ಸುರಪುರ: ತಾಲೂಕಿನ ಕಾರ್ಮಿಕ ಇಲಾಖೆಗೆ ನಿರೀಕ್ಷಕರಾಗಿ ಗಂಗಾಧರ ನಿಲೂರ ಆಗಮಿಸಿದ್ದು,ನೆರವು ಕಟ್ಟಡ ಮತ್ತು ಅಸಂಘಟಿತ ಕಾರ್ಮಿಕರ ಸಂಘದ ವತಿಯಿಂದ ಸನ್ಮಾನಿಸಿ ಕರ್ತವ್ಯಕ್ಕೆ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಸನ್ಮಾನ ಸ್ವೀಕರಿಸಿದ ಕಾರ್ಮಿಕ ನಿರೀಕ್ಷಕ ಗಂಗಾಧರ ನಿಲೂರ ಮಾತನಾಡಿ,ತಾಲೂಕಿನಲ್ಲಿಯ ಕಟ್ಟಡ ಕಾರ್ಮಿಕರಿಗೆ ಸರಕಾರ ದಿಂದ ಸಿಗುವ ಸೌಲಭ್ಯಗಳನ್ನು ಕೊಡಿಸುವ ಕೆಲಸ ಮಾಡೋಣ,ಇದಕ್ಕೆ ಎಲ್ಲಾ ಕಾರ್ಮಿಕ ಸಂಘಟನೆಗಳು ಸಹಕಾರ ನೀಡಬೇಕು ಎಂದರು.
ಇದೇ ಸಂದರ್ಭದಲ್ಲಿ ನೆರವು ಕಟ್ಟಡ ಮತ್ತು ಅಸಂಘಟಿತ ಕಾರ್ಮಿಕರ ಸಂಘದ ಮುಖಂಡರು ನೂತನವಾಗಿ ಸಂಘಟನೆ ತಾಲೂಕು ಘಟಕ ಆರಂಭಗೊಂಡಿರುವ ಕುರಿತು ನೂತನ ಪದಾಧಿಕಾರಿಗಳ ಪಟ್ಟಿ ಜೊತೆಗೆ ಮನವಿ ಸಲ್ಲಿಸಿ ಮಾತನಾಡಿದ ಮುಖಂಡರು,ತಾಲೂಕಿನಲ್ಲಿಯ ಅನೇಕ ಜನ ಕಟ್ಟಡ ಕಾರ್ಮಿಕರಿಗೆ ಸರಕಾರ ದಿಂದ ಸಿಗಬೇಕಾದ ಸೌಲಭ್ಯಗಳು ದೊರೆತಿಲ್ಲ,ತಾವುಗಳು ಮುತುವರ್ಜಿ ತೋರಿ ಎಲ್ಲ ಕಾರ್ಮಿಕರಿಗೆ ಸರಕಾರದ ಸೌಲಭ್ಯಗಳನ್ನು ದೊರಕಿಸುವಂತೆ ವಿನಂತಿಸಿದರು.
ಈ ಸಂದರ್ಭದಲ್ಲಿ ಸಂಘದ ಗೌರವಾಧ್ಯಕ್ಷ ಶಿವಶರಣಪ್ಪ ಹೆಡಗಿನಾಳ,ಅಧ್ಯಕ್ಷ ಚಂದ್ರಶೇಖರ ಎಲಿಗಾರ,ಉಪಾಧ್ಯಕ್ಷ ಅಮರಪ್ಪ ಹೊನ್ನಳ್ಳಿ,ಪ್ರಧಾನ ಕಾರ್ಯದರ್ಶಿ ಬಸವರಾಜ ಪೂಜಾರಿ,ಖಜಾಂಚಿ ರಾಜು ಕಲಾಲ್,ಹಣಮಂತ ಟೊಣಪೆ,ಅನಿಲ ಕಾಂಬ್ಳೆ,ಚನ್ನಪ್ಪ ಎಲಿಗಾರ,ಚಂದ್ರಾಮಪ್ಪ ಕುಂಬಾರಪೇಟ,ಸಿದ್ರಾಮ ಎಲಿಗಾರ ಸೇರಿದಂತೆ ಅನೇಕರು ಭಾಗವಹಿಸಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…