ಚಿತ್ತಾಪುರ: ರಾಜ್ಯ ಕುಂಬಾರ ಸಮಾಜದ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ಚಿತ್ತಾಪುರ ಮತಕ್ಷೇತ್ರದ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು ಮತ್ತು ಚಿತ್ತಾಪುರ ತಾಲೂಕಿನ ಕುಂಬಾರ ಸಮಾಜದ ತಾಲೂಕಿನಾಧ್ಯಕ್ಷರು – ಪ್ರಭು ಕುಂಬಾರ ಬೆಣ್ಣೂರ (ಬಿ) ಅವರಿಗೆ ನೇಮಕ ಮಾಡಿ ಎಂದು ಪಕ್ಷದ ವರಿಷ್ಠರಿಗೆ ಚಿತ್ತಾಪುರ ತಾಲೂಕಿನ ಕುಂಬಾರ ಸಮಾಜದ ಪ್ರಧಾನ ಕಾರ್ಯದರ್ಶಿಗಳಾದ ಶರಣಬಸಪ್ಪ ಕುಂಬಾರ ಡೋಣಗಾಂವ್ ಅವರು ಈ ಪತ್ರಿಕೆಯ ಮೂಲಕ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಮಾರು 35 ವರ್ಷಗಳಿಂದ ನಿರಂತರವಾಗಿ ಚಿತ್ತಾಪುರ ಮತಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಸಂಘಟನೆ ಹಾಗೂ ಪ್ರಿಯಾಂಕ್ ಖರ್ಗೆ ಅವರ ಬೆಂಬಲಿಗರಾಗಿ ಗುರುತಿಸಿಕೊಂಡಿರುವ ಇವರು ಪಕ್ಷದ ಒಬ್ಬ ನಿಷ್ಠಾವಂತ ಕಾರ್ಯಕರ್ತರಾಗಿ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯ ಗೆಲುವಿಗೆ ಶ್ರಮಿಸಿದ್ದಾರೆ. ಅಲ್ಲದೇ ಚಿತ್ತಾಪುರ ಮತಕ್ಷೇತ್ರ ಮಾತ್ರವಲ್ಲದೆ ಜಿಲ್ಲೆಯ ಎಲ್ಲಾ ಮತಕ್ಷೇತ್ರಗಳಲ್ಲೂ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕುವಂತೆ ಮತಯಾಚನೆ ಮಾಡಿದ್ದಾರೆ.
ಹೀಗಾಗಿ ಸಾಮಾನ್ಯ ಕಾರ್ಯಕರ್ತರಾಗಿರುವ ಇವರನ್ನು ಎಐಸಿಸಿ ಅಧ್ಯಕ್ಷ ಡಾ.ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ, ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಗುರುತಿಸಿ ಇವರನ್ನು ಆದಷ್ಟು ಬೇಗ ಕುಂಬಾರ ಸಮಾಜದ ನಿಗಮದ ಅಧ್ಯಕ್ಷರನ್ನಾಗಿ ನೇಮಕ ಮಾಡುವ ಮೂಲಕ ಸಾಮಾಜಿಕ ನ್ಯಾಯ ಒದಗಿಸಬೇಕೆಂದು ಎಂದು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…