ಬಿಸಿ ಬಿಸಿ ಸುದ್ದಿ

ಟೀಮ್ ಇಂಡಿಯಾ ಗೆದ್ದರೆ ವಿಶೇಷ ಪೂಜೆ: ಜಗದೇವ ಕುಂಬಾರ

ಚಿತ್ತಾಪುರ: ನ,19 ಭಾನುವಾರ ವಿಶ್ವದ ಅತಿದೊಡ್ಡ ಕ್ರಿಕೆಟ್‌ ಮೈದಾನವಾದ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಮಧ್ಯಾಹ್ನ ನಡೆಯಲಿರುವ ಕ್ರಿಕೆಟ್ ವಿಶ್ವಕಪ್ ಫೈನಲ್‌ ಪಂದ್ಯದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಲಿವೆ ಈ ಪಂದ್ಯದಲ್ಲಿ ಭಾರತ ಗೆಲುವು ಸಾಧಿಸಿದರೆ ಭಕ್ತರ ಇಷ್ಟಾರ್ಥಗಳನ್ನು ಈಡೇರಿಸುವ ಸುಪ್ರಸಿದ್ಧ ನಾಗಾವಿ ಯಲ್ಲಮ್ಮ ದೇವತೆಯಲ್ಲಿ ವಿಶೇಷ ಪೂಜೆ ಸಲ್ಲಿಸುವುದಾಗಿ ರಾಜ್ಯ ಕುಂಬಾರರ ಯುವ ಸೈನ್ಯ ಸಂಸ್ಥಾಪಕ ರಾಜ್ಯಾಧ್ಯಕ್ಷ ಹಾಗೂ ಕುಂಬಾರರ ಅಭಿವೃದ್ಧಿ ನಿಗಮ ಮಂಡಳಿಯ ಅಧ್ಯಕ್ಷ ಸ್ಥಾನದ ಪ್ರಬಲ ಆಕಾಂಕ್ಷಿ ಮತ್ತು ಕ್ರಿಕೆಟ್ ಅಭಿಮಾನಿ ಜಗದೇವ ಕುಂಬಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದೆ 2011ರಲ್ಲಿ ಕ್ರಿಕೆಟ್ ವಿಶ್ವಕಪ್ ಗೆದ್ದಿತ್ತು ನಂತರ ರಾಹುಲ್ ದ್ರಾವಿಡ್ ನಾಯಕತ್ವದಲ್ಲಿ ವಿಶ್ವಕಪ್ ಗೆಲ್ಲಲು ಅಸಾಧ್ಯವಾಯಿತು. ಈಗ ರಾಹುಲ್ ದ್ರಾವಿಡ್ ಅವರ ಮಾರ್ಗದರ್ಶನದಲ್ಲಿ (ಕೋಚ್) ರೋಹಿತ್ ಶರ್ಮಾ ನಾಯಕತ್ವದಲ್ಲಿ ಇಂದು ನಡೆಯಲಿರುವ ಕ್ರಿಕೆಟ್ ವಿಶ್ವಕಪ್ ಪಂದ್ಯ ಗೆಲ್ಲಬೇಕಾಗಿದೆ. ಈಗಾಗಲೇ ಸತತವಾಗಿ 10 ಪಂದ್ಯಗಳನ್ನು ಗೆದ್ದಿರುವ ಭಾರತ ಇವತ್ತಿನ 11ನೆಯ ಪಂದ್ಯ ಗೆದ್ದು ವಿಶ್ವಕಪ್ ತನ್ನದಾಗಿಸಿಕೊಳ್ಳುವ ಮೂಲಕ ಭಾರತದ ಅಸಂಖ್ಯಾತ ಅಭಿಮಾನಿಗಳಿಗೆ ಹರ್ಷವನ್ನು ತಂದು ಕೊಡಲಿ ನಮ್ಮ ಭಾರತ ದೇಶದ ಕ್ರೀಡೆಯಲ್ಲಿ ಹೀಗೆ ಉನ್ನತ ಮಟ್ಟದಲ್ಲಿ ಹೆಸರು ಮಾಡಲಿ ಎಂದು ದೇವರಲ್ಲಿ ಪ್ರಾರ್ಥಿಸುವೆ ಎಂದರು.

ಈ ಬಾರಿ ನಡೆಯುತ್ತಿರುವ ವಿಶ್ವಕಪ್ ನಲ್ಲಿ ಭಾರತ ತಂಡದ ಪ್ರತಿಯೊಬ್ಬ ಆಟಗಾರರು ಸಹ ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಹೀಗಾಗಿ ಭಾರತ ಗೆದ್ದೇ ಗೆಲ್ಲುತ್ತದೆ ಎಂಬ ವಿಶ್ವಾಸ ನನಗಿದೆ. ಜೂತೆಗೆ ರಾಜ್ಯ ಸರ್ಕಾರದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಜೀ ಸರ್ ಅವರು ಇವತ್ತು ನಡೆಯಲಿರುವ ಕ್ರಿಕೆಟ್ ವಿಶ್ವಕಪ್ ಪದ್ಯವನ್ನು ರಾಜ್ಯದ ಪ್ರತಿ ಜಿಲ್ಲೆಯ ಕ್ರೀಡಾಂಗಣದಲ್ಲಿ ದೊಡ್ಡ ಪರದೆಯಲ್ಲಿ ಕ್ರಿಕೆಟ್ ಅಭಿಮಾನಿಗಳು ಪಂದ್ಯವನ್ನು ವೀಕ್ಷಿಸಲು ಆದೇಶ ಮಾಡಿರುವುದು ಕ್ರಿಕೆಟ್ ಅಭಿಮಾನಿಗಳಿಗೆ ಹರ್ಷವನ್ನು ಉಂಟು ಮಾಡಿದೆ ಇದರ ಜೊತೆಗೆ ಮುಖ್ಯಮಂತ್ರಿಗಳಿಗೆ ಅಭಿನಂದನೆಗಳನ್ನು ಸಲ್ಲಿಸುವುದಾಗಿ ತಿಳಿಸಿದ್ದಾರೆ.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

17 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

1 day ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

1 day ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

1 day ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago