ಸುರಪುರ: ತಾಲೂಕಿನ ಮಂಗಳೂರ ಗ್ರಾಮದಲ್ಲಿ ಜನರಿಗೆ ಕುಡಿಯುವ ನೀರಿನ ತೊಂದರೆ ಎದುರಾಗಿದ್ದು ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಆರಂಭಿಸುವಂತೆ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಡಿ.ಜಿ ಸಾಗರ ಬಣದ ತಾಲೂಕು ಘಟಕದ ಮುಖಂಡರು ಒತ್ತಾಯಿಸಿದರು.
ಈ ಕುರಿತು ನಗರದಲ್ಲಿ ಹೇಳಿಕೆ ನೀಡಿರುವ ಮುಖಂಡರು ಮಾತನಾಡಿ,ಗ್ರಾಮದಲ್ಲಿನ ಜನರಿಗೆ ಕೊಳವೆ ಬಾವಿ ಮತ್ತು ಬಾವಿ ನೀರೆ ಗತಿಯಾಗಿದೆ,ಇದರಿಂದ ಜನರು ಮೂತ್ರಪಿಂಡದ ಕಾಯಿಲೆ,ಕೀಲು ನೋವಿನಂತ ಕಾಯಿಲೆಗಳಿಂದ ಬಳಲುತ್ತಿದ್ದಾರೆ.ಈಗಾಗಲೇ ನಮ್ಮ ಸಂಘಟನೆಯಿಂದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿದರು ಪ್ರಯೋಜನೆಯಾಗುತ್ತಿಲ್ಲ.
ಈಗ ಅಧಿಕಾರಿಗಳಿಗೆ ಎಚ್ಚರಿಕೆ ನೀಡುತ್ತಿದ್ದೇವೆ,ಶೀಘ್ರದಲ್ಲಿ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಆರಂಭಿಸಬೇಕು ಇಲ್ಲವಾದಲ್ಲಿ ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆ ಕಚೇರಿಗೆ ಮುಳ್ಳು ಬೇಲಿ ಹಚ್ಚಿ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದ್ದಾರೆ.
ಈ ಸಂದರ್ಭದಲ್ಲಿ ಸಂಘಟನೆಯ ತಾಲೂಕು ಸಂಚಾಲಕರಾದ ತಿಪ್ಪಣ್ಣ ಶೆಳ್ಳಗಿ,ಸಂಘಟನಾ ಸಂಚಾಲಕ ಶೇಖರ ಮಂಗಳೂರು,ಹೋಬಳಿ ಸಂಚಾಲಕ ಭೀಮರಾಯ ಮಂಗಳೂರು,ಮುಖಂಡ ಶಿವಪ್ಪ ಶೆಳ್ಳಗಿ ಸೇರಿದಂತೆ ಅನೇಕರಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…