ಕಲಬುರಗಿ: 371ನೇ ಜೇ. ಕಲಂ ಜಾರಿಯಾಗಿ ದಶಕ ಕಳೆದಿರುವ ಹಿನ್ನೆಲೆಯಲ್ಲಿ ಕಲ್ಯಾಣದ ರಚನಾತ್ಮಕ ಪ್ರಗತಿಯ ಬಗ್ಗೆ ಮಹತ್ವದ ದುಂಡು ಮೇಜಿನ ಸಭೆ ಕರೆಯಲಾಗಿದ ಎಂದು ಕಲ್ಯಾಣ ಕರ್ನಾಟಕ ಹೋರಾಟ ಸಮಿತಿಯ ಸಂಸ್ಥಾಪಕ ಅಧ್ಯಕ್ಷರಾದ ಲಕ್ಷ್ಮಣ ದಸ್ತಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಡಿಸೆಂಬರ್ 3 ರಂದು ರವಿವಾರ ಬೆಳಿಗ್ಗೆ 11 ಗಂಟೆಗೆ ಸರಿಯಾಗಿ ಕಲಬುರಗಿ ನಗರದ ಹಿಂದಿ ಪ್ರಚಾರ ಸಭಾದಲ್ಲಿ ಕಲ್ಯಾಣ ಕರ್ನಾಟಕದ ಪರಿಣಿತ ತಜ್ಞರ,ಚಿಂತಕರ, ಬುದ್ಧಿಜೀವಿಗಳ ಹಾಗೂ ಸಮಿತಿಯ ಕ್ರಿಯಾ ಸದಸ್ಯರುಗಳ ಮಹತ್ವದ ದುಂಡು ಮೇಜಿನ ಸಭೆಯನ್ನು ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ಸುದೀರ್ಘ ಹೋರಾಟದ ಫಲ ಸ್ವರೂಪ ಮತ್ತು ರಾಜಕೀಯ ಇಚ್ಛಾಶಕ್ತಿಯಿಂದ ಕಲ್ಯಾಣ ಕರ್ನಾಟಕ ಪ್ರದೇಶದ ರಚನಾತ್ಮಕ ಪ್ರಗತಿಗೆ ಸಂವಿಧಾನದ 371ನೇ ಜೇ ಕಲಂ ತಿದ್ದುಪಡಿಯಾಗಿ ಜಾರಿಗೆ ಬಂದು ಒಂದು ದಶಕ ಕಳೆದಿರುವ ಹಿನ್ನೆಲೆಯಲ್ಲಿ ಇದರ ಸಾಧಕ ಬಾಧಕಗಳ ಬಗ್ಗೆ ಚರ್ಚಿಸಲು ಮತ್ತು ಕಲ್ಯಾಣದ ರಚನಾತ್ಮಕ ಪ್ರಗತಿಯ ವಿಷಯಗಳು ಒಳಗೊಂಡಂತೆ ಚರ್ಚೆ ನಡೆಯಲಿದ್ದು, ಈ ಮಹತ್ವದ ದುಂಡು ಮೇಜಿನ ಸಭೆಗೆ ಕಲ್ಯಾಣದ ಪರಿಣಿತರು, ಚಿಂತಕರು, ಬುದ್ಧಿಜೀವಿಗಳು, ಸಮಿತಿಯ ಕ್ರಿಯಾ ಸದಸ್ಯರು ತಪ್ಪದೆ ಹಾಜರಾಗಲು ಕೊರಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…