ಕಲಬುರಗಿ: ಶಿವಸಂಗ ಸಂಸ್ಕೃತಿಕ ಸೇವಾ ಸಂಘ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ನಗರದ ಜಗತ್ತ್ ಹತ್ತಿರದ ದಿ ಐಡಿಯಲ್ ಫೈನ್ ಆರ್ಟ್ ಕಾಲೇಜಿನ ಆರ್ಟ್ ಗ್ಯಾಲರಿಯಲ್ಲಿ ನಡೆದ “ಸಂಗೀತ ಸರಿಗಮ” ವಿಶೇಷ ಕಾರ್ಯಕ್ರಮವನ್ನು ಖ್ಯಾತ ಸಾಹಿತಿ ಮಹಾಂತೇಶ್ ನವಲಕಲ್ಲ್ ಅವರು ದೀಪ ಬೆಳಗಿಸುವುದರೊಂದಿಗೆ ಉದ್ಘಾಟನೆ ಮಾಡಿದರು.
ಶಿವಸಂಗ ಸಂಸ್ಕೃತಿಕ ಸೇವಾ ಸಂಘದ ಅಧ್ಯಕ್ಷರಾದ ಪರಮೇಶ್ವರ ಶಟಕಾರ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.
ವೇದಿಕೆ ಮೇಲೆ ಖ್ಯಾತ ಚಿತ್ರಕಲಾವಿದ ಬಸವರಾಜ್ ಜಾನೆ, ಸಮುದಾಯದ ಅಧ್ಯಕ್ಷರಾದ ಡಾ. ದತ್ತಾತ್ರೇಯ ಇಕ್ಕಳಕಿ, ಕಲಾವಿದರು ಮತ್ತು ನಿವೃತ್ತ ಔಷಧ ತಜ್ಞರಾದ ಶರಣ ಶರಣಗೌಡ ಪಾಟೀಲ್ ಮತ್ತು ಖ್ಯಾತ ಗಾಯಕ ಸಂಗಯ್ಯ ಹಳ್ಳದಮಠ ಅವರು ವೇದಿಕೆ ಮೇಲೆ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಕಲಾವಿದರು, ಚಿಂತಕರು, ಸಾಹಿತಿಗಳು, ರಂಗಕರ್ಮಿಗಳು ಮತ್ತು ಪ್ರಾದ್ಯಾಪಕರು ಉಪಸ್ಥಿತರಿದ್ದರು.
ಪರಮೇಶ್ವರ ಶಟಕಾರ ಅವರು ಪ್ರಸ್ತಾವಿಕ ಮತ್ತು ಸ್ವಾಗತ ಮಾಡಿದರೆ ಕಾರ್ಯಕ್ರಮದ ನಿರೂಪಣೆಯನ್ನು ಬಿ.ಎನ್. ಪಾಟೀಲ್ ಮಾಡಿದರು.
ಇಡೀ ಕಾರ್ಯಕ್ರಮದ ನಿರ್ವಹಣಾ ಜವಾಬ್ದಾರಿಯ ಜೊತೆಗೆ ವಂದನಾರ್ಪಣೆಯನ್ನು ಶ್ರೀಮತಿ ನಯನಾ ಅರವಿಂದ್ ಅವರು ನೆರವೇರಿಸಿಕೊಟ್ಟರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…