗಳಿಗೆ ಖಾತೆಗೆ ಈಗಾಗಲೇ 2023ರ ಆಗಸ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಧನಸಹಾಯ ಜಮೆ ಮಾಡಲಾಗಿದ್ದು, ಸದರಿ ತಿಂಗಳಲ್ಲಿ ಧನಸಹಾಯ ಜಮೆಯಾಗದೇ ಇರುವ ಫಲಾನುಭವಿಗಳು ತಮ್ಮ ಸಮೀಪದ ಅಂಗನವಾಡಿ ಕೇಂದ್ರದ ಕಾರ್ಯಕರ್ತೆಯರನ್ನು ಅಥವಾ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಿ ಅಗತ್ಯ ದಾಖಲಾತಿಗಳನ್ನು ಒದಗಿಸಿದ್ದಲ್ಲಿ, ಧನಸಹಾಯವನ್ನು ಖಾತೆಗೆ ಜಮೆ ಮಾಡಲು ಕ್ರಮ ಜರುಗಿಸಲಾಗುತ್ತದೆ ಎಂದು ಕಲಬುರಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
ಕಲಬುರಗಿ ಜಿಲ್ಲೆಯಲ್ಲಿ ಗೃಹಲಕ್ಷ್ಮಿ ಯೋಜನೆಯಡಿ ನೋಂದಣಿಯಾಗಿರುವ ಫಲಾನುಭವಿಗಳಿಗೆ ಈಗಾಗಲೇ 2023ರ ಆಗಸ್ಟ್ ತಿಂಗಳಲ್ಲಿ ಒಟ್ಟು 464154 ಫಲಾನುಭವಿಗಳಿಗೆ ಅನುದಾನ ಬಿಡುಗಡೆಯಾಗಿದ್ದು, ಇದರಲ್ಲಿ 443405 ಫಲಾನುಭವಿಗಳ ಖಾತೆಗೆ 2000 ರೂ.ಗಳ ಧನ ಸಹಾಯವನ್ನು ಪಾವತಿಸಲಾಗಿದೆ. ಅದೇ ರೀತಿ 2023ರ ಸೆಪ್ಟೆಂಬರ್ ತಿಂಗಳಲ್ಲಿ ಒಟ್ಟು 470882 ಫಲಾನುಭವಿಗಳಿಗೆ ಅನುದಾನ ಬಿಡುಗಡೆಯಾಗಿದ್ದು, ಇದರಲ್ಲಿ 453405 ಫಲಾನುಭವಿಗಳ ಖಾತೆಗೆ ಮಾಸಿಕ ಧನಸಹಾಯವನ್ನು ಪಾವತಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…