ಕಲಬುರಗಿ: ಡಿ.3ರಂದು ಬಸವಕಲ್ಯಾಣ ನಗರದಲ್ಲಿ ಜರುಗಲಿರುವ ಕಲ್ಯಾಣ ಕರ್ನಾಟಕ ಪರಿವಾರ ಮಿಲನ ಕಾರ್ಯಕ್ರಮಕ್ಕೆ ಆಳಂದ ತಾಲೂಕಿನಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಆಳಂದ ತಾಲೂಕು ಕಸಾಪ ಅಧ್ಯಕ್ಷ, ವಿಕಾಸ ಅಕಾಡೆಮಿ ಸಂಚಾಲಕ ಹಣಮಂತ ಶೇರಿ, ಖಜೂರಿ ಆಹ್ವಾನಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಕಳೆದ 18 ವರ್ಷಗಳಿಂದ ಬಸವರಾಜ ಪಾಟೀಲ ಸೇಡಂ ನೇತೃತ್ವದಲ್ಲಿ ಕಲ್ಯಾಣ ಕರ್ನಾಟಕ ಸಮಗ್ರ ಅಭಿವೃದ್ಧಿಗೆ ಹತ್ತಾರು ಯೋಜನೆಗಳನ್ನು ರೂಪಿಸಿ ಅನುಷ್ಠಾನಕ್ಕೆ ತಂದಿದ್ದು ಈ ಭಾಗದ ವಿಕಾಸಕ್ಕೆ ಪೂರಕವಾಗಿ ಕಲ್ಯಾಣ ಕರ್ನಾಟಕ ಪರಿವಾರ ಮಿಲನ ಕಾರ್ಯಕ್ರಮ ಪ್ರಮುಖ ಹೆಜ್ಜೆಯಾಗಲಿದೆ.
ಪೂಜ್ಯ ಶ್ರೀ ಬಸವಲಿಂಗ ಮಹಾಸ್ವಾಮಿಗಳು, ಡಾ. ಬಸವಲಿಂಗ ಪಟ್ಟದ್ದೇವರು, ಡಾ. ಚೆನ್ನವೀರ ಶಿವಾಚಾರ್ಯರು, ಸದಾಶಿವ ಮಹಾಸ್ವಾಮಿಗಳು ಡಾ. ಗಂಗಾಬಿಕಾ ಅಕ್ಕ, ಶಿಕ್ಷಣ ತಜ್ಞ ಗುರುರಾಜ ಕರಜಗಿ ಸೇರಿದಂತೆ ಅನೇಕರು ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.