ಬಿಸಿ ಬಿಸಿ ಸುದ್ದಿ

US $25000 ನಗದು ಬಹುಮಾನದ ಕಲಬುರಗಿ ಐ.ಟಿ.ಎಫ್ ಪುರುಷರ ಟೆನಿಸ್ ಪಂದ್ಯಾವಳಿ 26 ರಿಂದ; ಲಾಂಛನ ಬಿಡುಗಡೆ

ರಾಜ್ಯದ ನಾಲ್ವರಿಗೆ ವೈಲ್ಡ್ ಕಾರ್ಡ್

ಕಲಬುರಗಿ,ನ.24; ಸೂರ್ಯ ನಗರಿ ಕಲಬುರಗಿಯ ಚಂದ್ರಶೇಖರ್ ಪಾಟೀಲ ಕ್ರೀಡಾಂಗಣದಲ್ಲಿ 8 ವರ್ಷದ ನಂತರ ಇದೇ ನವೆಂಬರ್ 26 ರಿಂದ ಡಿಸೆಂಬರ್ 3ರ ವರೆಗೆ ವಿಶ್ವ ಟೆನಿಸ್ ಪಂದ್ಯಾವಳಿಗೆ ಕಲಬುರಗಿ ಆತಿಥ್ಯವಹಿಸಲು ಸಜ್ಜಾಗಿದ್ದು, ಶುಕ್ರವಾರ ಇದರ ಲಾಂಛನ ಮತ್ತು ಟೀಸರ್ ಬಿಡುಗಡೆಗೊಳಿಸಲಾಯಿತು.

US $25000 ನಗದು ಬಹುಮಾನದ ಟೂರ್ನಿ: ಪಂದ್ಯಾವಳಿಯ ಲಾಂಛನ ಬಿಡುಗಡೆಗೊಳಿಸಿದ ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತ ಕೃಷ್ಣ ಬಾಜಪೇಯಿ ಅವರು ಮಾತನಾಡಿ, US $25000 ನಗದು ಬಹುಮಾನದ ಟೂರ್ನಿ ಇದಾಗಿದೆ. ಇಂಥದೊಂದು ಪಂದ್ಯಾವಳಿಯನ್ನು ಆಯೋಜಿಸುವ ಅವಕಾಶ ಕಲಬುರಗಿಗೆ ದೊರೆತಿರುವುದು ಹೆಮ್ಮೆಯ ವಿಷಯ. ಪಂದ್ಯ ವೀಕ್ಷಣೆ ಉಚಿತವಾಗಿದ್ದು, ಕಲಬುರಗಿ ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಯ ಕ್ರೀಡಾಪ್ರೇಮಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ದೇಶ-ವಿದೇಶದ ಪ್ರಖ್ಯಾತ ಕ್ರೀಡಾಪಟುಗಳ ಆಟದ ಸವಿಯನ್ನ ಆನಂದಿಸಬೇಕು ಎಂದು ಮನವಿ ಮಾಡಿದರು.

2002ರಲ್ಲಿ ಮೊದಲ ಟೂರ್ನಿ: ವಿಧಾನ ಪರಿಷತ್ ಶಾಸಕ ಶಶೀಲ ಜಿ. ನಮೋಶಿ ಮಾತನಾಡಿ, ಹಿಂದೆ ಎಸ್.ಎಂ.ಕೃಷ್ಣ ಮುಖ್ಯಮಂತ್ರಿಯಾಗಿದ್ದಾಗ 2002ರಲ್ಲಿ ಕಲಬುರಗಿಯ ಇದೇ ಚಂಪಾ ಕ್ರೀಡಾಂಗಣದಲ್ಲಿ ಐ.ಟಿ.ಎಫ್. ಟೆನಿಸ್ ಟೂರ್ನಿ ಆಯೋಜಿಸಲಾಗಿತ್ತು. ತದನಂತರ 2017 ರಲ್ಲಿ ಆಯೋಜಿಸಿದೆ. ಇದು ಅಂತರಾಷ್ಟ್ರೀಯ ಮಟ್ಟದ ಮೂರನೇ ಟೂರ್ನಿ ಇದಾಗಿದೆ. ಕರ್ನಾಟಕ ರಾಜ್ಯ ಲಾನ್ ಟೆನಿಸ್ ಅಸೋಸಿಯೇಷನ್ ಸಂಸ್ಥೆಯ ಉಪಾಧ್ಯಕ್ಷರಾಗಿರುವ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರ ವಿಶೇಷ ಮತುವರ್ಜಿಯಿಂದ ಇಂದಿಲ್ಲಿ ಅಂತರಾಷ್ಟ್ರೀಯ ಮಟ್ಟದ ಟೆನಿಸ್ ಟೂರ್ನಿ ಆಯೋಜನೆಗೊಳ್ಳುತ್ತಿದೆ. ಎಲ್ಲರೂ ಇದರ ಯಶಸ್ಸಿಗೆ ಶ್ರಮಿಸೋಣ ಎಂದರು.

