ಕಲಬುರಗಿ: ಕನ್ನಡ ಭಾಷೆಗೆ ಹಿರಿದಾದ ಇತಿಹಾಸ, ಭವ್ಯ ಸಂಸ್ಕೃತಿ ಇದೆ ಸುಮಾರು 2000 ವರ್ಷಗಳ ಇತಿಹಾಸ ಹೊಂದಿರುವ ಶ್ರೀಮಂತ ಭಾಷೆ ಕನ್ನಡ ಎಂದು ಸ್ಪಂದನ ಮಹಿಳಾ ಮತ್ತು ಮಕ್ಕಳ ಸೇವಾ ಸಂಸ್ಥೆಯ ಅಧ್ಯಕ್ಷ ಕಾಶಿನಾಥ ಮಂದೇವಾಲ ಹೇಳಿದರು.
ಜೇವರ್ಗಿ ತಾಲೂಕಿನ ಮಂದೇವಾಲ ಗ್ರಾಮದ ಸರಕಾರಿ ಪ್ರೌಢಶಾಲೆ ಆವರಣದಲ್ಲಿ ಆಯೋಜಿಸಿದ್ದ ಕರ್ನಾಟಕ ಸಂಭ್ರಮ 50 ಕಾರ್ಯಕ್ರಮದಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮಾಚರಣೆ ಹಾಗೂ ಕನ್ನಡದಲ್ಲಿ ಹೆಚ್ಚು ಅಂಕಗಳಿಸಿದ್ದ ವಿದ್ಯಾರ್ಥಿಗಳ ಸನ್ಮಾನ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಆದಿಕವಿ ಪಂಪನಿಂದ ರಾಷ್ಟ್ರಕವಿ ಕುವೆಂಪು ಹಾಗೂ ಪ್ರಸ್ತುತ ಕವಿ ಚಂಪಾನವರೆಗೆ ಕನ್ನಡ ಸಾಹಿತ್ಯ ಲೋಕಕ್ಕೆ ಅನೇಕ ಜನ ಮಹನೀಯರು ಸಾಹಿತ್ಯ ಶ್ರೀಮಂತಿಕೆಗಾಗಿ ದುಡಿದಿದ್ದಾರೆ, ಕನ್ನಡ ಎಂದರೆ ಬರಿ ಭಾಷೆಯಲ್ಲ ಬದುಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಗ್ರಾಮದ ಮುಖಂಡ ರಮೇಶಗೌಡ ಪೆÇೀಲಿಸ್ ಪಾಟೀಲ್, ನಾಡ ದೇವತೆಗೆ ಪೂಜೆಸಲ್ಲಿಸಿದರು, ಪಂಡಿತ ಮುದಗಲ್ ಉದ್ಘಾಟಿಸಿದರು.
ಮುಖ್ಯ ಅತಿಥಿಗಳಾಗಿ ಶಾಲೆಯ ಪ್ರಧಾನ ಗುರುಗಳಾದ ಮಲ್ಲಿಕಾರ್ಜುನ ಚನಾಗೊಳ, ಮಹಾದೇವಪ್ಪ, ಬಸವರಾಜ ನಾಗಾವಿ, ಭಾಗೇಶ ಚಿಟಗಿ ಸೇರಿದಂತೆ ಇತರರಿದ್ದರು.
ಶಿವಪುತ್ರಪ್ಪ ಬಿರಗುಂಡ ನಿರೂಪಿಸಿ ವಂದಿಸಿದರು. ಇದೆ ಸಂದರ್ಭದಲ್ಲಿ ಮಕ್ಕಳಿಗೆ ಗೌರವಿಸಿ ಪ್ರತಿಭಾ ಪುರಸ್ಕಾರ ನಿಡಲಾಯಿತು.
ಕಲಬುರಗಿ: ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್, ಐಟಿ, ಬಿಟಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರೀಯಾಂಕ್ ಖರ್ಗೆ ಅವರ 46ನೇ ವರ್ಷದ…
ಕಲಬುರಗಿ: ವಕ್ಫ್ ಬೋರ್ಡ್ ವಿರುದ್ಧ ಹೋರಾಟ ಮಾಡುತ್ತಿರುವ ಯತ್ನಾಳ ಟೀಮ್ ಗೆ ಬೆಂಬಲವಿಲ್ಲ ಭಾರತೀಯ ಜನತಾ ಪಕ್ಷದ ಯುವ ಮುಖಂಡ…
ಕಲಬುರಗಿ: ನ.25- ಕೇಂದ್ರ ಸರ್ಕಾರ ವಕ್ಫ್ ತಿದ್ದುಪಡಿ ಮಸೂದೆ-2024 ಜಾರಿಗೆ ತರಲು ಮುಂದಾಗಿದ್ದನ್ನು ಆಲ್ ಇಂಡಿಯಾ ಮುಸ್ಲೀಮ ವೈಯಕ್ತಿಕ ಕಾನೂನು…
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…