ಕಲಬುರಗಿ ಮಹಾದಾಸೋಹಿ ಶರಣಬಸಪ್ಪ ಅಪ್ಪ ಜನ್ಮದಿನಾಚರಣೆ

0
13

ಸುರಪುರ: ನಗರದ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಡಿಯಲ್ಲಿ ನಡೆಯುತ್ತಿರುವ ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯ ಹಾಗೂ ವಿವಿಧ ಸಂಸ್ಥೆಗಳ ವತಿಯಿಂದ ಕಲಬುರಗಿಯ ಶರಣಬಸವೇಶ್ವರ ಸಂಸ್ಥಾನದ 8ನೇ ಪೀಠಾಧಿಪತಿ ಡಾ.ಶರಣಬಸವಪ್ಪ ಅಪ್ಪಾ, ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಡಾ.ದಾಕ್ಷಾಯಣಿ ಅಪ್ಪ ಹಾಗೂ 9ನೇ ಪೀಠಾಧಿಪತಿ ದೊಡ್ಡಪ್ಪ ಅಪ್ಪ ಜನ್ಮ ದಿನೋತ್ಸವ ಪ್ರಯುಕ್ತ ನಗರದ ಮಹಾತ್ಮ ಗಾಂಧಿ ವೃತ್ತದಲ್ಲಿ ಅನ್ನ ಪ್ರಸಾದ ದಾಸೋಹ ಕಾರ್ಯಕ್ರಮ ಏರ್ಪಡಿಸಲಾಗಿತ್ತು.

ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಕಾಲೇಜಿನ ಕಾರ್ಯದರ್ಶಿ ಶರಣಬಸಪ್ಪ ನಿಷ್ಠಿ ಮಾತನಾಡಿ ಹಿಂದುಳಿದ ಈ ಭಾಗದಲ್ಲಿ ಇಂಜಿನಿಯರಿಂಗ್ ಕಾಲೇಜು ಹಾಗೂ ಪ್ರಾಥಮಿಕ, ಪದವಿ ಪೂರ್ವ ಹಾಗೂ ಪದವಿ ಹಂತದ ವಸತಿ ಸಹಿತ ಶಿಕ್ಷಣ ಸಂಸ್ಥೆಗಳನ್ನು ಪ್ರಾರಂಭಿಸಿ ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಲು ತಮ್ಮದೇ ಆದ ಕೊಡುಗೆ ನೀಡಿದ ಶರಣ ಬಸವೇಶ್ವರ ವಿದ್ಯಾವರ್ಧಕ ಸಂಘದ ಕೊಡುಗೆ ಅಮೋಘವಾಗಿದೆ ಎಂದು ಶ್ಲಾಘಿಸಿದರು.

Contact Your\'s Advertisement; 9902492681

ಜಂಟಿ ಕಾರ್ಯದರ್ಶಿ ದೊಡ್ಡಪ್ಪ ನಿಷ್ಠಿ, ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಾ.ಶರಣಬಸಪ್ಪ ಸಾಲಿ ಮಾತನಾಡಿದರು, ವಿವಿಧ ವಿಭಾಗಗಳ ಮುಖ್ಯಸ್ಥರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು,ಸಾವಿರಾರು ಸಂಖ್ಯೆಯ ಜನರು ದಾಸೋಹ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಸಾದ ಸೇವಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here