ಸುರಪುರ: ನಗರದ ವಿವಿಧ ಕಡೆಗಳಲ್ಲಿ ನ್ಯಾಯಾಧೀಶರ ನೇತೃತ್ವದ ವಿವಿಧ ಅಧಿಕಾರಿಗಳ ತಂಡ ಬಾಲ ಕಾರ್ಮಿಕರನ್ನು ಕೆಲಸಕ್ಕೆ ಇಟ್ಟುಕೊಂಡಿದ್ದ ಅಂಗಡಿಗಳ ಮೇಲೆ ದಾಳಿ ನಡೆಸಿ ಬಾಲ ಕಾರ್ಮಿಕರನ್ನು ರಕ್ಷಣೆ ಮಾಡುವ ಜೊತೆಗೆ ಪ್ರಕರಣವನ್ನು ದಾಖಲಿಸಲಾಗಿದೆ.
ಜಿಲ್ಲಾ ಹಿರಿಯ ದಿವಾಣಿ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಸಮಿತಿಯ ಗೌರವ ಕಾರ್ಯದರ್ಶಿಗಳಾದ ನ್ಯಾ. ರವೀಂದ್ರ ಹೊನಾಲೆ,ಸುರಪುರ ನ್ಯಾಯಾಲಯದ ದಿವಾಣಿ ನ್ಯಾಯಾಧೀಶರಾದ ಮಾರುತಿ ಕೆ,ತಹಸೀಲ್ದಾರ್ ಕೆ.ವಿಜಯಕುಮಾರ,ಪಿ.ಐ ಆನಂದ ವಾಘಮೊಡೆ,ಬಾಲ ಕಾರ್ಮಿಕ ನಿರ್ಮೂಲನ ಯೋಜನಾ ಸೊಸೈಟಿ ಯೋಜನಾ ನಿರ್ದೇಶಕ ರಿಯಾಜ್ ಪಟೇಲ್ ವರ್ಕನಳ್ಳಿ,ತಾಲೂಕು ಆರೋಗ್ಯಾಧಿಕಾರಿ ಡಾ. ಆರ್.ವಿ ನಾಯಕ,ಸಮಾಜ ಕಲ್ಯಾಣಾಧಿಕಾರಿ ಶೃತಿ,ಬಿಇಓ ಯಲ್ಲಪ್ಪ ಕಾಡ್ಲೂರ,ಸಿಡಿಪಿಓ ಅನಿಲ್ ಕಾಂಬ್ಳೆ ಸೇರಿದಂತೆ ಕಾರ್ಮಿಕ ಇಲಾಖೆ ಮತ್ತಿತರೆ ಇಲಾಖೆ ಅಧಿಕಾರಿಗಳ ತಂಡ ವಿವಿಧ ಕಡೆಗಳಲ್ಲಿ ದಾಳಿ ನಡೆಸಿ ಬಾಲ ಕಾರ್ಮಿಕರನ್ನು ರಕ್ಷಿಸಿದ್ದಾರೆ,ಅಲ್ಲದೆ ನಾಲ್ಕು ಅಂಗಡಿಗಳ ಮಾಲೀಕರ ಮೇಲೆ ಪ್ರಕರಣವನ್ನು ದಾಖಲಿಸಿ ಎಚ್ಚರಿಕೆ ನೀಡಿದ್ದಾರೆ.