ಕಲಬುರಗಿ: ಶಾಲಾ ಬಿಸಿಯೂಟದ ಸಾಂಬಾರ್ ಪಾತ್ರೆಯಲ್ಲಿ ಬಿದ್ದ ವಿದ್ಯಾರ್ಥಿನಿ ಸಾವು

0
355

ಕಲಬುರಗಿ: ಬಿಸಿಯೂಟದ ಸಾಂಬಾರ್ ಪಾತ್ರೆಯಲ್ಲಿ ಬಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೇ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಇಂದು ನಸುಕಿನ ಜಾವ ಮೃತಪಟ್ಟ ಘಟನೆ ನಡೆದಿದೆ.

ಅಫಜಲಪುರ ತಾಲೂಕಿನ ಚಿಣಮಗೇರ ಗ್ರಾಮದ 2 ನೇ ತರಗತಿ ಓದುತ್ತಿದ್ದ ಮಹಾಂತಮ್ಮ (8) ಮೃತಪಟ್ಟ ಬಾಲಕಿ. ನ 16 ರಂದು ಚಿಣಮಗೇರ ಗ್ರಾಮದಲ್ಲಿರುವ ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ಸಾಂಬಾರ್ ಪಾತ್ರೆಯಲ್ಲಿ ವಿದ್ಯಾರ್ಥಿನಿ ಬಿದ್ದು ತೀರ್ವ ಗಾಯಗೊಂಡಿದಳು, ಚಿಕಿತ್ಸೆಗಾಗಿ ಕಲಬುರಗಿ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಬಸವೇಶ್ವರ ಆಸ್ಪತ್ರೆಗೆ ದಾಖಲಿಸಿದರು. ನಿನ್ನೆಯಷ್ಟೇ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.

Contact Your\'s Advertisement; 9902492681

ಇಂದು ಬೆಳಿಗ್ಗಿನ ಜಾವ ಚಿಕಿತ್ಸೆ ಫಲಕಾರಿಯಾಗದ ಹಿನ್ನೆಯಲ್ಲಿ ವಿದ್ಯಾರ್ಥಿನಿ ಮಟ್ಟಪಟಿದ್ದಾಳೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯ ಶಿಕ್ಷಕಿ, ಸಹ ಶಿಕ್ಷಕ ಹಾಗೂ ಅಡುಗೆ ಮುಖಸ್ಥರನ್ನ ಅಮಾನತು ಮಾಡಲಾಗಿತ್ತು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here