ಯಾದಗಿರಿ: ಕಾರ್ಮಿಕರ ಭವಿಷ್ಯ ನಿಧಿ ಇಲಾಖೆಯ ವತಿಯಿಂದ ಪ್ರತಿ ತಿಂಗಳು 27ನೇ ತಾರೀಖಿನಂದು ದೇಶದಾದ್ಯಂತ ಎಲ್ಲಾ ಜಿಲ್ಲಾ ವ್ಯಾಪ್ತಿಗಳಲ್ಲಿ ಏಕಕಾಲದಲ್ಲಿ ನಿಧಿ ಆಪ್ಕೆ ನಿಕಟ್, 2.0 ಕಾರ್ಯಕ್ರಮವನ್ನು ಏರ್ಪಡಿಸಲಾಗುತ್ತದೆ. ಜಿಲ್ಲೆಯ ಕಾರ್ಯಕ್ರಮವನ್ನು ನಗರಸಭೆ, ಶಹಾಪುರದಲ್ಲಿ ಮಂಗಳವಾರ ಏರ್ಪಡಿಸಲಾಗಿತ್ತು.
ನಿಧಿ ಆಪ್ಕೆ ನಿಕಟ್,2.0 ಕಾರ್ಯಕ್ರಮದ ಯಾದಗಿರಿ ಜಿಲ್ಲಾ ನೋಡಲ್ ಅಧಿಕಾರಿ ಬಸವರಾಜ ಹೆಳವರ ಯಾಳಗಿ ಭವಿಷ್ಯ ನಿಧಿ ಇಲಾಖೆಯ ಸೇವೆಗಳು ಹಾಗೂ ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳ ಬಗ್ಗೆ ಕಾರ್ಮಿಕರಲ್ಲಿ ಅರಿವು ಮೂಡಿಸಿದರು. ಕಾರ್ಯಕ್ರಮ ಉದ್ದೇಶಿಸಿ ಮಾತನಾಡುತ್ತಾ ಈ ಕಾರ್ಯಕ್ರಮ ಉದ್ಯೋಗಿಗಳಿಗೆ, ಉದ್ಯೋಗದಾತರಿಗೆ ಹಾಗೂ ಪಿಂಚಣಿದಾರರಿಗೆ ಕುಂದುಕೊರತೆ ಪರಿಹಾರ ವೇದಿಕೆ ಮತ್ತು ಮಾಹಿತಿ ವಿನಿಮಯ ಜಾಲ ಮಾತ್ರವಲ್ಲದೆ ವಿವಿಧ ರಾಜ್ಯ ಮತ್ತು ಕೇಂದ್ರ ಸರ್ಕಾರದ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಮಾಹಿತಿ ವಿನಿಮಯಕ್ಕೂ ಕೂಡ ವೇದಿಕೆಯಾಗಿದೆ. ಭವಿಷ್ಯ ನಿಧಿ ಸದಸ್ಯರ, ಉದ್ಯೋಗದಾತರ ಹಾಗೂ ಪಿಂಚಣಿದಾರರ ಕುಂದು ಕೊರತೆಗಳನ್ನು ಸ್ಥಳದಲ್ಲಿಯೇ ಪರಿಹರಿಸಲಾಗುತ್ತದೆ. ಎಲ್ಲರೂ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ಶಹಾಪುರ ನಗರಸಭೆ ಎ.ಇ.ಇ ನಾನಾಸಾಹೇಬ, ಕಚೇರಿ ವ್ಯವಸ್ಥಾಪಕಿ ನಾಗರತ್ನ, ಕಂದಾಯ ಅಧಿಕಾರಿ ಶರಣಬಸವ, ಇ.ಪಿ.ಎಫ್ ಸಿಬ್ಬಂದಿ ಚಿಂದಮ ರಾಮು, ನಗರಸಭೆ ಸಿಬ್ಬಂದಿಗಳು ಹಾಗೂ ಪೌರಕಾರ್ಮಿಕ ಸಂಘಟನೆಯ ಅಧ್ಯಕ್ಷ ಶರಣು ನರಬೋಳ ಭಾಗವಹಿಸಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…