ಬಿಸಿ ಬಿಸಿ ಸುದ್ದಿ

ಕಲಬುರಗಿ ಕಸಾಪದಿಂದ `ತಿಂಗಳ ಅತಿಥಿ’ ಕಾರ್ಯಕ್ರಮ

ಕಲಬುರಗಿ: ಅನ್ನ ಕೊಡುವ ರೈತ, ದೇಶ ಕಾಯುವ ಸೈನಿಕ ಇವರಿಬ್ಬರೂ ನಮ್ಮ ದೇಶದ ಬೆನ್ನೆಲುಬು ಆಗಿದ್ದಾರೆ ಎಂದು ಕೃಷಿ ಕ್ಷೇತ್ರದ ಸಾಧಕಿ ಕವಿತಾ ಮಿಶ್ರಾ ಕವಿತಾಳ ಅವರು ಹೇಳಿದರು.

ನಗರದ ಕನ್ನಡ ಭವನದ ಸುವರ್ಣ ಸಭಾ ಭವನದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಸೋಮವಾರ ಏರ್ಪಡಿಸಿದ `ತಿಂಗಳ ಅತಿಥಿ’ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ನಮ್ಮ ದೇಶದಲ್ಲಿ ಕೃಷಿ ಕಾಯಕ ಮಾಡುವ ರೈತ ಇಲ್ಲದಿದ್ದರೇ ಇಡೀ ದೇಶದ ಜನರು ಉಪವಾಸದಿಂದ ಮಲಗಬೇಕಾಗುತ್ತದೆ. ಕೊರೊನಾದಿಂದ ಇಡೀ ದೇಶವೇ ತಲ್ಲಣಗೊಂಡಿದ್ದ ಸಂದರ್ಭದಲ್ಲಿ ಅನ್ನ ಕೊಟ್ಟು ಜನರನ್ನು ಬದುಕಿಸಿದ್ದು ನಮ್ಮ ರೈತ ಎಂಬುದು ನಾವು ಎಂದಿಗೂ ಮರೆಯುವಂತಿಲ್ಲ. ರೈತರ ಸಮಸ್ಯೆ ಮತ್ತು ಸವಾಲುಗಳ ಕುರಿತು ಪರಿಷತ್ ವತಿಯಿಂದ ಚಿಂತನೆ ಮಾಡುವ ನಿಟ್ಟಿನಲ್ಲಿ ಕೃಷಿ ಸಮ್ಮೇಳನ ಆಯೋಜಿಸಲು ನಿರ್ಧರಿಸಿರುವ ಕಾರ್ಯ ಶ್ಲಾಘನೀಯ ಎಂದರು.

ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಮಾತನಾಡಿ, ದೇಶಕ್ಕೆ ಅನ್ನದಾತನಾಗಿರುವ ರೈತ ನಮಗೆಲ್ಲರಿಗೂ ನಿಜವಾದ ದೇವರು. ಅಂಥ ದೇವರಂಥನಾಗಿರುವ ರೈತನು ಅನೇಕ ಕಾರಣಗಳಿಂದ ಸಂಕಷ್ಟದಲ್ಲಿದ್ದಾನೆ. ದೇಶದ ನಿಜವಾದ ಯೋಧರಾದ ಯೋಧ ಮತ್ತು ರೈತರಿಂದಲೇ ನಾವುಗಳು ನೆಮ್ಮದಿಯ ಜೀವನ ಸಾಗಿಸುತ್ತಿದ್ದೇವೆ. ಅಂಥ ರೈತರ ಬಗ್ಗೆನೂ ಕಾಳಜಿಯನ್ನಿಟ್ಟುಕೊಂಡು ಜಿಲ್ಲಾ ಕಸಾಪ ದಿಂದ ಮುಂದಿನ ದಿನಗಳಲ್ಲಿ ಯುವಕರ ದೃಷ್ಟಿಯನ್ನಿಟ್ಟುಕೊಂಡು ಒಂದು ದಿನದ ಕೃಷಿ ಸಮ್ಮೇಳನವೊಂದನ್ನು ಆಯೋಜಿಸಲು ಚಿಂತನೆ ನಡೆದಿದೆ ಎಂದು ಹೇಳಿದರು.

ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ಶಿವರಾಜ ಅಂಡಗಿ, ಕೋಶಾಧ್ಯಕ್ಷ ಶರಣರಾಜ್ ಛಪ್ಪರಬಂದಿ, ಪ್ರಮುಖರಾದ ಕಲ್ಯಾಣಕುಮಾರ ಶೀಲವಂತ, ಶಿಲ್ಪಾ ಜೋಶಿ, ರಾಜೇಂದ್ರ ಮಾಡಬೂಳ, ಬಾಬುರಾವ ಪಾಟೀಲ, ವಿಶ್ವನಾಥ ಸುಲೇಪೇಟ್, ಪ್ರಭವ ಪಟ್ಟಣಕರ್, ರೇವಣಸಿದ್ದಪ್ಪ ಜೀವಣಗಿ, ಗುರುಬಸಪ್ಪ ಸಜ್ಜನಶೆಟ್ಟಿ, ಶ್ರೀಕಾಂತ ಪಾಟೀಲ ದಿಕ್ಸಂಗಿ, ಬಿ ಎಂ ಪಾಟೀಲ ಕಲ್ಲೂರ, ನಾಗನ್ನಾಥ ಯಳಸಂಗಿ, ಸಂತೋಷ ಕುಡಳ್ಳಿ, ಬಸ್ವಂತರಾಯ ಕೋಳಕೂರ, ಶಿವಶರಣ ಹಡಪದ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

16 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

18 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

1 day ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

1 day ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago