ಚುನಾವಣೆ ಪಟ್ಟಿಯಲ್ಲಿ ಹೆಸರನ್ನು ನೊಂದಾಯಿಸಿ; ಗೋದುತಾಯಿ ಕಾಲೇಜಿನಲ್ಲಿ ಮತದಾರರ ನೊಂದಣಿ ಅಭಿಯಾನ

0
12

ಕಲಬುರಗಿ : ಯಾರು ಚುನಾವಣೆ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೊಂದಾಯಿಸಿಲ್ಲ ಅವರು ಹೆಸರನ್ನು ನೊಂದಾಯಿಸಿಕೊಳ್ಳಿ ಎಂದು ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ ತಿಳಿಸಿದರು.

ನಗರದ ಗೋದುತಾಯಿ ದೊಡ್ಡಪ್ಪ ಅಪ್ಪ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಪದವಿ ಮಹಿಳಾ ಮಹಾವಿದ್ಯಾಲಯದಲ್ಲಿ ಶನಿವಾರ ಜಿಲ್ಲಾಡಳಿತ ಹಾಗೂ ಕಲಬುರಗಿ ಮಹಾನಗರ ಪಾಲಿಕೆಯ ಸಂಯುಕ್ತಾಶ್ರಯದಲ್ಲಿ ಮತದಾರರ ವಿಶೇಷ ನೊಂದಣಿ ಅಭಿಯಾನ ಉದ್ಘಾಟಿಸಿ ಮಾತನಾಡಿದರು. ಹದಿನೆಂಟು ವರ್ಷ ಮೇಲ್ಪಟ್ಟ ಎಲ್ಲಾ ವಿದ್ಯಾರ್ಥಿಗಳು ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬೇಕು. ಚುನಾವಣಾ ಆಯೋಗವು ಪಾರದರ್ಶಕ ಚುನಾವಣೆ ನಡೆಸುತ್ತಿದೆ. ಮುಂಬರುವ ಚುನಾವಣೆಗಳಲ್ಲಿ ತಾವು ಉತ್ತಮ ಜನಪ್ರತಿನಿಧಿಯನ್ನು ಆಯ್ಕೆ ಮಾಡುವ ಹಕ್ಕು ಪಡೆದುಕೊಳ್ಳಬೇಕು ಎಂದು ಹೇಳಿದರು.

Contact Your\'s Advertisement; 9902492681

ಮಹಾನಗರ ಪಾಲಿಕೆಯ ಆಸ್ತಿ ಅಧಿಕಾರಿಗಳಾದ ಶ್ರೀಮತಿ ಸಾವಿತ್ರಿ ಸಲಗರ ಮಾತನಾಡಿ, ಯುವಕರೆ ದೇಶದ ಆಸ್ತಿ, ಮತದಾನ ಪ್ರತಿಯೊಬ್ಬರ ಜನ್ಮಸಿದ್ಧ ಹಕ್ಕಾಗಿದೆ. ಪಟ್ಟಿಯಲ್ಲಿ ಹೆಸರನ್ನು ನೊಂದಾಯಿಸಿಕೊಂಡು ತಮ್ಮ ಮತದಾನದ ಹಕ್ಕನ್ನು ಚಲಾವಣೆ ಮಾಡಬೇಕು. ಮತದಾನ ಮಾಡುವುದಕ್ಕೆ ಅಸಡ್ಡೆ ಮಾಡಬಾರದು ಎಂದು ಸಲಹೆ ನೀಡಿದರು.

ಹಿರಿಯ ಪ್ರಾಧ್ಯಾಪಕ, ರಾಷ್ಟ್ರೀಯ ಚುನಾವಣಾ ತರಬೇತಿದಾರರಾದ ಡಾ.ಶಶಿಶೇಕರ ರೆಡ್ಡಿ ಮತದಾನ ಪಟ್ಟಿಯಲ್ಲಿ ಹೆಸರನ್ನು ಹೇಗೆ ನೊಂದಾಯಿಸಿಕೊಳ್ಳಬೇಕು ಎಂಬುವದರ ಕುರಿತು ಉಪನ್ಯಾಸ ನೀಡಿದರು.

ಕಾರ್ಯಕ್ರಮದಲ್ಲಿ ಮಹಾನಗರ ಪಾಲಿಕೆಯ ಅಧಿಕಾರಿ ಕೆ.ಎಸ್.ಪಾಟೀಲ, ಮಹಾವಿದ್ಯಾಲಯದ ಪ್ರಾಚಾರ್ಯೆ ಶ್ರೀಮತಿ ಜಾನಕಿ ಹೊಸೂರ, ಐಕ್ಯೂಎಸಿ ಸಂಯೋಜಕಿ ಡಾ.ಪುಟ್ಟಮಣಿ ದೇವಿದಾಸ ಇದ್ದರು. ಕೃಪಾಸಾಗರ ಗೊಬ್ಬುರ ಸ್ವಾಗತ, ವಂದನಾರ್ಪಣೆ ಮತ್ತು ನಿರೂಪಿಸಿದರು. ಕು.ಸುಶ್ಮೀತಾ, ಕು.ಕನ್ಯಾಕುಮಾರಿ ಪ್ರಾರ್ಥಿಸಿದರು. ಮಹಾವಿದ್ಯಾಲಯದ ಶಿಕ್ಷಕ, ಶಿಕ್ಷಕೇತರರು ಮತ್ತು ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here