ಬಿಸಿ ಬಿಸಿ ಸುದ್ದಿ

ಪಟ್ಟಣ ನಾಡ ಕಚೇರಿಗೆ ಡಿ.ಸಿ. ಭೇಟಿ: ಸಾರ್ವಜನಿಕರ ಕುಂದುಕೊರತೆ ಆಲಿಕೆ

ಕಲಬುರಗಿ: ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಸೋಮವಾರ ಕಲಬುರಗಿ ತಾಲೂಕಿನ ಪಟ್ಟಣ ನಾಡ ಕಚೇರಿಗೆ ಭೇಟಿ ನೀಡಿ ಸಾರ್ವಜನಿಕರ ಕುಂದುಕೊರತೆ ಆಲಿಸಿದರು.

ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಪಿ.ಡಿ.ಓ ಅವರೊಂದಿಗೆ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿ ಸಮಸ್ಯೆ ಬಗೆಹರಿಸುವುದಾಗಿ ತಿಳಿಸಿದ ಜಿಲ್ಲಾಧಿಕಾರಿಗಳು, ವಿವಿಧ ಸೇವೆಗಳಿಗೆ ಅರ್ಜಿ ಸಲ್ಲಿಸಲು ಆಗಮಿಸಿದ ಸಾರ್ವಜನಿಕರನ್ನು ಮಾತಾಡಿಸಿ ಕಚೇರಿಯಲ್ಲಿ ಕಾಲಮಿತಿಯಲ್ಲಿ ಸೇವೆ ಲಭ್ಯವಾಗುತ್ತಿದಿಯೇ ಎಂದು ವಿಚಾರಿಸಿದರು‌. ಪೀರಮ್ಮ ಎಂಬ ವೃದ್ಧೆ ಆಧಾರ್ ನೊಂದಣಿಗೆ ಬಯೋಮೆಟ್ರಿಕ್ ನೀಡುತ್ತಿರುವ ಪ್ರಕ್ರಿಯೆ ಕುರಿತು ಖುದ್ದಾಗಿ ಪರಿಶೀಲಿಸಿದರು.

ಇದೇ ಸಂದರ್ಭದಲ್ಲಿ ಉಪ ತಹಶೀಲ್ದಾರ ಕಚೇರಿಯಲ್ಲಿ ಪಟ್ಟಣ ಹೋಬಳಿ ವ್ಯಾಪ್ತಿಯ ಕಂದಾಯ ನಿರೀಕ್ಷಕರು, ಗ್ರಾಮ ಆಡಳಿತಾಧಿಕಾರೊಂದಿಗೆ ಸಭೆ ನಡೆಸಿದ ಜಿಲ್ಲಾಧಿಕಾರಿಗಳು, ಸಾಮಾಜಿಕ ಭದ್ರತೆ ಯೋಜನೆ ಸೇರಿದಂತೆ ಕಂದಾಯ ಇಲಾಖೆಯ ವಿವಿಧ ಯೋಜನೆಗಳ ಪ್ರಗತಿ ವೇಗ ಹೆಚ್ಚಿಸಬೇಕು, ಕಾಲಮಿತಿಯಲ್ಲಿ ಯೋಜನೆಗಳನ್ನು ಪೂರ್ಣಗೊಳಿಸಬೇಕು ಮತ್ತು ಕಚೇರಿಗೆ ಬರುವ ಸಾರ್ವಜನಿಕರೊಂದಿಗೆ ಸೌಜನ್ಯಯುತವಾಗಿ ವರ್ತಿಸಬೇಕು ಎಂದು ತಿಳಿಸಿದರು.

ಮತದಾರರ ನೊಂದಣಿ ಜಾಗೃತಿ: ಪಟ್ಟಣದ ಪದವಿ ಪೂರ್ವ ಕಾಲೇಜಿಗೂ ಭೇಟಿ ನೀಡಿದ‌ ಜಿಲ್ಲಾಧಿಕಾರಿಗಳು, ವಿದ್ಯಾರ್ಥಿಗಳಲ್ಲಿ ಮತದಾರರ ನೋಂದಣಿ ಕುರಿತು ಜಾಗೃತಿ ಮೂಡಿಸಿದರು. ಮತದಾರರ ಪಟ್ಟಿ ಪರಿಷ್ಕರಣೆ‌ ಕಾರ್ಯ ನಡೆಯುತ್ತಿದ್ದು, ಅರ್ಹರು ಹೆಸರು ಸೇರಿಸುವಂತೆ‌ ಮನವಿ ಮಾಡಿದರು. ನಂತರ ಕೆಲವೊಂದು ‌ಮತಗಟ್ಟೆಗಳಿಗೆ ಭೇಟಿ ನೀಡಿ ಪರಿಷ್ಕರಣೆ ಕಾರ್ಯ ಸಹ‌ ವೀಕ್ಷಿಸಿದರು.

ಕಲಬುರಗಿ ತಹಶೀಲ್ದಾರ‌ ನಾಗಮ್ಮ ಕಟ್ಡಿಮನಿ, ಪಟ್ಟಣ ಉಪ ತಹಶೀಲ್ದಾರ ವೀರಯ್ಯ ಸ್ವಾಮಿ, ಕಂದಾಯ ನಿರೀಕ್ಣಕ ರೇವಣಸಿದ್ದಪ್ಪ, ಗ್ರಾಮ ಆಡಳಿತಾಧಿಕಾರಿ‌ ಮಂಜುನಾಥ ಸೇರಿದಂತೆ ಇನ್ನಿತರ ಕಂದಾಯ ಸಿಬ್ಬಂದಿಗಳು ಇದ್ದರು..

emedialine

Recent Posts

ವಕ್ಫ್ ಮಸೂದೆ ತಿದ್ದುಪಡಿಗೆ ಮುಸ್ಲೀಮ ವೈಯಕ್ತಿಕ ಕಾನೂನು ಮಂಡಳಿ ವಿರೋಧ

ಕಲಬುರಗಿ: ನ.25- ಕೇಂದ್ರ ಸರ್ಕಾರ ವಕ್ಫ್ ತಿದ್ದುಪಡಿ ಮಸೂದೆ-2024 ಜಾರಿಗೆ ತರಲು ಮುಂದಾಗಿದ್ದನ್ನು ಆಲ್ ಇಂಡಿಯಾ ಮುಸ್ಲೀಮ ವೈಯಕ್ತಿಕ ಕಾನೂನು…

6 mins ago

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

23 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

1 day ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

1 day ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

1 day ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago