ಬಿಸಿ ಬಿಸಿ ಸುದ್ದಿ

ರಾಷ್ಟ್ರದ ಅಭಿವೃದ್ಧಿಗೆ ಸಹಕಾರಿ ಸಂಸ್ಥೆಗಳ ಕೊಡುಗೆ ಅನನ್ಯ

ಕಲಬುರಗಿ: ರಾಷ್ಟ್ರದ ಅನೇಕ ಜನಸಾಮಾನ್ಯರ ಆರ್ಥಿಕ ಜೀವನದ ಸುಗಮ ನಿರ್ವಹಣೆಗೆ ಸಾಕಷ್ಟು ಸಹಾಯಕರವಾಗಿ ಸಹಕಾರಿ ಸಂಸ್ಥೆಗಳು ಸೇವೆ ಸಲ್ಲಿಸುತ್ತಿವೆ. ಸಾಲಗಾರರು ಸೂಕ್ತ ಸಮಯಕ್ಕೆ ಸಾಲ ಮರುಪಾವತಿ ಮಾಡುವ ಮೂಲಕ ತಾವು ಜೊತೆಗೆ ಸಂಸ್ಥೆಯ ಬೆಳವಣಿಗೆ ಸಾಧ್ಯವಾಗುತ್ತದೆ. ರಾಷ್ಟ್ರದ ಅಭಿವೃದ್ಧಿಗೆ ಸಹಕಾರಿ ಸಂಸ್ಥೆಗಳ ಕೊಡುಗೆ ಅನನ್ಯವಾಗಿದೆ ಎಂದು ರಾಷ್ಟ್ರೀಯ ಸಹಕಾರ ಒಕ್ಕೂಟದ ಜಿಲ್ಲಾ ಯೋಜನಾಧಿಕಾರಿ ರಾಮಚಂದ್ರ ಕಾರಭೋಸಗಾ ಅಭಿಮತ ವ್ಯಕ್ತಪಡಿಸಿದರು.

