ಕಲಬುರಗಿ: ದಾಸ ಪಂಥದ ಮಹಾನ್ ದಾಸರಾಗಿರುವ ಕನಕದಾಸರು ಸಮ ಸಮಾಜ ನಿರ್ಮಾಣಕ್ಕೆ ನೀಡಿದ ಕೊಡುಗೆ ಬಹು ದೊಡ್ಡದು, ಕನಕನ ತತ್ವಾದರ್ಶ ಇಂದಿನ ಬದುಕಲ್ಲಿ ಹೆಜ್ಜೆಹೆಜ್ಜೆಗೂ ಅಗತ್ಯವಾಗಿದ್ದು ನಮ್ಮ ಜೀವನದಲ್ಲಿ ಕನಕದಾಸರ ಸಂದೇಶಗಳು ಅಳವಡಿಸಿಕೊಳ್ಳಬೇಕು ಕಲಬುರಗಿ ದಕ್ಷಿಣ ಶಾಸಕರಾದ ಅಲ್ಲಮಪ್ರಭು ಪಾಟೀಲ ಹೇಳಿದರು.
ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ ಹಾಗೂ ಜಿಪಂ ಆಶ್ರಯದಲ್ಲಿ ನಗರದ ಡಾ. ಎಸ್.ಎಂ. ಪಂಡಿತ ರಂಗಮಂದಿರದಲ್ಲಿ ಗುರುವಾರ ನಡೆದ ೫೩೬ನೇ ಸಂತ ಶ್ರೇಷ್ಠ ಶ್ರೀ ಭಕ್ತ ಕನಕದಾಸರ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಕನಕದಾಸರು ಒಂದು ಜಾತಿಗೆ ಸೀಮಿತವಾದವರಲ್ಲ, ಇಡೀ ಮನುಕುಲದ ಉದ್ಧಾರಕ್ಕೆ ಶ್ರಮಿಸಿದವರು. ನಾವು ಸೇವಿಸುವ ಅನ್ನ, ನೀರು, ಗಾಳಿಗೆ ಯಾವ ಜಾತಿಯ ಬಣ್ಣ ಇಲ್ಲ, ಹಾಗಾದರೆ, ಮನುಷ್ಯನಿಗೆ ಕುಲ ಉಂಟೆ? ಎಂದು ಕನಕದಾಸರು ತಮ್ಮ ದಾಸಸಾಹಿತ್ಯ, ಕೀರ್ತನೆ, ಭಜನೆಗಳ ಮೂಲಕ ವಿಶ್ವಕ್ಕೆ ಸಾರಿದ ಮಹಾನ್ ಮಾನವತಾವಾದಿ ಎಂದು ಕನಕರ ಮಹತ್ವ ವಿವರಿಸಿದರು.
ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣ ಕಮಕನೂರ ಮಾತನಾಡಿ ಡಾ. ಬಿ.ಆರ್. ಅಂಬೇಡ್ಕರ್ ರಚಿಸಿದ ಸಂವಿಧಾನದಲ್ಲಿ ಬುದ್ಧ, ಬಸವ, ಕನಕದಾಸರ ತತ್ವಾದರ್ಶಗಳನ್ನು ಅಳವಡಿಸಲಾಗಿದ್ದು, ಈ ಪೈಕಿ ಕನಕದಾಸರ ತತ್ವಾದಶಗಳು ಬಹುಪಾಲ ಅಡಕವಾಗಿವೆ ಎಂದ ಅವರು, ಹಾಲುಮತ-ಗಂಗಾಮತ ಸಮುದಾಯಗಳೆರಡೂ ಆವಿನಾಭಾವ ಸಂಬಂಧವಿದೆ. ಅವರೆಡ್ಡು ಪರಸ್ಪರ ಸಂಘಟಿತರಾಗಿ ಒಗ್ಗೂಡಿದರೆ ಇಡೀ ರಾಜ್ಯ ಆಳ್ವಿಕೆ ಮಾಡುವ ಶಕ್ತಿಯಿದೆ ಎಂದು ಬಣ್ಣಿಸಿದರು.
ಶರಣಬಸವೇಶ್ವರ ವಾಣಿಜ್ಯ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ದಶರಥ ಮೇತ್ರೆ ವಿಶೇಷ ಉಪನ್ಯಾಸ ನೀಡಿದರು. ಶಾಸಕ ಬಸವರಾಜ ಮತ್ತಿಮಡು ಮಾತನಾಡಿದರು.
ಕವಲಗಾ(ಬಿ)ಯ ಬೀರಣ್ಣ ದೇವರು, ಕಲಬುರಗಿಯ ಲಿಂಗದೇವರು, ಗವಿಸಿದ್ಧಪ್ಪ ಮುತ್ಯಾ , ಮೇಳಕುಂದಾದ ಮಹಾದೇವಪ್ಪ ಮುತ್ಯಾ ಸಾನ್ನಿಧ್ಯವಹಿಸಿದ್ದರು. ಎಂಎಲ್‌ಸಿ ಶಶೀಲ್ ಜಿ. ನಮೋಶಿ, ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಕುರುಬ ಸಮಾಜದ ಮುಖಂಡ ಬೈಲಪ್ಪ ನೇಲೋಗಿ ಇದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ದತ್ತಪ್ಪ ಸಾಗನೂರ ಸ್ವಾಗತಿಸಿದರು. ಶಿವಾನಂದ ಅಣಜಗಿ ನಿರೂಪಿಸಿದರು.
ಪ್ರದೇಶ ಕುರುಬ ಗೊಂಡ ಸಂಘದ ಜಿಲ್ಲಾಧ್ಯಕ್ಷ ಗುರುನಾಥ ಪೂಜಾರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಇದಕ್ಕೂ ಮುನ್ನ ನಗರೇಶ್ವರ ಶಾಲೆಯಿಂದ ಡಾ. ಎಸ್.ಎಂ. ಪಂಡಿತ ರಂಗಮಂದಿರದವರೆಗೆ ಆಕರ್ಷಕ ಒಂಟೆಗಳ ಮೆರವಣಿಗೆಗೆ ಮೆರಗುತಂದಿತ್ತು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…