ಕಲಬುರಗಿ: ಭಾನುವಾರ 26 ರಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಸಮಾಜ ಕಲ್ಯಾಣ ಇಲಾಖೆಯ ಎಲ್ಲಾ ವಿದ್ಯಾರ್ಥಿ ನಿಲಯಗಳ ವಿಷೇಶ ಸ್ವಚ್ಛತಾ ಅಭಿಯಾನದವಾಗಿರುವ “ನನ್ನ ಹಾಸ್ಟೆಲ್ ಸ್ವಚ್ಛ ಹಾಸ್ಟೆಲ್” ಅಭಿಯಾನದ ಪೋಸ್ಟರ್ ನ್ನು ಜಿಲ್ಲಾಧಿಕಾರಿ ಬಿ ಫೌಜಿಯಾ ತರನ್ನೂಮ್ ಅವರು ಬಿಡುಗಡೆ ಮಾಡುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಜಾವಿದ್ ಕರಂಗಿ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶುಭಾ ಅವರು ಅವರು ಇದ್ದರು.