ಸಕಾಲ ಅರ್ಜಿ ವಿಲೇವಾರಿ, ರಾಜ್ಯದಲ್ಲಿಯೇ ಕಲಬುರಗಿ ನಂ-1; ಬಿ.ಫೌಜಿಯಾ ತರನ್ನುಮ್

0
864

ಕಲಬುರಗಿ,ನ.28; ಸಾರ್ವಜನಿಕರಿಗೆ ಕಾಲಮಿತಿಯಲ್ಲಿ ಸರ್ಕಾರಿ ಸೇವೆ ನೀಡುವ ಸಕಾಲ ಯೋಜನೆಯಡಿ ನವೆಂಬರ್-2023ರ ಮಾಹೆಯ ಅರ್ಜಿ ವಿಲೇವಾರಿಯಲ್ಲಿ ಕಲಬುರಗಿ ಜಿಲ್ಲೆ ಶೇ.100ರಷ್ಟು ಸಾಧನೆಯೊಂದಿಗೆ ರಾಜ್ಯದಲ್ಲಿ ನಂಬರ್-1 ಸ್ಥಾನದಲ್ಲಿದೆ ಎಂದು ಜಿಲ್ಲಾಧಿಕಾರಿ ಬಿ.ಪೌಜಿಯಾ ತರನ್ನುಮ್ ತಿಳಿಸಿದ್ದಾರೆ.

ಕರ್ನಾಟಕ ಸಕಾಲ ಸೇವೆಗಳ ಅಧಿನಿಯಮ-2011 ಮತ್ತು ತಿದ್ದುಪಡಿ ಅಧಿನಿಯಮ-2014ರಂತೆ 100ಕ್ಕೂ ಹೆಚ್ಚಿನ ಇಲಾಖೆಗಳ 1,181 ಸೇವೆಗಳನ್ನು ಕಾಲಮಿತಿಯಲ್ಲಿ ನಾಗರಿಕರಿಗೆ ನೀಡಲಾಗುತ್ತಿದೆ. ಕಳೆದ ಜೂನ್-2023 ಮಾಹೆಯಲ್ಲಿ ಅರ್ಜಿ ವಿಲೇವಾರಿ ಪ್ರಮಾಣ ಶೇ.82.54ರಷ್ಟು ಇದ್ದರೆ, ಪ್ರಸ್ತುತ ನವೆಂಬರ್ ಮಾಹೆಯಲ್ಲಿ ಸಲ್ಲಿಕೆಯಾದ 1,02,002 ಅರ್ಜಿಗಳಲ್ಲಿ 1,07,011 ಅರ್ಜಿ ವಿಲೇವಾರಿ ಮಾಡುವ ಮೂಲಕ ಇದರ ಪ್ರಮಾಣ ಶೇ.100.34ಕ್ಕೆ ಹೆಚ್ಚಿಸಿ ಆಡಳಿತಕ್ಕೆ ವೇಗ ನೀಡಲಾಗಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here