ಕಲಬುರಗಿ: ಜಿಲ್ಲೆಯ 11 ತಾಲೂಕು ಬರಗಾಲ ಪೀಡಿತ ತಾಲೂಕೆಂದು ಘೋಷಿಸಿರುವ ಹಿನ್ನೆಲೆಯಲ್ಲಿ ಬೆಳೆ ನಷ್ಟ ಪರಿಹಾರ ಸೇರಿದಂತೆ ಸರ್ಕಾರದ ವಿವಿಧ ಸವಲತ್ತುಗಳು ಪಡೆಯಬೇಕಾದರೆ ರೈತ ಬಾಂಧವರು ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಣಿ ಮಾಡಿಸಬೇಕೆಂದು ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ತಿಳಿಸಿದ್ದಾರೆ
ಬೆಳೆ ನಷ್ಟದ ಪರಿಹಾರ ರೈತರ ಬ್ಯಾಂಕ್ ಖಾತೆಗೆ ನೇರವಾಗಿ ಜಮೆ ಮಾಡಲಾಗುತ್ತದೆ. ಹೀಗಾಗಿ ರೈತರು ತಮ್ಮ ಜಮೀನಿನ ವಿಸ್ತರಣೆ, ಪಹಣಿ, ಬ್ಯಾಂಕ್ ಖಾತೆ, ಆಧಾರ್ ಕಾರ್ಡ್‌ಗಳ ವಿವರದೊಂದಿಗೆ ಹತ್ತಿರದ ಕೃಷಿ ಇಲಾಖೆಯ ರೈತ ಸಂಪರ್ಕ ಕೇಂದ್ರ, ತೋಟಗಾರಿಕೆ, ರೇಷ್ಮೆ, ಕಂದಾಯ ಹಾಗೂ ಪಶುಸಂಗೋಪನಾ ಇಲಾಖೆ ಕಚೇರಿಗೆ ಭೇಟಿ ನೀಡಿ ಫ್ರೂಟ್ಸ್ ತಂತ್ರಾಂಶದಲ್ಲಿ ( Fruits-Farmer Registration and Beneficiary information system) ನಲ್ಲಿ ನೋಂದಣಿ ಮಾಡುವುದು ಕಡ್ಡಾಯವಾಗಿರುತ್ತದೆ.