ಬಿಸಿ ಬಿಸಿ ಸುದ್ದಿ

ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ರಕ್ಷಣಾ

ಕಲಬುರಗಿ; “PAN-INDIA Rescue And  Rehabilitation Campaign” ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ರಕ್ಷಣಾ ಕಾರ್ಯಾಚರಣೆ ಮತ್ತು ಜಾಗೃತಿ ಅಭಿಯಾನ ಕಾರ್ಯಕ್ರಮಕ್ಕೆ ಕಲಬುರಗಿಯ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಶ್ರೀನಿವಾಸ ನವಲೆ ಅವರು ಕಲಬುರಗಿ ನಗರದ ಡಾ. ಎಸ್.ಎಂ. ಪಂಡಿತ ರಂಗಮಂದಿರದ ಮುಂಭಾಗದಲ್ಲಿ ಹೊಸದಾಗಿ ನಿರ್ಮಿಸಲಾಗುತ್ತಿರುವ ಜಯದೇವ ಹೃದ್ರೋಗ ಆಸ್ಪತ್ರೆಯ ಕಟ್ಟಡದ ಆವರಣದಲ್ಲಿ ಸೋಮವಾರ ಚಾಲನೆ ನೀಡಿದರು.

ನಂತರ ಅವರು ಮಾತನಾಡಿ, ಬಾಲ ಹಾಗೂ ಕಿಶೋರ ಕಾರ್ಮಿಕ ಮಕ್ಕಳ ದುಡಿಮೆಯನ್ನು ನಿಯಂತ್ರಿಸಲು ಹಾಗೂ ನಿಷೇಧಿಸಲು ಬಾಲ್ಯಾವಸ್ಥೆ ಮತ್ತು ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986 ತಿದ್ದುಪಡಿ 2016 ರನ್ನು ಜಾರಿಗೆ ತರಲಾಗಿದೆ. ಸದರಿ ಕಾಯ್ದೆಯನ್ವಯ ಎಲ್ಲಾ ಉದ್ಯೋಗ ಮತ್ತು ಪ್ರಕ್ರಿಯೆಗಳಲ್ಲಿ 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಕೆಲಸಕ್ಕೆ ನಿಯೋಜಿಸಿಕೊಳ್ಳುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. 14 ರಿಂದ 18ರ ವಯಸ್ಸಿನ ಕಿಶೋರ ಕಾರ್ಮಿಕ ಮಕ್ಕಳನ್ನು ಅಪಾಯಕಾರಿ ಉದ್ದಿಮೆಗಳಲ್ಲಿ ಕೆಲಸಕ್ಕೆ ನಿಯೋಜಿಸಿಕೊಳ್ಳುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಪ್ರಸ್ತಾವಿಕವಾಗಿ ಮಾತನಾಡಿದ ಕಲಬುರಗಿ ಪ್ರಾದೇಶಿಕ ಉಪಕಾರ್ಮಿಕ ಆಯುಕ್ತರಾದ ವೆಂಕಟೇಶ. ಎ. ಶಿಂಧಿಹಟ್ಟಿ ಅವರು, ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ನವದೆಹಲಿ, ಇವರು ರಾಜ್ಯ ಮತ್ತು ಜಿಲ್ಲೆಗಳಲ್ಲಿ ಕೆಲಸದಲ್ಲಿ ತೊಡಗಿರುವ ಬಾಲ ಮತ್ತು ಕಿಶೋರ ಕಾರ್ಮಿಕರನ್ನು ರಕ್ಷಸಿ, ಪುನರ್ವಸತಿ ಕಲ್ಪಿಸಿ ಅವರಿಗೆ ಶಿಕ್ಷಣ ಮುಂದುವರಿಕೆಗೆ ಅವಕಾಶ ಮಾಡಿಕೂಡುವುದು ಈ “Pಂಓ-IಓಆIಂ ಖesಛಿue ಂಟಿಜ ಖehಚಿbiಟiಣಚಿಣioಟಿ ಅಚಿmಠಿಚಿigಟಿ” ಉದ್ದೇಶವಾಗಿದೆ. ಇದರ ಪ್ರಯುಕ್ತ ಕಲಬುರಗಿ ಜಿಲ್ಲೆಯಾದ್ಯಂತ ನವೆಂಬರ್ 20 ರಿಂದ ಡಿಸೆಂಬರ್ 10 ರವರೆಗೆ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳು, ಗ್ಯಾರೇಜು, ಧಾಬಾ, ಹೋಟೆಲ್, ಕಾರ್ಖಾನೆ ಮತ್ತು ಮೈನ್ಸ, ಇಟ್ಟಿಗೆ ಭಟ್ಟಿ ಮತ್ತು ಕಟ್ಟಡ ನಿರ್ಮಾಣ ನಡೆಯುತ್ತಿರುವ ಸ್ಥಳಗಳಲ್ಲಿ ಕಾರ್ಯಾಚರಣೆ ಕೈಗೊಳ್ಳಲಾಗುತ್ತಿದ್ದು, ಯಾವುದೇ ಕಾರಣಕ್ಕೂ 18 ವರ್ಷದ ಒಳಗಿನ ಮಕ್ಕಳನ್ನು ಕೆಲಸಕ್ಕೆ ಬಳಸಿಕೊಳ್ಳಬಾರದು, ಒಂದು ವೇಳೆ ಕೆಲಸಕ್ಕೆ ನೇಮಿಸಿದ್ದÀಲ್ಲಿ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986 ತಿದ್ದುಪಡಿ 2016ರ ಅನ್ವಯ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಸಹಾಯಕ ಕಾರ್ಮಿಕ ಆಯುಕ್ತರು ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸ್ಶೆಟಿಯ ಸದಸ್ಯ ಕಾರ್ಯದರ್ಶಿಗಳಾದ ಅವಿನಾಶ ನಾಯ್ಕ ಅವರು ಮಾತನಾಡಿ, ಮಾಲೀಕರಿಗೆ 6 ತಿಂಗಳಿಂದ 2 ವರ್ಷಗಳ ವರೆಗೆ ಜೈಲು ಶಿಕ್ಷೆ ಅಥವಾ 20,000/- ರಿಂದ 50,000 ರೂ. ಗಳÀ ವರೆಗೆ ದಂಡ ಅಥವಾ ಎರಡನ್ನೂ ವಿಧಿಸಲು ಅವಕಾಶವಿರುತ್ತದೆ. ಗೌರವಾನ್ವಿತ ಭಾರತದ ಸವೋಚ್ಛ ನ್ಯಾಯಾಲಯವು ರೀಟ್ ಅರ್ಜಿ (ಸಿವಿಲ್) ಸಂಖ್ಯೆ 465/1986 ರಲ್ಲಿ ನೀಡಿರುವ ನಿರ್ದೇಶನದ್ವಯ ತಪ್ಪಿತಸ್ಥ ಮಾಲೀಕರು ತಾವು ನಿಯೋಜನೆಗೊಂಡ ಪ್ರತಿ ಮಗುವಿಗೆ 20,000 ರೂ. ಗಳ ಪರಿಹಾರವನ್ನು ಮಕ್ಕಳ ಪುನರ್ವಸತಿಗೆ ರಚಿಸಲಾದ ಕಲ್ಯಾಣ ನಿಧಿಗೆ ಪಾವತಿಸಬೇಕಾಗಿರುತ್ತದೆಂದು ತಿಳಿಸಿದರು.

