ಕಲಬುರಗಿ,ನ.24; ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಇದೇ ನವೆಂಬರ್ 28 ರಂದು ಬೆಳಿಗ್ಗೆ 10.30 ಗಂಟೆಯಿಂದ ಮಧ್ಯಾಹ್ನ 2 ಗಂಟೆಯ ವರೆಗೆ ಕಲಬುರಗಿ ಸರ್ಕಾರಿ ಐಟಿಐ ಕಾಲೇಜು ಹಿಂದುಗಡೆಯಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೇರ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಕೆಎಸ್ ವರ್ಡ್ ವೆಂಚುರ್ಸ್ (ಇಂಟರ್ ನ್ಯಾಶನಲ್ ಏರ್ಪೋರ್ಟ್) ದಲ್ಲಿ ಸೆಕ್ಯೂರಿಟಿ ಸ್ಟಾಫ/ ಸೆಲ್ಸ್ ಎಕ್ಸಿಕ್ಯೋಟಿವ್/ ಕ್ಯಾಶಿಯರ್ಸ್ ಹುದ್ದೆಗೆ ಪಿ.ಯು.ಸಿ., ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 18 ರಿಂದ 30 ವರ್ಷದೊಳಗಿರಬೇಕು.
ಡಿಡಿಯುಜಿಕೆವಾಯ್ (ಇಂಡಸ್ ವೆಲ್ಡ ಟೆಕ್ಟ್ರಸ್ಟ್) ದಲ್ಲಿ ತರಬೇತಿ ಮತ್ತು ಉದ್ಯೋಗಕ್ಕಾಗಿ ಅಭ್ಯರ್ಥಿಗಳು 8ನೇ/ 9ನೇ/ ಎಸ್.ಎಸ್.ಎಲ್.ಸಿ./ ಪಿ.ಯು.ಸಿ./ಐ.ಟಿ.ಐ./ಡಿಪ್ಲೋಮಾ ( ಉತ್ತೀರ್ಣ/ ಅನುತ್ತೀರ್ಣರಾದ) ರಾದ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ವಯೋಮಿತಿ 18 ರಿಂದ 35 ವರ್ಷದೊಳಗಿರಬೇಕು. ಸರ್ವಿಸ್ ಜಂಕ್ಷನ್ದಲ್ಲಿ ಸೇಲ್ಸ್ ಟಕ್ನಿಶಿಯನ್ ಹುದ್ದೆಗೆ ಎಸ್.ಎಸ್.ಎಲ್.ಸಿ/ ಪಿ.ಯು.ಸಿ/ಐ.ಟಿ.ಐ/ಡಿಪ್ಲೋಮಾ ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 18 ರಿಂದ 30 ವರ್ಷದೊಳಗಿರಬೇಕು.
ಆಸಕ್ತಿಯುಳ್ಳ ಅಭ್ಯರ್ಥಿಗಳು ತಮ್ಮಎಲ್ಲಾ ಅಂಕಪಟ್ಟಿಗಳ ಝರಾಕ್ಸ್, ರೆಸ್ಯೂಮ್(ಬಯೋಡಟಾ) ಭಾವಚಿತ್ರಗಳು ಹಾಗೂ ಆಧಾರ್ ಕಾರ್ಡ್ದೊಂದಿಗೆ ಮೇಲ್ಕಂಡ ದಿನದಂದು ನಡೆಯುವ ನೇರ ಸಂದರ್ಶನದಲ್ಲ್ಲಿ ಭಾಗವಹಿಸಬಹುದಾಗಿದೆ.
ನೇರ ಸಂದರ್ಶನದಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಯಾವುದೇ ತರಹದ ಭತ್ಯೆಯನ್ನು ನೀಡಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ 08472-274846, ಮೊಬೈಲ್ ಸಂಖ್ಯೆ 8003343944 (ಪ್ರತಿದಿನ ಬೆಳಿಗ್ಗೆ 10ಗಂಟೆ ರಿಂದ ಸಂಜೆ 5 ಗಂಟೆವರೆಗೆ ಕರೆ ಮಾಡಬಹುದಾಗಿದೆ) ಸಂಪರ್ಕಿಸಲು ಕೋರಲಾಗಿದೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…