ಕಲಬುರಗಿ; ನವೆಂಬರ್ 28 ರಂದು ನೇರ ಸಂದರ್ಶನ

0
108

ಕಲಬುರಗಿ,ನ.24; ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಇದೇ ನವೆಂಬರ್ 28 ರಂದು ಬೆಳಿಗ್ಗೆ 10.30 ಗಂಟೆಯಿಂದ ಮಧ್ಯಾಹ್ನ 2 ಗಂಟೆಯ ವರೆಗೆ ಕಲಬುರಗಿ ಸರ್ಕಾರಿ ಐಟಿಐ ಕಾಲೇಜು ಹಿಂದುಗಡೆಯಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೇರ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಕೆಎಸ್ ವರ್ಡ್ ವೆಂಚುರ್ಸ್ (ಇಂಟರ್ ನ್ಯಾಶನಲ್ ಏರ್‍ಪೋರ್ಟ್) ದಲ್ಲಿ ಸೆಕ್ಯೂರಿಟಿ ಸ್ಟಾಫ/ ಸೆಲ್ಸ್ ಎಕ್ಸಿಕ್ಯೋಟಿವ್/ ಕ್ಯಾಶಿಯರ್ಸ್ ಹುದ್ದೆಗೆ ಪಿ.ಯು.ಸಿ., ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 18 ರಿಂದ 30 ವರ್ಷದೊಳಗಿರಬೇಕು.
ಡಿಡಿಯುಜಿಕೆವಾಯ್ (ಇಂಡಸ್ ವೆಲ್ಡ ಟೆಕ್‍ಟ್ರಸ್ಟ್) ದಲ್ಲಿ ತರಬೇತಿ ಮತ್ತು ಉದ್ಯೋಗಕ್ಕಾಗಿ ಅಭ್ಯರ್ಥಿಗಳು 8ನೇ/ 9ನೇ/ ಎಸ್.ಎಸ್.ಎಲ್.ಸಿ./ ಪಿ.ಯು.ಸಿ./ಐ.ಟಿ.ಐ./ಡಿಪ್ಲೋಮಾ ( ಉತ್ತೀರ್ಣ/ ಅನುತ್ತೀರ್ಣರಾದ) ರಾದ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ವಯೋಮಿತಿ 18 ರಿಂದ 35 ವರ್ಷದೊಳಗಿರಬೇಕು. ಸರ್ವಿಸ್ ಜಂಕ್ಷನ್‍ದಲ್ಲಿ ಸೇಲ್ಸ್ ಟಕ್ನಿಶಿಯನ್ ಹುದ್ದೆಗೆ ಎಸ್.ಎಸ್.ಎಲ್.ಸಿ/ ಪಿ.ಯು.ಸಿ/ಐ.ಟಿ.ಐ/ಡಿಪ್ಲೋಮಾ ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 18 ರಿಂದ 30 ವರ್ಷದೊಳಗಿರಬೇಕು.

Contact Your\'s Advertisement; 9902492681

ಆಸಕ್ತಿಯುಳ್ಳ ಅಭ್ಯರ್ಥಿಗಳು ತಮ್ಮಎಲ್ಲಾ ಅಂಕಪಟ್ಟಿಗಳ ಝರಾಕ್ಸ್, ರೆಸ್ಯೂಮ್(ಬಯೋಡಟಾ) ಭಾವಚಿತ್ರಗಳು ಹಾಗೂ ಆಧಾರ್ ಕಾರ್ಡ್‍ದೊಂದಿಗೆ ಮೇಲ್ಕಂಡ ದಿನದಂದು ನಡೆಯುವ ನೇರ ಸಂದರ್ಶನದಲ್ಲ್ಲಿ ಭಾಗವಹಿಸಬಹುದಾಗಿದೆ.

ನೇರ ಸಂದರ್ಶನದಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಯಾವುದೇ ತರಹದ ಭತ್ಯೆಯನ್ನು ನೀಡಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ 08472-274846, ಮೊಬೈಲ್ ಸಂಖ್ಯೆ 8003343944 (ಪ್ರತಿದಿನ ಬೆಳಿಗ್ಗೆ 10ಗಂಟೆ ರಿಂದ ಸಂಜೆ 5 ಗಂಟೆವರೆಗೆ ಕರೆ ಮಾಡಬಹುದಾಗಿದೆ) ಸಂಪರ್ಕಿಸಲು ಕೋರಲಾಗಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here