ಈ ಸಂದರ್ಭದಲ್ಲಿ ಹರ್ಷ ಕನ್ಸ್‍ಸ್ಟ್ರಕ್ಷನ್ ಹಿರಿಯ ಪ್ರಭಂದಕ ಮಹೇಂದ್ರಾ ಬಿ. ಬಿರಾರಿ, ಲೈಸನಿಂಗ್ ಅಧಿಕಾರಿ ಡಾ.ಬಾಬುರಾವ ಹುಡಗಿಕರ, ಜೆ.ಇ. ಯವರಾದ ಶ್ರೀಪಾದ ಅರ್ಶೀಥ, ಜಯದೇವ ಹೃದ್ರೋಗÀ ಆಸ್ಪತ್ರೆಯ ಶಿವಮೂರ್ತಿ, ಹಿರಿಯ ಕಾರ್ಮಿಕ ನಿರೀಕ್ಷಕರಾದ ಶ್ರೀ ಕೆ.ಎಸ. ಪ್ರಸನ್ನ, ಶ್ರೀಮತಿ ಕವಿತಾ, ಕಾರ್ಮಿಕ ನಿರೀಕ್ಷಕರಾದ ಪರಶುರಾಮ ಸುಲ್ತಾನಪೂರ, ಶಿವರಾಜ ಪಾಟೀಲ್ ಸಿಬ್ಬಂದಿಗಳು ಮತ್ತು ಕಾರ್ಮಿಕರು ಹಾಜರಿದ್ದರು, ಕಲಬುರಗಿ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಯೋಜನಾ ನಿರ್ದೇಶಕರಾದ ಸಂತೋಷ ಕುಲಕರ್ಣಿ ಅವರು ಕಾರ್ಯಕ್ರಮ ನಿರೂಪಿಸಿದರು. ಹಿರಿಯ ಕಾರ್ಮಿಕ ನಿರೀಕ್ಷಕ ರವೀಂದ್ರಕುಮಾರ ಬಲ್ಲೂರ್ ವಂದಿಸಿದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

2 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

12 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

12 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

12 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago