110 ಕೆವಿ ವಿದ್ಯುತ್‌ ಉಪ ಕೇಂದ್ರ, ಜೆಸ್ಕಾಂ ಶಾಖಾ ಕಚೇರಿ ಆರಂಭಕ್ಕೆ ಶಾಸಕ ಅಲ್ಲಂಪ್ರಭು ಪಾಟೀಲ್‌ ಒತ್ತಾಯ

 

ಕಲಬುರಗಿ: ದಕ್ಷಿಣ ಮತಕ್ಷೇತ್ರ ವ್ಯಾಪ್ತಿಯ ಪಟ್ಟಣ ಗ್ರಾಮದಲ್ಲಿ 110 ಕೆವಿ ವಿದ್ಯುತ್‌ ಉಪ ಕೇಂದ್ರ, ಇಲ್ಲೇ ಜೆಸ್ಕಾಂ ಆಡಳಿತದ ಶಾಖಾ ಕಚೇರಿ ಆರಂಭಿಸುವಂತೆ ಶಾಸಕರಾದ ಅಲ್ಲಂಪ್ರಭು ಪಾಟೀಲ್‌ ಇಂದಿಲ್ಲಿ ಜೆಸ್ಕಾಂ ಕಚೇರಿಯಲ್ಲಿ ನಡೆದಿರುವ ಕೆಪಿಟಿಸಿಎಲ್‌ ಎಂಡಿ ಪಂಕಜ ಕುಮಾರ್‌ ಪಾಂಡೆ ಹಾಗೂ ಜೆಸ್ಕಾಂ ಎಂಡಿ ಸೇರಿದಂತೆ ಅಧಿಕಾರಿಗಳ ಮಹತ್ವದ ಸಭೆಯಲ್ಲಿ ಆಗ್ರಹಿಸಿ ತಮ್ಮ ಬೇಡಿಕೆಗಳನ್ನು ಸಲ್ಲಿಸಿದ್ದಾರೆ.

ಈ ಭಾಗದಲ್ಲಿ ರೈತರ ಹೊಲಗದ್ದೆಯಲ್ಲಿ ನೀರಾವರಿಗೆ ಇರುವಂತಹ ಟಿಸಿಗಳು ಪದೇ ಪದೇ ಸುಡುತ್ತಿವೆ. ಇಲ್ಲಿ 110 ಕೆವಿ ಸಬ್‌ ಸ್ಟೇಷನ್‌ ಆದಲ್ಲಿ ಹೆಚ್ಚಿನ ಅನುಕೂಲವಾಗಲಿದೆ. ವಿದ್ಯುತ್‌ ವಿತರಣೆ ಗುಣಮಟ್ಟದ್ದಾಗಲಿದೆ ಎಂದರು.

ಇದಲ್ಲದೆ ಮೇಳಕುಂದಾ ಬಿ ಗ್ರಾಮದಲ್ಲಿಯೂ 110 ಕೆವಿ ವಿದ್ಯುತ್‌ ಉಪ ಕೇಂದ್ರ ಮಂಜೂರು ಮಾಡಿಕೊಡಬೇಕು, ಈಗಾಗಲೇ ಮಂಜೂರಾಗಿರುವ ಉದನೂರ್‌ ಗ್ರಾಮದಲ್ಲಿನ 110 ಕೆವಿ ಸಬ್‌ ಸ್ಟೇಷನ್‌ ಕಾಮಗಾರಿ ಬೇಗನೆ ಮಾಡಿ ಮುಗಿಸಬೇಕು ಎಂದು ಸಭೆಯಲ್ಲಿ ಶಾಸಕರು ಆಗ್ರಹಿಸಿದರು.

ಸಭೆಯಲ್ಲಿ ಪಟ್ಟಣ, ಮೇಳಕುಂದಾ, ಉದನೂರ್‌ ಗ್ರಾಮದ ರೈತ ಮುಖಂಡರು, ಹಿರಿಯರು ಪಾಲ್ಗೊಂಡು ತಾವು ಎದುರಿಸುತ್ತಿರುವ ವಿದ್ಯುತ್‌ ಸಮಸ್ಯೆ ಬಗ್ಗೆ ಎಂಡಿ ಪಂಕಜ ಕುಮಾರ್‌ ಪಾಂಡೆ ಗಮನ ಸೆಳೆದರು.

ಸಭೆಯಲ್ಲಿ ಅಕ್ರಮ ಸಕ್ರಮ ಅವಕಾಶ ಮಾಡಿಕೊಡುವ ಮೂಲಕ ಟೀಸಿಗಳ ಮೇಲೆ ಬೀಳುತ್ತಿರುವ ಹೊರೆ ತಗ್ಗಿಸಬೇಕು ಎಂದು ರೈತರು ಆಗ್ರಹಿಸಿದರು.

emedialine

Recent Posts

ಮಣಿಕಂಠ ರಾಠೋಡ ಆರೋಪ ಸತ್ಯಕ್ಕೆ ದೂರ | ಅಕ್ರಮ‌ವಾಗಿ ಅಕ್ಕಿ ಸಾಗಾಟವಾಗಿಲ್ಲ: ಆಹಾರ ಇಲಾಖೆ ಸ್ಪಷ್ಟನೆ

ಕಲಬುರಗಿ: ಕಳೆದ‌ ಅಕ್ಟೋಬರ್ 2 ರಂದು‌ ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…

2 hours ago

ರುಕ್ಮಾಪುರ: ಶ್ರೀ ದೇವಿ ಪಾರಾಯಣ ನಾಳೆಯಿಂದ

ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…

5 hours ago

ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ರಾಜಶೇಖರ್ ತಲಾರಿಗೆ ಮಾಧ್ಯಮ ರತ್ನ ಪ್ರಶಸ್ತಿ

ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…

9 hours ago

24 ನೇ ವರ್ಷದ `ಅಮ್ಮ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…

10 hours ago

ಚಿಂಚೋಳಿ: ಪ್ರವಾದಿ ಅವಹೇಳನ ಖಂಡಿಸಿ ಪ್ರತಿಭಟನೆ

ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…

12 hours ago

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

23 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420