ಡಿ. 3 ರಂದು “ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ” ಕನ್ನಡ ಜಾಗೃತಿ ಸಮಾವೇಶ

ಕಲಬುರಗಿ: ಕನ್ನಡಿಗರ ಮನದ ಮನೆಯಂತಿರುವ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ನಗರದ ಕನ್ನಡ ಭವನದ ಸುವರ್ಣ ಸಭಾ ಭವನದಲ್ಲಿ ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ ಎಂಬ ಘೋಷವಾಕ್ಯದೊಂದಿಗೆ ಕನ್ನಡ ಜಾಗೃತಿ ಸಮಾವೇಶವನ್ನು ಡಿ. 3 ರಂದು ಬೆಳಗ್ಗೆ 10.45 ಕ್ಕೆ ಆಯೋಜಿಸಲಾಗಿದೆ ಎಂದು ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ತಿಳಿಸಿದರು.

ನಗರದ ಕನ್ನಡ ಭವನದಲ್ಲಿ ಮಂಗಳವಾರ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಕಾರ್ಯಕ್ರಮದ ವಿವರ ನೀಡಿದ ತೇಗಲತಿಪ್ಪಿ ಅವರು, ನಿತ್ಯ ವಿನೂತನ ಕಾರ್ಯಕ್ರಮಗಳ ಮೂಲಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕಲೆ, ಸಾಹಿತ್ಯ, ಸಂಗೀತ, ಸಾಂಸ್ಕøತಿಕ ಮೆರುಗು ಹೆಚ್ಚಿಸಲಾಗುತ್ತಿದೆ.

ಕವಿ, ಕಲಾವಿದರು, ಸಂಗೀತಗಾರರಿಗೆ ಅವಕಾಶ ಕಲ್ಪಿಸಿ ನಾಡಿಗೆ ಪರಿಚಯಿಸುತ್ತಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷನಾಗಿ ಅಧಿಕಾರ ವಹಿಸಿಕೊಂಡು ಎರಡು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಅಂದು ವಿವಿಧ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ. ರಾಜ್ಯದಲ್ಲಿ ನಮ್ಮ ಮಾತೃಭಾಷೆಗೆ ಸರಿಯಾದ ರೀತಿಯಲ್ಲಿ ಯಾವುದೇ ಮನ್ನಣೆ ಸಿಗುತ್ತಿಲ್ಲ.ಆಡಳಿತ ಭಾಷೆಯನ್ನಾಗಿ ಸರಕಾರ ಜಾರಿಗೆ ತಂದಿದ್ದರೂ ಕೂಡ ಸಮರ್ಪಕವಾಗಿ ಅನುಷ್ಠಾನಗೊಳ್ಳುತ್ತಿಲ್ಲ.

ಈ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಭಾಷೆಯ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯ ಮಾಡಲಾಗುತ್ತಿದೆ. ನಮ್ಮ ಕನ್ನಡದಲ್ಲಿ ಮಾತನಾಡಲು ಹಿಂಜರಿಯುವಂಥ ಸನ್ನಿವೇಶ ನಿರ್ಮಾಣವಾಗುತ್ತಿದೆ. ಕನ್ನಡ ಭಾಷೆಯ ಕುರಿತು ಜನರಲ್ಲಿ ಜಾಗೃತಿ ಮೂಡಿಸಬೇಕಿದೆ. ಆ ಪ್ರಯುಕ್ತ ಈ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಕನ್ನಡದ ಭಾಷೆ, ಸಂಸ್ಕøತಿ ಉಳಿಸಲು ಸರಕಾರವಷ್ಟೇ ಪ್ರಯತ್ನ ಪಟ್ಟರೆ ಸಾಲದು. ಕನ್ನಡಿಗರಾದ ನಾವುಗಳು ನಮ್ಮ ಕನ್ನಡ ಭಾಷೆ, ಕಲೆ, ಸಂಸ್ಕøತಿ ಉಳಿಸಿ ಬೆಳೆಸುವ ಕೆಲಸವನ್ನು ಮಾಡಬೇಕಿದೆ ಎಂದು ಅವರು ವಿವರಿಸಿದರು.

ಈ ದಿಸೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ನಿರಂತರವಾಗಿ 108 ವರ್ಷಗಳಿಂದ ತನ್ನ ಪಾಲಿನ ಕರ್ತವ್ಯವನ್ನು ಶ್ರದ್ಧೆ, ಕಾಳಜಿಯಿಂದ ಮಾಡುತ್ತಾ ಬರುತ್ತಿದೆ, ಜತೆಗೆ ಪ್ರತಿಯೊಬ್ಬರೂ ಕನ್ನಡದ ಅಭಿವೃದ್ಧಿಯ ಜವಾಬ್ದಾರಿ ಇಂದು ಹೊರಬೇಕಿದೆ ಎಂದು ಹೇಳಿದರು.

ಕನ್ನಡ ಸಾಹಿತ್ಯಕ್ಕೆ ಲಾಕ್ಷಣಿಕ ಗ್ರಂಥ ಕವಿರಾಜಮಾರ್ಗ ಕೊಡುಗೆ ನೀಡಿರುವ ಕಲಬುರಗಿ ಜಿಲ್ಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಹೊಸ ಆಲೋಚನೆಗಳನ್ನಿಟ್ಟುಕೊಂಡು ವಿಭಿನ್ನ ಪ್ರಯೋಗದೊಂದಿಗೆ ಪರಿಷತ್ತನ್ನು ಸಮರ್ಪಕವಾಗಿ ಮುನ್ನಡೆಸಿಕೊಂಡು ಬರಲಾಗುತ್ತಿದೆ. ಅದರ ಜೊತೆಗೆ ಕನ್ನಡ ಭವನದ ಆವರಣದಲ್ಲಿ ಭೌತಿಕ ಕಟ್ಟಡಗಳಿಗೂ ಸಹ ಆದ್ಯತೆ ಮೆರೆಗೆ ಅಭಿವೃದ್ದಿ ಪಡಿಸಿ, ಜಿಲ್ಲೆಯಲ್ಲಿ ಸಾಂಸ್ಕøತಿಕ ಪರಿಸರ ನಿರ್ಮಿಸಲಾಗುತ್ತಿದೆ.

ಈ ಎರಡು ವರ್ಷದ ಅವಧಿಯಲ್ಲಿ ನಗರದ ಕನ್ನಡ ಭವನದಲ್ಲಿ ಪರಿಷತ್ತು ವಿವಿಧ ಸಂದರ್ಭಗಳಲ್ಲಿ ಆಯೋಜಿಸಿದ ಕಾರ್ಯಕ್ರಮಗಳಲ್ಲಿ ಭಾಗಿಯಾಗಿ ವ್ಯಕ್ತಪಡಿಸಿದ ಗಣ್ಯರು, ಸಾಹಿತಿಗಳು, ವಾಗ್ಮಿಗಳ ವಿಚಾರಗಳನ್ನು ಸಂಗ್ರಹಿಸಿ ಸಾಹಿತಿ-ಪತ್ರಕರ್ತ ಡಾ. ಶಿವರಂಜನ್ ಸತ್ಯಂಪೇಟೆ ಅವರ ಸಂಪಾದಕತ್ವದಲ್ಲಿ `ವಿಜಯ ವಿಶೇಷ’ ಎಂಬ ಕೃತಿಯೊಂದನ್ನು ಇದೇ ಸಂದರ್ಭದಲ್ಲಿ ಜನಾರ್ಪಣೆಗೊಳ್ಳಲಿದ್ದು, ಕನ್ನಡ ಕಟ್ಟುವ ಕಾಯಕದಲ್ಲಿ ತೊಡಗಿಸಿಕೊಂಡಿರುವ ಜಿಲ್ಲೆಯ ಸುಮಾರು ಇಪ್ಪತ್ತಕ್ಕೂ ಹೆಚ್ಚು ಕಸಾಪ ಹಿರಿಯ ಸದಸ್ಯರು ಹಾಗೂ ವಿವಿಧ ಪತ್ರಿಕೆಗಳ ಮುಖ್ಯಸ್ಥರನ್ನು ಸತ್ಕರಿಸಲಾಗುವುದು.

ಮಾಜಿ ಮುಖ್ಯಮಂತ್ರಿಗಳೂ ಆದ ಸರಸ್ವತಿ ಸಮ್ಮಾನ್ ಪ್ರಶಸ್ತಿ ಪುರಸ್ಕøತ, ಹಿರಿಯ ಸಾಹಿತಿ ಡಾ. ಎಂ. ವೀರಪ್ಪ ಮೊಯ್ಲಿ ಅವರು ಕೃತಿ ಜನಾರ್ಪಣೆಗೊಳಿಸಲಿದ್ದು, ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಉಪ ಕಾರ್ಯದರ್ಶಿ ಪ್ರಮೀಳಾ ಎಂ.ಕೆ. ಸಮಾವೇಶ ಉದ್ಘಾಟಿಸಲಿದ್ದಾರೆ. ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಅಧ್ಯಕ್ಷತೆ ವಹಿಸಲಿದ್ದು, ಹಿರಿಯ ಪತ್ರಕರ್ತ ಟಿ.ವಿ.ಶಿವಾನಂದನ್ ಮುಖ್ಯ ಅತಿಥಿಯಾಗಿ ಆಗಮಿಸಲಿದ್ದಾರೆ.

ಸಂಶೋಧಕ ಮುಡುಬಿ ಗುಂಡೇರಾವ, ಕಲ್ಯಾಣಕುಮಾರ ಶೀಲವಂತ ಅವರ ನೇತೃತ್ವದ ಸಂಭ್ರಮೋತ್ಸವ ಆಚರಣಾ ಸಮಿತಿಯೊಂದನ್ನು ರಚಿಸಿ ಅದರ ಸಹಕಾರದೊಂದಿಗೆ ಈ ಕಾರ್ಯಕ್ರಮ ನಡೆಸಲಾಗುತ್ತಿದೆ.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿಗಳಾದ ಶಿವರಾಜ ಅಂಡಗಿ, ಯಶ್ವಂತರಾಯ ಅಷ್ಠಗಿ, ಕೋಶಾಧ್ಯಕ್ಷ ಶರಣರಾಜ್ ಛಪ್ಪರಬಂದಿ,ಸಂಘಟನಾ ಕಾರ್ಯದರ್ಶಿ ರವೀಂದ್ರಕುಮಾರ ಭಂಟನಳ್ಳಿ, ಸಹ ಕಾರ್ಯದರ್ಶಿ ರಾಜೇಂದ್ರ ಮಾಡಬೂಳ ಇತರರು ಉಪಸ್ಥಿತರಿದ್ದರು.

emedialine

Recent Posts

ಸಮಾಜದ ಅಭಿವೃದ್ಧಿಯಲ್ಲಿ ಸಂಘ ಸಂಸ್ಥೆಗಳ ಕೊಡುಗೆ ಅಪಾರ

ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…

7 hours ago

ದಲಿತ ಸಂಘರ್ಷ ಸಮಿತಿ ಮೂಲಕ ನೊಂದವರಿಗೆ ನ್ಯಾಯ ಕೊಡಿಸೋಣ

ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…

7 hours ago

ಬಿಜೆಪಿಗೆ ಕೆಕೆಆರ್‌ಡಿಬಿ ಅಧ್ಯಕ್ಷ ಡಾ. ಅಜಯ್‌ ಧರ್ಮಸಿಂಗ್‌ ಟಾಂಗ್‌

ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್‌ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್‌ಐಆರ್‌…

7 hours ago

ಲಲಿತಾ ಜಮಾದಾರ್‌ಗೆ ಉತ್ತಮ ಶಿಕ್ಷಕಿ ಪ್ರಶಸ್ತಿ

ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…

7 hours ago

ಪೌರಕಾರ್ಮಿಕರ ವಿವಿಧ ಬೇಡಿಕೆಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪಾಲಿಕೆ ನೌಕರು ನಡೆಸುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡ ಭಾರತ ಕಮ್ಯುನಿಷ್ಟ ಪಕ್ಷ…

7 hours ago

ನಿರ್ಗತಿಕರಿಗೆ ಬಟ್ಟೆ, ಆಟದ ಸಾಮಾನು ವಿತರಣೆ

ಕಲಬುರಗಿ: ಇನ್ನರ್‍ವ್ಹಿಲ್ ಕ್ಲಬ್ ಆಫ್ ಗುಲಬರ್ಗಾ ಸನ್‍ಸಿಟಿ ವತಿಯಿಂದ ನಗರದ ರಾಮತೀರ್ಥ ಮಂದಿರ ಹತ್ತಿರ ನಿರ್ಗತಿಕ ಹಾಗೂ ಕಡುಬಡುವ ಜನರಿಗೆ…

8 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420