ಶಹಾಬಾದ: ಭಾರತ ಚುನಾವಣಾ ಆಯೋಗ, ಜಿಲ್ಲಾಡಳಿತ ಮತ್ತು ಸ್ವೀಪ್ ಸಮಿತಿ ಕಲಬುರಗಿ ಹಾಗೂ ತಾಲೂಕಾ ಸ್ವೀಪ್ ಸಮಿತಿ ಸಂಯುಕ್ತಾಶ್ರಯದಲ್ಲಿ ನಗರದ ಬಸ್ ನಿಲ್ದಾಣದಲ್ಲಿ ಮತದಾನ ಜಾಗೃತಿ ಅಭಿಯಾನ ಆಯೋಜಿಸಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು.
ನಗರಸಭೆಯ ಪೌರಾಯುಕ್ತೆ ಪಂಕಜಾ ರಾವೂರ ಮಾತನಾಡಿ, ಮತದಾನ ಪ್ರತಿಯೊಬ್ಬರ ಹಕ್ಕು ಮತ್ತು ಕರ್ತವ್ಯ, ಇನ್ನೊಬ್ಬರ ಹೆಸರಿನಲ್ಲಿ ಮತದಾನ ಮಾಡುವುದು ಅಕ್ಷಮ್ಯ ಅಪರಾಧ ಮತ್ತು ಶಿಕ್ಷಾರ್ಹ. ಮುಕ್ತ, ನ್ಯಾಯಸಮ್ಮತ ಹಾಗೂ ಶಾಂತಿಯುತ ಚುನಾವಣೆಗೆ ಸಹಕರಿಸಿ, ಚುನಾವಣೆ ಪ್ರಜಾಪ್ರಭುತ್ವದ ಭದ್ರ ಬುನಾದಿ, ಯಾವುದೇ ಆಸೆ ಆಮಿಷಗಳಿಗೆ ತುತ್ತಾಗದೆ ನಿರ್ಭೀತಿಯಿಂದ ಮತ ಚಲಾಯಿಸಿ, ಮತದಾರರ ಪಟ್ಟಿಯಲ್ಲಿ ಹೆಸರಿರುವುದನ್ನು ಖಚಿತ ಪಡಿಸಿಕೊಂಡು ಮತದಾನ ಮಾಡಿ. ನಿಮ್ಮ ಮತ ನಿಮ್ಮ ಹಕ್ಕು, ಜಾಗತ ಮತದಾರ, ಸದೃÀಢ ಪ್ರಜಾಪ್ರಭುತ್ವ, ನಿಮ್ಮ ಮತ ಗೌಪ್ಯವಾಗಿರಲಿ ಎಂದು ಹೇಳಿದರು.
ಕಲಬುರಗಿ ಗ್ರಾಮೀಣ ಮತಕ್ಷೇತ್ರದ ನೋಡಲ್ ಅಧಿಕಾರಿ ಸತೀಶಕುಮಾರ ಮಾತನಾಡಿ, ಕಡ್ಡಾಯ ಮತದಾನ ನಮ್ಮೆಲ್ಲರ ಜವಾಬ್ದಾರಿ ಮತ್ತು ಹಕ್ಕಾಗಿದೆ. ಜಾಗೃತ ಮತದಾನ ಮಾಡುವ ಮೂಲಕ ಪ್ರಜಾಪ್ರಭುತ್ವವನ್ನು ಉಳಿಸುವ ಕೆಲಸವಾಗಬೇಕಿದೆ. ಚುನಾವಣೆಯಲ್ಲಿ ಒಂದೊಂದು ಮತವು ನಿರ್ಣಾಯಕವಾಗಲಿದೆ. ತಾವು ಮತ ಚಲಾಯಿಸುವ ಜೊತೆಗೆ ಇತರರೂ ಮತದಾನವನ್ನು ಮಾಡುವಂತೆ ಜನತೆಯನ್ನು ಪ್ರೇರೆಪಿಸುವ ಕಾರ್ಯವನ್ನು ಮಾಡಬೇಕಾಗಿದೆ. ತಹಸೀಲ್ದಾರ ಗುರುರಾಜ ಸಂಗಾವಿ ಮಾತನಾಡಿ, ತಾಲೂಕಿನಲ್ಲಿ ಪ್ರತಿಶತ ಮತದಾನವಾಗಲು ಜಾಗೃತಿ ಅಭಿಯಾನ ಆರಂಭಿಸಲಾಗಿದೆ. ಆದ್ದರಿಂದ ನಿಮ್ಮದು ಕೇವಲ ಒಂದು ಮತವಲ್ಲ. ಅದು ಪ್ರಜಾಪ್ರಭುತ್ವದ ಮೌಲ್ಯವಾಗಿರುತ್ತದೆ. 18 ವರ್ಷ ವಯಸ್ಸಿನ ಪ್ರತಿಯೊಬ್ಬರೂ ಮತದಾರರಾಗಬೇಕು.ಪ್ರತಿ ಮತದಾರನು ಮತ ಹಾಕುವ ಮೂಲಕ ಪ್ರಜಾಪ್ರಭುತ್ವದಲ್ಲಿ ತಮ್ಮ ಹಕ್ಕನ್ನು ಚಲಾಯಿಸಬೇಕು ಎಂದರು.
ತಾಪಂ ಇಓ ಮಲ್ಲಿನಾಥ ರಾವೂರ ಮಾತನಾಡಿ, ನೂರಕ್ಕೆ ನೂರರಷ್ಟು ಮತದಾನವಾಗುವುದರಿಂದ ಸದೃಢ ಪ್ರಜಾಪ್ರಭುತ್ವ ಕಟ್ಟಲು ಸಾಧ್ಯ. ದೇಶದ ಭವಿಷ್ಯ ಮತದಾರನ ಕೈಯಲ್ಲಿದೆ. ಆ ದಿಸೆಯಲ್ಲಿ ಸಂವಿಧಾನಾತ್ಮಕ ಹಕ್ಕಾದ ಮತದಾನ ಕಾರ್ಯದಲ್ಲಿ ತಪ್ಪದೇ ಪಾಲ್ಗೊಳ್ಳುವಂತಾಗಬೇಕು ಎಂದು ಮನವಿ ಮಾಡಿದರು.
ಬಸ್ ನಿಲ್ದಾಣದ ನಿರ್ವಹಣಾಧಿಕಾರಿ ಶಾಂತಾಬಾಯಿ, ನಗರಸಭೆಯ ಅಧಿಕಾರಿಗಳು, ಸಿಬ್ಬಂದಿ ವರ್ಗ ಹಾಗೂ ಸಾರ್ವಜನಿಕರು ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…