ಕಲಬುರಗಿ ನಗರದ ಜಿಲ್ಲಾಧಿಕಾರಿಗಳಲ್ಲಿ ಕಚೇರಿ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿ ಮುನ್ನ ವಿಧಾನ ಪರಿಷತ್ ಶಾಸಕ ಶಶೀಲ ಜಿ. ನಮೋಶಿ, ಪ್ರಾದೇಶಿಕ ಆಯುಕ್ತ ಕೃಷ್ಣ ಭಾಜಪೇಯಿ ಮತ್ತು ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಲೋಗೊ ಮತ್ತು ಪ್ರೊಮೋಷನ್ ಟೀಸರ್ ಬಿಡುಗಡೆಗೊಳಿಸಿದರು.

ನಂತರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು, ನವೆಂಬರ್ 26 ರಿಂದ ಡಿಸೆಂಬರ್ 3ರ ವರೆಗೆ ನಡೆಯುವ ಅಂತರಾಷ್ಟ್ರೀಯ ಮಟ್ಟದ ಟೆನಿಸ್ ಪಂದ್ಯಾವಳಿಗೆ ಮತ್ತೆ ಕಲಬುರಗಿ ಆತಿಥ್ಯ ವಹಿಸುತ್ತಿರುವುದು ಸಂತಸ ತಂದಿದೆ. ನವೆಂಬರ್ 28 ರಂದು ಉದ್ಘಾಟನೆ ಮತ್ತು ಡಿಸೆಂಬರ್ 3 ರಂದು ಸಮಾರೋಪ ನಡೆಯಲಿದೆ. ಶ್ರೀಲಂಕಾದ ಧಾರಕಾ ಎಲ್ಲಾವಾಲಾ ಈ ಪಂದ್ಯಾವಳಿಯ ಮೇಲ್ವಿಚಾರಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಸುಗಮವಾಗಿ ಪಂದ್ಯಾವಳಿ ನಡೆಯಲು ಜಿಲ್ಲಾಡಳಿತ ಎಲ್ಲಾ ರೀತಿಯ ಸಕಲ ಸಿದ್ಧತೆ ಮಾಡಿಕೊಂಡಿದೆ. ಈ ಭಾಗದ ಟೆನಿಸ್ ಕ್ರೀಡಾಪಟುಗಳಿಗೆ ಈ ಕ್ರೀಡಾಕೂಟ ಹೊಸ ಹುರುಪು, ಚೈತನ್ಯ ತುಂಬಲಿದೆ ಎಂದು ಭಾವಿಸಿದ್ದೇನೆ ಎಂದರು.

