ಕಂಪ್ಲಿ: ಇಲ್ಲಿಯ ದೇವಲಾಪುರ ಗ್ರಾಮದ ನಿವಾಸಿ ಭಾರತೀಯ ದಲಿತ ಪ್ಯಾಂಥರ್ ಸಂಘಟನೆಯ ಬಳ್ಳಾರಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ, ಮಾಜಿ ಗ್ರಾಮ ಪಂಚಾಯಿತಿ ಸದಸ್ಯ ವಕೀಲ ಶಿವ ಕುಮಾರ್ ಕೆ ಅವರಿಗೆ ನವದೆಹಲಿಯ ಭಾರತೀಯ ದಲಿತ ಸಾಹಿತ್ಯ ಅಕಾಡೆಮಿಯು 2023ನೇ ಸಾಲಿನ “ಬಾಬಾ ಸಾಹೇಬ್.ಡಾ.ಬಿ.ಆರ್.ಅಂಬೇಡ್ಕರ್ ನ್ಯಾಷನಲ್ ಫೆಲೋಶಿಪ್ ಪ್ರಶಸ್ತಿ”ಗೆ ಆಯ್ಕೆ ಮಾಡಿರುವುದಾಗಿ ತಿಳಿಸಿದ್ದಾರೆ.
ಭಾರತೀಯ ದಲಿತ ಪ್ಯಾಂಥರ್ ಸಂಘಟನೆಯ ಮುಖಾಂತರ ಬಳ್ಳಾರಿ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ ದಲಿತ ಹಿಂದುಳಿದವರ ಪರವಾಗಿ ಮತ್ತು ಸಾಮಾಜಿಕ ಸಮಸ್ಯೆಗಳ ಕುರಿತಾಗಿ ಮತ್ತು ಆರ್ಥಿಕವಾಗಿ ಹಿಂದುಳಿದ ಬಡ ಕುಟುಂಬದವರಿಗೆ ವೈಯಕ್ತಿಕ ಹಣದಲ್ಲಿ ಉಚಿತವಾಗಿ ಸಾಮೂಹಿಕ ಮದುವೆಗಳನ್ನ ನಡೆಸಿಕೊಂಡು ಬಂದಿರುವುದು ಮತ್ತು ಬಡ ಮಕ್ಕಳಿಗೆ ಉಚಿತವಾಗಿ ಶಾಲಾ ಸಮವಸ್ತ್ರಗಳು, ಶೂಗಳು, ಪಠ್ಯಪುಸ್ತಕಗಳನ್ನ ಉಚಿತವಾಗಿ ನೀಡುತ್ತಿರುವುದು ಸೇರಿದಂತೆ ಹಲವಾರು ಸಮಾಜ ಸೇವೆಗಳನ್ನ ವಕೀಲ ಶಿವ ಕುಮಾರ್ ಕೆ ರವರು ಮಾಡಿಕೊಂಡು ಬಂದಿರುವುದನ್ನು ಪರಿಗಣಿಸಿ ಸದರಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಡಿಸೆಂಬರ್ 10 ರಂದು ನವದೆಹಲಿಯಲ್ಲಿ ನಡೆಯುವ 39ನೇ ರಾಷ್ಟ್ರೀಯ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಅಕಾಡೆಮಿಯ ರಾಷ್ಟ್ರ ಅಧ್ಯಕ್ಷ ಎಸ್.ಪಿ.ಸುಮನಾಕ್ಷರ್ ಪತ್ರದ ಮೂಲಕ ತಿಳಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…