ಬಿಸಿ ಬಿಸಿ ಸುದ್ದಿ

46ಲಕ್ಷ ಅನುದಾನ ಲಪಟಾಯಿಸಿದ ಆರೋಪ: ಪಿಡಿಓ ವಿರುದ್ಧ ಕ್ರಮಿನಲ್ ಪ್ರಕರಣ ದಾಖಲು

ಕಲಬುರಗಿ: ಗ್ರಾಮ ಸ್ವರಾಜ್ ಮತ್ತು ಮಂಚಾಯತ್ ರಾಜ್ ಕಾಯ್ದೆಡಿಯಲ್ಲಿ 15ನೇ ಹಣಕಾಸಿನಲ್ಲಿ 46 ಲಕ್ಷ ಅವ್ಯವಹಾರ ನಡೆಸಿರುವ ಆರೋಪದ ಹಿನ್ನೆಯಲ್ಲಿ ಕಮಲಾಪುರ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಿಂದ ಓಕಳಿ ಗ್ರಾಮ ಪಂಚಾಯತ ಪಿಡಿಓ ಅಧಿಕಾರಿ ವಿರುದ್ಧ ಕಲಬುರಗಿ ಸಿಇಎನ್ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಾಗಿದೆ.

ಕಮಲಾಪುರ ತಾಲ್ಲೂಕಿನ ಓಕಳಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿರುವ ಪ್ರವೀಣ ಕುಮಾರ ಅವರ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಾಗಿದ್ದು, 15ನೇ ಹಣಕಾಸು ಅನುದಾನದಲ್ಲಿ ಅವ್ಯವಹಾರ ನಡೆಸಿ ಕಾಮಗಾರಿ ಕೈಗೊಳ್ಳದೆ ಪರಿಕರಗಳನ್ನು ಖರೀದಿಸದೆ ಓಚರ್ ಸೃಷ್ಠಿಸಿ ರವರು 46 ಲಕ್ಷ ರೂಪಾಯಿ ಹಣ ದುರ್ಬಳಗೆ ಮಾಡಿರುತ್ತಾರೆ ಎಂದು ಅಂಬೇಡ್ಕರ್ ಯುವ ಸೇನೆ ಜಿಲ್ಲಾಧ್ಯಕ್ಷ  ನ್ಯಾಯವಾದಿ ಮಲ್ಲಿಕಾರ್ಜುನ ತಳಕೇರಿ ಮತ್ತು ಓಕಳಿ ಗ್ರಾಮ ಪಂಚಾಯತ ಮಾಜಿ ಅಧ್ಯಕ್ಷ ವಿಜಯಕುಮಾರ ಶೆಟ್ಟಿ ದೂರು ಸಲ್ಲಿಸಿದರು.

ಪಿಡಿಓ ಪ್ರವೀಣಕುಮಾರ ವಿರುದ್ಧ ದೂರಿನ ತನಿಖೆ ಕೈಗೊಂಡ ಅಧಿಕಾರಿಗಳು ವಿಚಾರಣೆ ನಡೆಸಿದ ವೇಳೆ ಅನಾರೊಗ್ಯದ ನೆಪವೊಡ್ಡಿ 8 ದಿನಗಳ ಕಾಲಾವಕಾಶ ಕೋರಿದ್ದರು . ನಂತರ ದೂರಿಗೆ ಸಂಬಂಧಿಸಿದ ಎಲ್ಲಾ ದಾಖಲೆಗಳೊಂದಿಗೆ ಖುದ್ದಾಗಿ ಹಾಜರಾಗಲು ಹಾಗೂ ತನಿಖೆಗೆ ಸಹಕರಿಸಲು ತಿಳಿಸಲಾಗಿತ್ತು. ಅನೇಕ ಸಲ ದಾಖಲೆ ಸಲ್ಲಿಸುವಂತೆ ತಿಳಿಸಿಸರೂ ಕೂಡ  ತನಿಕಾಧಿಕಾರಿಗಳಿಗೆ ಸ್ಪಂದಿಸಿರುವುದಿಲ್ಲ ಎಂದು ತಿಳಿದುಬಂದಿದೆ.

ದಾಖಲೆ ಸಲ್ಲಿಸಲು ಹಿಂಜರಿಯುತ್ತಿರುವುದನ್ನು ಗಮನಿಸಿ ಅನುದಾನ ದುರುಪಯೋಗ ಪಡಿಸಿರುವ ಬಗ್ಗೆ ಪ್ರಥಾಮಿಕ ತನಿಖಾ ವರದಿಯಿಂದ ಕಂಡು ಬಂದಿರುವ ಹಿನ್ನೆಲೆಯಲ್ಲಿ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರವಿಣಕುಮಾರ ಪಿಡಿಒ ವಿರುದ್ಧ ಪ್ರಕರಣ ದಾಖಲಾಗಿದೆ.

ಪ್ರಥಾಮಿಕ ತನಿಖೆಯಲ್ಲಿ 46 ಲಕ್ಷ ಅನುದಾನ ಅವ್ಯವಹಾರ ನಡೆಸಿರುವುದು ಮೇಲ್ನೊಟಕ್ಕೆ ಕಂಡುಬಂದಿದ್ದು, ಕ್ರಿಮಿನಲ್ ಪ್ರಕರಣ ಸಹ ದಾಖಲಾಗಿದೆ. ತಕ್ಷಣ ಅವ್ಯವಹಾರ ನಡೆಸಿರುವ ಪಿಡಿಓ ಅಧಿಕಾರಿ ಪ್ರವೀಣಕುಮಾರಗೆ ಅಮನಾತುಗೊಳ್ಳಿಸಿ ಮುಂದಿನ ತನಿಖೆ ನಡೆಸಬೇಕು. – ನ್ಯಾಯವಾದಿ ಮಲ್ಲಿಕಾರ್ಜುನ ತಳಕೇರಿ, ಅಂಬೇಡ್ಕರ್ ಯುವ ಸೇನೆ ಜಿಲ್ಲಾ ಅಧ್ಯಕ್ಷರು ಕಲಬುರಗಿ.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

5 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

11 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

12 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

12 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

23 hours ago