ನಗರದ ಶಹಾಬಜಾರದಲ್ಲಿರುವ ‘ಶ್ರೀ ಚನ್ನಮಲ್ಲೇಶ್ವರ ಪತ್ತಿನ ಸಹಕಾರ ಸಂಘ’ದಲ್ಲಿ ‘ಬಸವೇಶ್ವರ ಸಮಾಜ ಸೇವಾ ಬಳಗ’ದ ಸಹಯೋಗದೊಂದಿಗೆ ಸೋಮವಾರ ಸಂಜೆ ಜರುಗಿದ ‘70ನೇ ಅಖಿಲ ಭಾರತ ಸಹಕಾರ ಸಪ್ತಾಹ’ದ ಸಮಾರೋಪ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಸಹಕಾರಿ ಸಂಸ್ಥೆಗಳ ಮಹತ್ವದ ಬಗ್ಗೆ ವ್ಯಾಪಕವಾದ ಜನಜಾಗೃತಿ ಮೂಡಬೇಕು. ರೈತರು, ಜನಸಾಮಾನ್ಯರಿಗೆ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ಸಾಲವನ್ನು ನೀಡುತ್ತವೆ. ಅದರ ಸದುಪಯೋಗವನ್ನು ಪಡೆದುಕೊಳ್ಳಬೇಕು. ಈ ಕೇತ್ರವನ್ನು ರಾಜಕೀಯ ಮುಕ್ತವಾಗಿ ಬೆಳೆಸಿದರೆ, ಇನ್ನೂ ಹೆಚ್ಚಿನ ಜನರಿಗೆ ಅನಕೂಲವಾಗಲು ಸಾಧ್ಯವಾಗುತ್ತದೆ. ಸಹಕಾರ ಸಂಘಗಳು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಬೇಕು. ಸರ್ಕಾರದ ವಿವಿಧ ಯೋಜನೆಗಳನ್ನು ಸದುಪಯೋಗಮಾಡಿಕೊಳ್ಳಬೇಕು ಎಂದು ಸಹಕಾರ ಕ್ಷೇತ್ರದ ಬಗ್ಗೆ ಸುದೀರ್ಘವಾಗಿ ವಿವರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ‘ಶ್ರೀ ಚನ್ನಮಲ್ಲೇಶ್ವರ ಪತ್ತಿನ ಸಹಕಾರ ಸಂಘ’ದ ಅಧ್ಯಕ್ಷ ಪರಮೇಶ್ವರ ಎಸ್.ಮುನ್ನಳ್ಳಿ ಮಾತನಾಡಿ, ನಮ್ಮ ಸಂಸ್ಥೆಯ ಸದಸ್ಯರು, ನಿರ್ದೇಶಕರು, ಸಿಬ್ಬಂದಿ ಎಲ್ಲರು ಒಟ್ಟಾಗಿ ಸಹಕಾರ ತತ್ವದಡಿಯಲ್ಲಿ ಕಾರ್ಯನಿರ್ವಹಿಸುತ್ತೆದ್ದೇವೆ. ಅದಕ್ಕಾಗಿ ನಮ್ಮ ಸಂಸ್ಥೆ ಇಂದು ಬ್ಯಾಂಕ್ ರೂಪದಲ್ಲಿ ಬೃಹತ ಪ್ರಮಾಣದಲ್ಲಿ ಅಭಿವೃದ್ಧಿ ಹೊಂದಿದೆ. ಯಾವುದೇ ಸಹಕಾರಿ ಸಂಸ್ಥೆ ಬೆಳವಣಿಗೆಯಾಗಬೇಕಾದರೆ, ಪಡೆದ ಸಾಲವನ್ನು ಸೂಕ್ತ ಕಾಲಕ್ಕೆ ಮರುಪಾವತಿ ಮಾಡಬೇಕು.ಇದರಿಂದ ಸಾಲ ನೀಡಿಕೆ ಪ್ರಮಾಣ ಹೆಚ್ಚಾಗಿ ಮತ್ತಷ್ಟು ಜನರಿಗೆ ಆರ್ಥಿಕ ಸಹಾಯಕ್ಕೆ ಅನಕೂಲವಾಗುತ್ತದೆ. ಪರಸ್ಪರ ವಿಶ್ವಾಸ ಉಳಿದರೆ ಮಾತ್ರ, ಸಹಕಾರ ತತ್ವ ಯಶಸ್ವಿಯಾಗಲು ಸಾಧ್ಯವಾಗುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಬಳಗದ ಅಧ್ಯಕ್ಷ, ಅರ್ಥಶಾಸ್ತ್ರ ಉಪನ್ಯಾಸಕ ಎಚ್.ಬಿ.ಪಾಟೀಲ, ನಿವೃತ್ತ ಕೃಷಿ ಅಧಿಕಾರಿ ಶಿವಯೋಗಪ್ಪ ಬಿರಾದಾರ, ಪತ್ತಿನ ಸಂಘದ ಉಪಾಧ್ಯಕ್ಷ ಸಂತೋಷ ಕೆ.ಡೋಣಿ, ನಿರ್ದೇಶಕರುಗಳಾದ ಬವರಾಜ ಎಸ್.ಮಲಕೂಡ, ಸಿದ್ರಾಮಪ್ಪ ಎಚ್.ಹೊದಲೂರ, ಶಿವಶಂಕರ ಎಲ್.ಜಾಧವ, ಚನ್ನವೀರಪ್ಪ ವಿ.ಪಾಟೀಲ, ಪ್ರಭುಲಿಂಗ ಜಿ.ಗೊಬ್ಬುರ, ವೀರೇಶ ಎಸ್.ಶೀಲವಂತ, ಶರಣಪ್ಪ ಸಿ.ದೇಗಾಂವ, ಹಣಮಂತ ಎ.ಎಕ್‍ಮೈಕರ್, ಲಲಿತಾಬಾಯಿ ಎಸ್.ಅಲ್ಲದ, ಶಕುಂತಲಾ ಬಿ.ಸೊಸಟ್ಟಿ, ಗುರುಲಿಂಗಪ್ಪ ಡಿ.ಹಾದಿಮನಿ, ಸಿಬ್ಬಂದಿಗಳಾದ ಮಹೇಂದ್ರ ಎಂ.ಚಿನಮಳ್ಳಿ, ಪ್ರಭುಶೆಟ್ಟಿ ಎಸ್.ಬಂಗೂರ, ನಾಗವೇಣಿ ಎಂ.ಹೀಚಗೆ, ಅಶ್ವಿನಿ ಎಸ್.ಯಳವಂತಗಿ, ಪ್ರೇಮಿಲಾ ಜೆ.ಕೊಡದ, ಮಹಾದೇವಿ ಎಸ್.ಚೇಲೆ, ನಿತ್ಯನಿಧಿ ಸಂಗ್ರಹಕಾರರಾದ ಶ್ರೀಮಂತ ಡಿ.ಹಿರೇಗೌಡ, ದೀಪಕ ಪಿ.ರೇವುರೆ, ಸಂತೋಷ ಪಿ.ಮುನ್ನಳ್ಳಿ ಸೇರಿದಂತೆ ಇನ್ನಿತರರು ಭಾಗವಹಿಸಿದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

19 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

1 day ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

1 day ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

1 day ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago