ಸುರಪುರ: ನಗರದ ಕುಂಬಾರಪೇಟ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಹಾಗೂ ಹಸನಾಪುರ ಪೆಟ್ರೋಲ್ ಬಂಕ್ ಬಳಿಯಲ್ಲಿನ ಉಪ ಕೃಷಿ ಮಾರುಕಟ್ಟೆ ಪ್ರಾಂಗಣದಲ್ಲಿನ ಅಂಗಡಿ ಮಳಿಗೆಗೆಳನ್ನು ಅಧಿಕಾರಿಗಳು ಅಕ್ರಮವಾಗಿ ಬಾಡಿಗೆ ನೀಡಿದ್ದಾರೆ ಎಂದು ದಲಿತ ಸೇನೆ ಸಂಘಟನೆಯಿಂದ ಆರೋಪಿಸಿ ನಗರದ ತಹಸೀಲ್ದಾರ್ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಗಿದೆ.
ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಸಂಘಟನೆ ತಾಲೂಕು ಅಧ್ಯಕ್ಷ ಮರಿಲಿಂಗಪ್ಪ ಗುಡಿಮನಿ ಮಾತನಾಡಿ,ನಗರದ ಕೃಷಿ ಮಾರುಕಟ್ಟೆಗಳ ಪ್ರಾಂಗಣದಲ್ಲಿನ ಅಂಗಡಿ ಮಳಿಗೆಗಳು ಹಾಗೂ ಚಿಕ್ಕ ಮಳಿಗೆಗಳು ನಿಯಮಾನುಸಾರ ಬಾಡಿಗೆ ನೀಡದೆ ಸ್ವಂತಕ್ಕಾಗಿ ಅನಧಿಕೃತವಾಗಿ ಬಾಡಿಗೆ ನೀಡಲಾಗಿದೆ.ಇದಕ್ಕೆ ಕಾರಣವಾಗಿರುವ ಅಧಿಕಾರಿಗಳ ಮೇಲೆ ಕಠಿಣ ಕ್ರಮ ಕೈಗೊಂಡು ಸೇವೆಯಿಂದ ವಜಾಗೊಳಿಸುವಂತೆ ಆಗ್ರಹಿಸಿದರು.
ನಂತರ ಕೃಷಿ ಮಾರುಕಟ್ಟೆ ಉಪ ನಿರ್ದೇಶಕರಿಗೆ ಬರೆದ ಮನವಿಯನ್ನು ತಹಸೀಲ್ದಾರ್ ಮೂಲಕ ಸಲ್ಲಿಸಿದರು.ಪ್ರತಿಭಟನೆಯಲ್ಲಿ ಜಿಲ್ಲಾ ಉಪಾಧ್ಯಕ್ಷ ಹುಲಗಪ್ಪ ದೇವತ್ಕಲ್,ತಾಲೂಕು ಉಪಾಧ್ಯಕ್ಷ ಮಹಾದೇವಪ್ಪ ಚಲುವಾದಿ,ಖಜಾಂಚಿ ಬಸವರಾಜ ಮಂಗಳೂರ,ತೇಜು ಹೊಸಮನಿ,ಕೆಂಭಾವಿ ನಗರಾಧ್ಯಕ್ಷ ಪರಶುರಾಮ ಬೋನಾಳ,ಸಂತೋಷ ಜೈನಾಪುರ,ಭೀಮರಾಯ,ಲೊಕೇಶ ಸೇರಿದಂತೆ ಅನೇಕರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…