ಕಲಬುರಗಿ: ಬಂಜಾರ ಸಮಾಜದ ವಿರುದ್ಧ ಜಾತಿ ನಿಂದನೆ ಮತ್ತು ನಾಯಕರ ಮೇಲೆ ಸುಳ್ಳು ಪ್ರಕರಣ ದಾಖಲಿಸಿ ಮಾನಸಿಕವಾಗಿ ಕಿರುಕುಳ ನೀಡುತ್ತಿರುವುದನ್ನು ವಿರೋಧಿಸಿ ಬಂಜಾರ ಸಮಾಜದ ಗೋರ್ ಸೇನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಶ್ರೀಧರ ರಾಜು ಚೌವ್ಹಾಣ ನೇತೃತ್ವದಲ್ಲಿ ಹಮ್ಮಿಕೊಂಡಿದ ಪ್ರತಿಭಟನೆಗೆ ಸೆಕ್ಷನ್ 144 ಜಾರಿಗೊಳ್ಳಿಸಿರುವ ಹಿನ್ನೆಲೆಯಲ್ಲಿ ಎಂದು ಪೊಲೀಸರು ಪ್ರತಿಭಟನಾಕಾರರನ್ನು ಪ್ರತಿಭಟನೆಗೆ ನಿರಾಕರಿಸಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ.
ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಮೇಲೆ ಮರಣಾಂತಿಕ ಹಲ್ಲೆ ನಡೆಸಿದ ಆರೋಪಿಗಳ ಬಂಧನಕ್ಕೆ ಒತ್ತಾಯಿಸಿ ಬುಧವಾರ ನಗರದ ಜಗತ್ ವೃತದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು ಎಂದು ಬಂಜಾರ ಸಮಾಜದ ಮುಖಂಡ ನ್ಯಾಯವಾದಿ ಅಶ್ವಥ ರಾಮ್ ರಾಠೋಡ್ ತಿಳಿಸಿದ್ದಾರೆ.
ಪ್ರತಿಭಟನೆಯಲ್ಲಿ ಐದು ಸಾವಿರ ಜನ ಸೇರಿಲಿದ್ದು ಪ್ರತಿಭಟನೆಯನ್ನು ಹತ್ತಿಕ್ಕೂ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಅಧಿಕಾರ ದುರಪಯೋಗ ಪಡಿಸಿಕೊಂಡು ಸೆಕ್ಷನ್ 144 ಜಾರಿ ಮಾಡಿಸಿದ್ದಾರೆ ಎಂದು ಆರೋಪಿಸಿದ್ದಾರೆ.
ಸಮಾಜ ನಾಯಕರ ಮೇಲೆ ನಡೆಯುತ್ತಿರುವ ದೌರ್ಜನ್ಯ ನಡೆಸುವವರ ವಿರುದ್ಧ ಕಾನೂನಾತ್ಮಕ ಹೋರಾಟದ ಮೂಲಕವೇ ನ್ಯಾಯ ಸಿಗುವವರೆಗೆ ಹೋರಾಟ ಮುಂದುವರೆಯುತ್ತದೆ ಎಂದು ಹೇಳಿದ ಅವರು ನಾಳೆ ಚಿತ್ತಾಪುರನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ. ಮುಂದಿನ ದಿನಗಳಲ್ಲಿ ಕಲಬುರಗಿ ಬಂದ್ ತಂತಹ ಕ್ರಮಕ್ಕೆ ಸಮಾಜ ಮುಂದಾಗಬೇಕಾಗುತ್ತೇವೆ ಎಂದು ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಸಾಗರ್ ರಾರೋಡ್ ಹಿಂದೂ, ಮೇಘನಾಥ್, ಕಲ್ಯಾಣ ಕರ್ನಾಟಕ ಶ್ರೀರಾಮ ಸೇನೆಯ ವಿಜಯ ಪಾಟೀಲ್ ಯಾದಗಿರಿ ಸೇರಿದಂತೆ ಮುಂತಾದವರು ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…