ಕಲಬುರಗಿ: ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದಲ್ಲಿ ಸ್ವಯಂ ಪ್ರೇರಿತವಾಗಿ ದೂರು ದಾಖಲು

0
47

ಕಲಬುರುಗಿ: ಅಫಜಲಪೂರ ತಾಲ್ಲೂಕಿನ ಚಿಣಮಗೇರಾ ಪ್ರಾಥಮಿಕ ಶಾಲೆಯಲ್ಲಿ 2ನೇ ತರಗತಿ ವಿದ್ಯಾರ್ಥಿನಿ ಕು. ಮಹಾಂತಮ್ಮ ಜಮಾದಾರ 8 ವರ್ಷ ವಿದ್ಯಾರ್ಥಿನಿಯೂ ಬಿಸಿಯೂಟ ಸಾಂಬಾರ ಪಾತ್ರೆಗೆ ಬಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನವೆಂಬರ್ 17 ರಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಸ್ವಯಂ ಪ್ರೇರಿತವಾಗಿ ದೂರನ್ನು ದಾಖಲಿಸಿಕೊಂಡಿದೆ ಎಂದು ಕಲಬುರಗಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Contact Your\'s Advertisement; 9902492681

ಜುಲೈ 18 ರಂದು ಹೆಚ್ಚಿನ ಚಿಕಿತ್ಸೆಗಾಗಿ ಬಾಲಕಿಯನ್ನು ವಿಕ್ಟೋರಿಯಾ ಆಸ್ಪತ್ರೆಗೆ ವರ್ಗಾಯಿಸಿ, ವೈದ್ಯರಿಗೆ ಹೆಚ್ಚಿನ ಚಿಕಿತ್ಸೆ ನೀಡಲು ನಿರ್ದೇಶಿಸಲಾಗಿತ್ತು. ಅದರಂತೆ ಆಯೋಗದ ಸದಸ್ಯರಾದ ಅಪರ್ಣಾ ಕೊಳ್ಳಾ ಅವರು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಬಾಲಕಿಯ ತಾಯಿ ಹಾಗೂ ಸಂಬಂಧಿಕರನ್ನು ಭೇಟಿ ಮಾಡಿ ಸಾಂತ್ವನ ಹೇಳಿದರು. ಹಾಗೆಯೇ ಜೊತೆಯಲ್ಲಿದ್ದ ಶಾಲಾ ಶಿಕ್ಷಕರನ್ನು ಹಾಗೂ ಮಧ್ಯಾಹ್ನ ಬಿಸಿಯೂಟದ ಅಧಿಕಾರಿಗಳೊಂದಿಗೆ ಪ್ರಕರಣದ ಕುರಿತು ಚರ್ಚಿಸಿದರು.

ಇದಲ್ಲದೇ ಜಿಲ್ಲೆಯಲ್ಲಿ ಇಂತಹ ಪ್ರಕರಣ ಮರುಕಳಿಸದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಿಗೆ ವಿದ್ಯಾರ್ಥಿಗಳು ಊಟ ಮಾಡುವ ಸಂದರ್ಭದಲ್ಲಿ ಶಿಸ್ತು ಕ್ರಮವಾಗಿ ಸಾಲಾಗಿ ಕೂಡಿಸಿ ಊಟ ಬಡಿಸುವ ವ್ಯವಸ್ಥೆ ಮಾಡಲು ಸುತ್ತೋಲೆಯನ್ನು ಹೊರಡಿಸಲು ನಿರ್ದೇಶಿಲಾಗಿರುತ್ತದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here