ಬಿಸಿ ಬಿಸಿ ಸುದ್ದಿ

ಸಚಿವ ಪ್ರಿಯಾಂಕ ಖರ್ಗೆ ಹುಟ್ಟು ಹಬ್ಬ | ಅಭಿಮಾನಿಗಳಿಂದ ಅನ್ನಸಂತರ್ಪಣೆ

ಶಹಾಬಾದ: ಕರ್ನಾಟಕ ಸರ್ಕಾರದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಪ್ರಿಯಾಂಕ್ ಖರ್ಗೆ ಯವರ 45ನೇ ಹುಟ್ಟ ಹಬ್ಬವನ್ನು ಕಾಂಗ್ರೆಸ್ ಪಕ್ಷದಿಂದ ಸರಳವಾಗಿ ಆಚರಿಸಲಾಯಿತು.

ಕಾಂಗ್ರೆಸ್ ಪಕ್ಷದ ಯುವ ಮುಖಂಡರಾದ ಲತೀಫ್ ಪಟೇಲ್ ಕುನ್ನೂರ ಮತ್ತು ರಾಜೇಶ ಯನಗುಂಟಿಕರ ಹಾಗೂ ಸೈಯದ್ ಜಹೀರ್ ಅವರ ನೇತೃತ್ವದಲ್ಲಿ ರೈಲ್ವೆ ನಿಲ್ದಾಣದ ಮುಂಬಾಗದಲ್ಲಿ ಬಡ ಮತ್ತು ನಿರ್ಗತಿಕರಿಗೆ ಅನ್ನಸಂತರ್ಪಣೆ ಮಾಡುವದರ ಮೂಲಕ ಜನರ ಮೆಚ್ಚುಗೆಗೆ ಪಾತ್ರರಾದರು.

ಕಾರ್ಯಕ್ರಮದಲ್ಲಿ ಬೃಹತ್‌ ಗಾತ್ರದ ಬರ್ತ್‌ ಡೇ ಕೇಕ್‌ ಕತ್ತರಿಸಿ ಬಂದಂತಹ ರೈಲ್ವೆ ಪ್ರಯಾಣಿಕರಿಗೆ ಮತ್ತು ವೃದ್ಧರಿಗೆ ಸಿಹಿ ಹಂಚಿ ಕೈಕುಲುಕಿ ಸಂತಸ ವ್ಯಕ್ತಪಡಿಸಿದ್ದರು.

ಈ ಸಂಧರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಡಾ. ಎಮಎ ರಶೀದ ಕೇಕ್ ಕತ್ತರಿಸಿ ಮಾತನಾಡಿ ಅವರು, ಪ್ರಗತಿಗಾಗಿ ಪ್ರಿಯಾಂಕ್ ಖರ್ಗೆ ಎಂಬ ಹೆಸರಿನಿಂದಲೇ ಹೆಸರುವಾಸಿಯಾಗಿ, ಅವರು ಅಭಿವೃದ್ಧಿ ಪರ ಚಿಂತನೆಯಳ್ಳ ಪ್ರಬುದ್ದ ರಾಜಕಾರಣಿಯಾಗಿ ಬೆಳೆದಿದ್ದಾರೆ, ರಾಜ್ಯ ಮತ್ತು ರಾಷ್ಟ್ರಕ್ಕೆ ಇಂತಹ ಯುವ ನಾಯಕರು ರಾಜಕಾರಣದಲ್ಲಿ ಹೊರ ಹೊಮ್ಮುತ್ತಿರುವದು ಸಂತೋಷದ ವಿಷಯವಾಗಿದೆ, ಚಿತ್ತಾಪುರ ಕ್ಷೇತ್ರದ ಮತದಾರರು ಜಿಲ್ಲೆಯ ಅಭಿವೃದ್ಧಿಗೆ ಚಿಂತಿಸುವವರನ್ನು ಆಯ್ಕೆ ಮಾಡಿ ಕಳುಹಿಸಿದ್ದಾರೆ. ಸರಳ ಸಜ್ಜನಿಕೆಯ ಪ್ರಿಯಾಂಕ್ ಖರ್ಗೆ ಅವರು ತಮ್ಮ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುತ್ತಿಲ್ಲ. ಅದು ಅವರಿಗೆ ಇಷ್ಟವೂ ಇಲ್ಲ. ಅವರ ಅಭಿಮಾನಿಗಳು ಹಾಗೂ ಕಾರ್ಯಕರ್ತರು ಸ್ವಯಂ ಪ್ರೇರಿತರಾಗಿ ಅವರ ಹುಟ್ಟು ಹಬ್ಬವನ್ನು ಆಚರಿಸುತ್ತಿದ್ದೇವೆ ಎಂದರು.

ಅನ್ನಸಂತರ್ಪಣೆ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ವಿಜಯ ಕುಮಾರ ಮುತ್ತಟ್ಟಿ, ಕಾರ್ಯದರ್ಶಿ ಮೃತ್ಯುಂಜಯ ಹಿರೇಮಠ, ಯುವ ಅಧ್ಯಕ್ಷ ಕಿರಣ ಚಹ್ವಾಣ, ಎಸ್ಸಿ ಎಸ್ಟಿ ಘಟಕದ ಅಧ್ಯಕ್ಷ ರಾಜೇಶ ಯನಗುಂಟಿ, ಶರಣಗೌಡ ಪಾಟೀಲ, ಹಾಷಮ ಖಾನ, ಕುಮಾರ ಚಹ್ವಾಣ, ನಗರ ಸಭೆ ಸದಸ್ಯರಾದ ಡಾ. ಅಹ್ಮದ ಪಟೇಲ, ಇನಾಯತ ಖಾನ, ಫಜಲ್ ಪಟೇಲ, ಶರಣು ಪಗಲಾಪೂರ ಹಾಗೂ ಅನವರ ಪಾಶಾ, ಸಾಹೇಬಗೌಡ ಬೋಗುಂಡಿ, ಶಿವರಾಜ ಕೋರಿ, ಕಿರಣ ಕೋರಿ, ಬಸವರಾಜ ಮಯೂರ, ನಾಗೇಂದ್ರ ನಾಟೇಕಾರ, ಬಾಬಾ ಖಾನ್, ವಸಂತ ಕಾಂಬಳೆ ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

5 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

15 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

15 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

15 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago