ಬಿಸಿ ಬಿಸಿ ಸುದ್ದಿ

ಪಿಂಚಣಿ ವಂಚಿತ ನೌಕರರ ಸಂಘದಿಂದ ಮನವಿ

ಕಲಬುರಗಿ: ಪಿಂಚಣಿ ವಂಚಿತ ಕರ್ನಾಟಕ ರಾಜ್ಯ ಸರ್ಕಾರಿ ಖಾಸಗಿ (ಪದವಿ ಪೂರ್ವ) ವೃತ್ತಿ ಶಿಕ್ಷಣ (ಜೆ.ಓಸಿ) ವಿವಿಧ ಇಲಾಖೆಯಿಂದ ವಿಲೀನಗೊಂಡ ನೌಕರರಿಗೆ ಸೇವೆಗೆ ಸೇರಿದ ದಿನಾಂಕ ಪರಿಗಣಿಸಿ ನಿಶ್ಚಿತ ಪಿಂಚಣಿ ಒದಗಿಸಿಕೊಡಬೇಕೆಂದು ಪಿಂಚಣಿ ವಂಚಿತ ಕರ್ನಾಟಕ ರಾಜ್ಯ ಪದವಿ ಪೂರ್ವ (ಜೆ.ಓ.ಸಿ.) ವೃತ್ತ ಶಿಕ್ಷಣ ಇಲಾಖೆಯಿಂದ ವಿವಿಧ ಇಲಾಖೆ ವಿಲೀನಗೊಂಡ ನೌಕರರ ಸಂಘದ ಅಧ್ಯಕ್ಷ ಮಲ್ಲಿನಾಥ ಕಳಸ್ಕರ್ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ರಾಜ್ಯದಲ್ಲಿ ಸುಮಾರು 20-25 ವರ್ಷಗಳಿಂದ ವೃತ್ತಿ ಶಿಕ್ಷಣ (ಜೆ.ಓ.ಸಿ.) ಸರಕಾರಿ ಮತ್ತು ಅನುದಾನಿತ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದವರನ್ನು ಸರಕಾರ 2010-11ರಲ್ಲಿ ವಿಶೇಷ ಕಾನೂನು ಜಾರಿ ಮಾಡಿ ಆಯಾ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದ ನೌಕರರನ್ನು ಖಾಯಂಗೊಳಿಸಲಾಗಿದೆ.

ಆದರೆ ಖಾಯಂಗೊಂಡ ನೌಕರದಾರರಿಗೆ ನಿವೃತ್ತಿ ಹೊಂದಿದ ನಂತರ ಇವರಿಗೆ ಯಾವುದೇ ಸೇವಾ ಭದ್ರತೆ ಸಿಕ್ಕಿರುವುದಿಲ್ಲ. ನಿವೃತ್ತಿಯಾದನಂತರ ನಿವೃತ್ತಿ ವೇತನ (ಪಿಂಚಣಿ)ಯಿಂದ ಕೂಡಾ ವಂಚಿತರಾಗಿರುತ್ತಾರೆ. ನಿವೃತ್ತಿಯಾದ ನೌಕರರು ಹಲವಾರು ಜನ ಮೃತಪಟ್ಟಿರುತ್ತಾರೆ.

ಸೇವೆ ಸಲ್ಲಿಸುವ ಸಂದರ್ಭದಲ್ಲಿಯೂ ಕೂಡಾ ಮೃತಪಟ್ಟಿರುತ್ತಾರೆ. ಆದರೆ ಇವರಿಗೆ ಸರಕಾರಿ ನೌಕರರಿಗೆ ಸಿಗುವ ಯಾವುದೇ ಸೌಲಭ್ಯಗಳು ಸಿಕ್ಕಿರುವುದಿಲ್ಲ. ನಿವೃತ್ತಿ ಹೊಂದಿದ ಮತ್ತು ಸೇವೆಯಲ್ಲಿ ಮೃತಪಟ್ಟ ಕುಟುಂಬಗಳು ಆತಂತ್ರ ಸ್ಥಿತಿಯಲ್ಲಿದ್ದಾರೆ.
ಈ ಕಾರಣಕ್ಕಾಗಿ ಸದರಿ ನೌಕರರಿಗೆ ಒಬ್ಬ ಸರಕಾರಿ ನೌಕರರಿಗೆ ಸಿಗುವ ಎಲ್ಲಾ ಸವಲತ್ತುಗಳು ಸಿಗಬೇಕು.

ಈಗಾಗಲೇ ನಿವೃತ್ತಿ ವೇತನ (ಪಿಂಚಣಿ) ಸೌಲಭ್ಯ ಒದಗಿಸಿಕೊಡಬೇಕು. ಮತ್ತು ಸೇವೆಸಲ್ಲಿಸುತ್ತಿರುವ ಸಂದರ್ಭದಲ್ಲಿ ಮೃತಪಟ್ಟವರ ಕುಟುಂಬದ ಸದಸ್ಯರಿಗೆ ಅನುಕಂಪ ಆಧಾರದ ಮೇಲೆ ಸರಕಾರಿ ಹುದ್ದೆಗೆ ನೇಮಕ ಮಾಡಿಕೊಳ್ಳಬೇಕು. ಮಾನವಿಯತೆಯ ಆಧಾರದ ಮೇಲೆ ಸದರಿ ನೌಕರರಿಗೆ ಮತ್ತು ಅವರ ಕುಟುಂಬಕ್ಕೆ ನ್ಯಾಯ ಒದಗಿಸಿಕೊಡಬೇಕೆಂದು ಮನವಿಯಲ್ಲಿ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಎನ್.ಎಸ್.ಪೂಜಾರಿ, ಜಗನ್ನಾಥ ಮೋದಿ, ಕಾಶಿಂ ಪಟೇಲ್, ಕಾಡಾದಿ ಇದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

10 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

20 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

20 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

20 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago