ಯಾದಗಿರಿ: ಸಂವಿಧಾನದಲ್ಲಿನ ಮೌಲ್ಯಗಳು ಜೀವನದ ಮೌಲ್ಯಗಳಾಗಿ ಅಂತರ್ಗತವಾದಾಗ (ಅಳವಡಿಸಿಕೊಂಡಾಗ) ಮಾತ್ರ ಸಂವಿಧಾನ ದಿನಾಚರಣೆಗೆ ನಿಜವಾದ ಅರ್ಥ ಬರುತ್ತದೆ ಎಂದು ಜಿಲ್ಲಾಧಿಕಾರಿ ಡಾ.ಸುಶೀಲ ಬಿ ಅವರು ಅಭಿಪ್ರಾಯಪಟ್ಟರು.
ನಗರದ ಅಂಬೇಡ್ಕರ್ ವೃತ್ತದ ಬಳಿ ದಲಿತ ಸಂಘಟನೆಗಳ ಒಕ್ಕೂಟದ ವತಿಯಿಂದ ಆಯೋಜಿಸಿದ 74ನೇ ಸಂವಿಧಾನ ಸಮರ್ಪಣಾ ದಿನ ಕಾರ್ಯಕ್ರಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಮೂರ್ತಿಗೆ ಮಾಲಾರ್ಪಣೆ ಮಾಡಿ ಭಾರತದ ಸಂವಿಧಾನ ದಿನಾಚರಣೆ
ಉದ್ದೇಶಿಸಿ ಮಾತನಾಡಿದ ಅವರು ಸಂವಿಧಾನ ಓದುವುದರ ಜೊತೆಗೆ ಕರ್ತವ್ಯ ಮತ್ತು ಹಕ್ಕುಗಳನ್ನು, ಮೌಲ್ಯಗಳನ್ನು ನಿಷ್ಠೆ, ಪ್ರಾಮಾಣಿಕತೆಯಿಂದ ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಳ್ಳಬೇಕಾಗಿದೆ ಎಂದು ಅವರು ನುಡಿದರು.
ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರರು ಕೊಟ್ಟ ಸಂವಿಧಾನವು ಶ್ರೇಷ್ಠ ಸಂವಿಧಾನವಾಗಿದ್ದು ನಮ್ಮೆಲ್ಲರಿಗೂ ದಾರಿ ದೀಪವಾಗಿದೆ. ಸರ್ವರೂ ಸಂವಿಧಾನ ತೋರಿದ ದಾರಿಯಲ್ಲಿ ನಡೆಯೋಣವೆಂದು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗರಿಮಾ ಪನ್ವಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ ಸಂಗೀತಾ, ಅರಣ್ಯ ಸಂರಕ್ಷಣಾಧಿಕಾರಿ ಕಾಜೋಲ್ ಪಾಟೀಲ, ಡಿವೈಎಸ್ಪಿ ಬಸವೇಶ್ವರ, ಸಹಾಯಕ ಆಯುಕ್ತ ಹಂಪಣ್ಣ ಸಜ್ಜನ್, ನಗರಸಭೆ ಪೌರಾಯುಕ್ತ ಲಕ್ಷ್ಮೀಕಾಂತ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಕು ಸರೋಜಾ, ಸಮಾಜದ ಮುಖಂಡರಾದ ಮುಖಂಡ ಮರೆಪ್ಪ ಚಟ್ಟೇರಕರ್, ನಿಂಗಪ್ಪ ಕೊಲ್ಲೂರಕರ್, ನಗರ ಸಭೆ ಸದಸ್ಯೆ ಬಸಮ್ಮ ಮಹೇಶ್ ಕುರಕುಂಬಳ, ಮಂಜು ದಾಸನಕೇರಿ, ಸಾಮದೇವ ದಾಸನಕೇರಿ, ಹಣಮಂತ ಲಿಂಗೇರಿ, ಮಲ್ಲಣ್ಣ ದಾಸನಕೇರಿ, ಡಾ. ಭಗವಂತ ಅನ್ವಾರ, ಮಲ್ಲಿಕಾರ್ಜುನ ಕುರಕುಂಬಳ, ಗೋಪಾಲ್ ತೆಳಗೇರಿ, ಶರಣು ಎಸ್ ನಾಟೇಕಾರ, ಭೀಮಶಪ್ಪ ಕಾಗಿ, ಮಲ್ಲಿಕಾರ್ಜುನ ಈಟೇ, ಸೈದಪ್ಪ ಸುಂಗಲಕರ್, ಪರಶುರಾಮ ಒಡೆಯರ್, ಮಲ್ಲಿನಾಥ ಸುಂಗಲಕರ್ ಸೇರಿದಂತೆ ಅನೇಕ ದಲಿತ ಮುಖಂಡರು ಉಪಸ್ಥಿತರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…