ಐ.ಟಿ.ಎಫ್. ಸಂಸ್ಥೆ ಮತ್ತು ಕರ್ನಾಟಕ ರಾಜ್ಯ ಲಾನ್ ಟೆನಿಸ್ ಅಸೋಸಿಯೇಷನ್ ಸಂಯುಕ್ತಾಶ್ರಯದಲ್ಲಿ ನಡೆಯುವ ಈ ಟೂರ್ನಿಗೆ ವಿಶ್ವದ 9 ದೇಶಗಳ ಕ್ರೀಡಾಪಟಗಳು ಭಾಗವಹಿಸುತ್ತಿದ್ದಾರೆ. ಈ ಪೈಕಿ 65ನೇ ವಿಶ್ವ ಶ್ರೇಯಾಂಕಿತ ಆಟಗಾರ ಎವ್ಜೆನಿ ಡಾನ್‍ಸ್ಕಾಯ್, ಜರ್ಮನಿಯ ಲೂಯಿಸ್ ವೆಸೆಲ್ಸ್, ಉಕ್ರೇನ್‍ನ ವ್ಲಾಡಸ್ಲ್ಯಾವ್ ಒರ್ಲೋವ್ ಮತ್ತು ಭಾರತದ ದಿಗ್ವಿಜಯಸಿಂಗ್ ಹಾಗೂ ಇತ್ತೀಚಿಗೆ ಧಾರವಾಡದಲ್ಲಿ ನಡೆದ ಐಟಿಎಪ್ ಓಪನ್ ಪಂದ್ಯಾವಳಿಯ ವಿಜೇತ ರಾಮಕುಮಾರ ರಾಮನಾಥನ್ ಪ್ರಮುಖರಾಗಿದ್ದಾರೆ. ಹಲವಾರು ಖಾಸಗಿ ಮತು ಸಾರ್ವಜನಿಕ ಸಂಸ್ಥೆಗಳು ಟೆನಿಸ್ ಟೂರ್ನಿಗೆ ಪ್ರಾಯೋಜಕತ್ವ ನೀಡಲು ಮುಂದೆ ಬಂದಿದ್ದು, ಒಟ್ಟಾರೆಯಾಗಿ ಒಂದು ವಾರಗಳ ಕಾಲ ಕಲಬುರಗಿಯಲ್ಲಿ ಟೆನಿಸ್ ಹಬ್ಬ ಕಣ್ತುಂಬಿಕೊಳ್ಳಬಹುದಾಗಿದೆ ಎಂದರು.

ರಾಜ್ಯದ ಇಬ್ಬರು ಸೇರಿ ನಾಲ್ವರಿಗೆ ವೈಲ್ಡ್ ಕಾರ್ಡ್: ಅರ್ಹತಾ ಸುತ್ತಿನ ಡ್ರಾ ನವೆಂಬರ್ 25 ರಂದು ನಡೆಯಲಿದ್ದು, ಅರ್ಹತಾ ಸುತ್ತಿನ ಪಂದ್ಯಗಳು ನವೆಂಬರ್ 26 ಮತ್ತು 27 ರಂದು ನಡೆಯಲಿವೆ. ಮುಖ್ಯ ಪಂದ್ಯಗಳು ನ.28 ರಿಂದ ಆರಂಭವಾಗಲಿವೆ. ಡಿಸೆಂಬರ್ 2 ರಂದು ಡಬಲ್ಸ್ ಫೈನಲ್ 3 ರಂದು ಸಿಂಗಲ್ಸ್ ಫೈನಲ್ ಪಂದ್ಯ ನಡೆಯಲಿದೆ. ಪಂದ್ಯಾವಳಿಯಲ್ಲಿ 32 ಆಟಗಾರರು ಸಿಂಗಲ್ಸ್ ಪಂದ್ಯ ಆಡಲಿದ್ದರೆ, 16 ಜೋಡಿಗಳು ತಮ್ಮ ಸಾಮಥ್ರ್ಯ ಒರೆಗೆ ಹಚ್ಚಲಿವೆ. ಈ ಮಧ್ಯೆ, ಕರ್ನಾಟಕ ರಾಜ್ಯ ಲಾನ್ ಟೆನಿಸ್ ಅಸೋಶಿಯಷನ್ ಮುಖ್ಯ ಪಂದ್ಯಗಳಿಗೆ ವೈಲ್ಡ್ ಕಾರ್ಡ್ ಪ್ರವೇಶ ನೀಡಿದ್ದು, ಆ ಪೈಕಿ ರಾಜ್ಯದ ಆದಿಲ್ ಕಲ್ಯಾಣಪುರ ಮತ್ತು ಮನೀಶ್. ಜಿ (ಕರ್ನಾಟಕ) ಮತ್ತು ಇತರೆ ರಾಜ್ಯದ ಕಬೀರ್ ಹಂಸ ಮತ್ತು ಜಗಮೀತಸಿಂಗ್ ಅವರು ಪ್ರವೇಶ ಪಡೆದಿದ್ದಾರೆ ಎಂದು ಕರ್ನಾಟಕ ರಾಜ್ಯ ಲಾನ್ ಟೆನಿಸ್ ಅಸೋಸಿಯೇಷನ್ ಸಂಸ್ಥೆಯ ಟೂರ್ನಾಮೆಂಟ್ ನಿರ್ದೇಶಕ ಪೀಟರ್ ವಿಜಯಕುಮಾರ ತಿಳಿಸಿದರು.

