ಬಿಸಿ ಬಿಸಿ ಸುದ್ದಿ

ಸಂವಿಧಾನದ ಮೂಲ ಆಶಯಗಳಡಿ ನಡೆಯುವ ಯಾವುದೇ ಚಟುವಟಿಕೆಗಳನ್ನು ತಡೆಯುವುದಿಲ್ಲ; CM

ಬೆಂಗಳೂರು, ಡಿಸೆಂಬರ್ 01; ರಾಜ್ಯ ಸರ್ಕಾರವು ಸಂವಿಧಾನದ ಮೂಲ ಆಶಯಗಳಡಿ ನಡೆಸುವ ಚಟುವಟಿಕೆಗಳನ್ನು ನಿಲ್ಲಿಸುವ ಅಥವಾ ತಡೆಯುವ ಯಾವುದೇ ಕೆಲಸವನ್ನು ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯಾ ಅವರು ಹೇಳಿದ್ದಾರೆ.

ಕಥೆ, ಕಾವ್ಯ, ನಾಟಕ, ಸಂಗೀತ ಮುಂತಾದ ಸೃಜನಶೀಲ ಅಭಿವ್ಯಕ್ತಿಯನ್ನು ಯಾವುದೇ ಕಾರಣಕ್ಕೂ ತಡೆಯುವ ಕೆಲಸವನ್ನು ಮಾಡುವುದಿಲ್ಲ. ನಾವು ಸಂವಿಧಾನದ ಮೂಲಸ್ಪೂರ್ತಿಗೆ ವಿರುದ್ಧವಾಗದಂತೆ ನಡೆಯುವ ಎಲ್ಲ ಅಭಿವ್ಯಕ್ತಿಗಳ ಪರವಾಗಿದ್ದೇವೆ. ಕೆಳಹಂತದ ಪೊಲೀಸ್ ಅಧಿಕಾರಿಗಳ ತಪ್ಪು ತಿಳಿವಳಿಕೆಯ ಕಾರಣಕ್ಕೆ ಒಂದೆರಡು ಅನಾವಶ್ಯಕವಾದ ಗೊಂದಲಗಳು ನಿರ್ಮಾಣವಾಗಿವೆ ಎಂಬುದು ನನ್ನ ಗಮನಕ್ಕೆ ಬಂದಿದೆ ಎಂದರು.

ಈ ಕುರಿತು ಯಾವುದೇ ಗೊಂದಲಗಳು ಸೃಷ್ಟಿಯಾಗದಂತೆ ನೋಡಿಕೊಳ್ಳಬೇಕೆಂದು ಪೆÇಲೀಸ್ ಮಹಾನಿರ್ದೇಶಕರಿಗೆ ಸೂಕ್ತ ಸೂಚನೆಗಳನ್ನು ನೀಡಿರುತ್ತೇನೆ. ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವ ಕೆಲಸಗಳ ಜೊತೆ ಸರ್ಕಾರವು ಸದಾ ನಿಲ್ಲುತ್ತದೆ ಎಂಬುದನ್ನು ತಿಳಿಸಬಯಸುತ್ತೇನೆ. ಆದ್ದರಿಂದ ಯಾವುದೇ ರೀತಿಯ ಗೊಂದಲಗಳನ್ನು ಸೃಷ್ಟಿಸಬಾರದೆಂದು, ಅಭಿವ್ಯಕ್ತಿ ಸ್ವಾತಂತ್ರ್ಯದ ವಿಚಾರದಲ್ಲಿ ಆತಂಕಿತರಾಗಬಾರದೆಂದು ನಾಡಬಾಂಧವರಲ್ಲಿ ಮುಖ್ಯಮಂತ್ರಿಗಳು ವಿನಂತಿಸಿದ್ದಾರೆ.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

9 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

9 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

9 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago