ಶಹಾಬಾದ: ತಾಲೂಕಿನ ಗೋಳಾ(ಕೆ) ಗ್ರಾಮದ ಕಾಗಿಣಾ ನದಿಯ ಬ್ರಿಡ್ಜ್ ಕಮ್ ಬ್ಯಾರೇಜ್ ಬಳಿ ಮೊಸಳೆಯೊಂದು ಮೃತಪಟ್ಟ ಸ್ಥಿತಿಯಲ್ಲಿ ಬುಧವಾರ ಪತ್ತೆಯಾಗಿದೆ.
ನದಿಯಲ್ಲಿ ಮೊಸಳೆಯನ್ನು ಕಂಡು ಬೆರಗಾಗಿದ್ದಾರೆ.ಒಂದು ಕ್ಷಣ ಆತಂಕ ವ್ಯಕ್ತವಾಗಿದೆ. ನಂತರ ಜನರು ಮೊಸಳೆ ಸತ್ತಿರುವುದನ್ನು ಕಂಡು ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.ಸ್ಥಳಕ್ಕೆ ಆಗಮಿಸಿದ ವಲಯ ಅರಣ್ಯಾಧಿಕಾರಿಗಳು ಮೊಸಳೆ ನದಿಯಲ್ಲಿ ಸತ್ತು ಬಿದ್ದಿರುವುದನ್ನು ಖಚಿತಪಡಿಸಿ, ಸ್ಥಳೀಯರ ಸಹಕಾರದೊಂದಿಗೆ ಮೊಸಳೆಯನ್ನು ದಡಕ್ಕೆ ತಂದು ಮರಣೋತ್ತರ ಪರೀಕ್ಷೆಗೆ ಕಳಿಸಿದ್ದಾರೆ.
ಪಶು ವೈದ್ಯಾಧಿಕಾರಿ ಡಾ.ನೀಲಪ್ಪ ಪಾಟೀಲ ಮರಣೋತ್ತರ ಪರೀಕ್ಷೆ ನಡೆಸಿ ನೈಸರ್ಗಿಕ ಸಾವು ಎಂದು ತಿಳಿಸಿದ್ದಾರೆ.ನಂತರ ಚಿತ್ತಾಪೂರ ವಲಯ ಅರಣ್ಯಾಧಿಕಾರಿ ವಿಜಯಕುಮಾರ ಬಡಿಗೇರ್ ಸಮಕ್ಷಮದಲ್ಲಿ ಮೊಸಳೆಯ ಅಂತ್ಯಕ್ರಿಯೆ ನಡೆಸಲಾಗಿದೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…