ರಾಜ್ಯ ಮತ್ತು ದೇಶದ ಟೆನಿಸ್ ಆಟಗಾರರು ಕಲಬುರಗಿ ಸೇರಿದಂತೆ ರಾಜ್ಯದ ಜಿಲ್ಲಾ ಕೇಂದ್ರಗಳಲ್ಲಿ ಆಯೋಜಿಸುವ ಐ.ಟಿ.ಎಫ್. ಟೂರ್ನಿಯಲ್ಲಿ ಭಾಗವಹಿಸುವ ಮೂಲಕ ಅಂತರಾಷ್ಟ್ರೀಯ ಮಟ್ಟದಲ್ಲಿ ರ‌್ಯಾಂಕಿಂಗ್ ಸುಧಾರಿಸಿಕೊಳ್ಳಬಹುದಾಗಿದೆ. ಐ.ಟಿ.ಎಫ್. ಟೂರ್ನಿಯಲ್ಲಿ ಭಾಗವಹಿಸಲು ಸ್ಥಳೀಯ ಕ್ರೀಡಾಪಟುಗಳು ವಿದೇಶ ಪ್ರಯಾಣ ಕೈಗೊಳ್ಳಬೇಕಾಗುತ್ತದೆ. ಇದು ಆರ್ಥಿಕ ಹೊರೆಗೂ ಕಾರಣವಾಗಿದೆ. ಸ್ಥಳೀಯವಾಗಿ ಇಲ್ಲಿಯೇ ಭಾಗವಹಿಸಿದಲ್ಲಿ ತುಂಬಾ ಅನುಕೂಲವಾಗಲಿದೆ. ಜೊತೆಗೆ ಸ್ಥಳೀಯವಾಗಿ ಭವಿಷ್ಯದ ಟೆನಿಸ್ ಕ್ರೀಡಾಪಟುಗಳಿಗೆ ಉತ್ತೇಜನ ದೊರೆಯಲಿದೆ. ಇದುವೇ ಟೂರ್ನಿ ಆಯೋಜನೆಯ ಉದ್ದೇಶ ಎಂದು ಪೀಟರ್ ವಿಜಯಕುಮಾರ ಅಭಿಪ್ರಾಯಪಟ್ಟರು.

ಪತ್ರಿಕಾಗೋಷ್ಠಿಯಲ್ಲಿ ಪ್ರೊಬೇಷನರ್ ಐ.ಎ.ಎಸ್. ಅಧಿಕಾರಿ ಗಜಾನನ್ ಬಾಳೆ, ಸಹಾಯಕ ಆಯುಕ್ತೆ ಮಮತಾ ಕುಮಾರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಗಾಯತ್ರಿ, ಕೃಷಿ ಜಂಟಿ ನಿರ್ದೇಶಕ ಸಮದ್ ಪಟೇಲ್, ಜಿಲ್ಲಾ ಕೈಗಾರಿಕೆ ಕೇಂದ್ರ ಜಂಟಿ ನಿರ್ದೇಶಕ ಎಂ.ಸತೀಷ್ ಕುಮಾರ ಸೇರಿದಂತೆ ಕೆ.ಎಸ್.ಎಲ್.ಟಿ.ಎ. ಸಂಸ್ಥೆಯ ಇತರೆ ಅಧಿಕಾರಿಗಳು ಇದ್ದರು.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

7 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

7 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

7 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

24 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago