ಸುರಪುರ: ವಿಶ್ವ ಕನ್ನಡಿಗರ ಸಂಸ್ಥೆ ಕರ್ನಾಟಕ ವತಿಯಿಂದ ಬೀದರ್ ನಗರದ ಡಾ: ಚನ್ನಬಸವ ಪಟ್ಟದೇವರು ರಂಗಮಂದಿರದಲ್ಲಿ ನಡೆದ 68ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ನಗರದ ಹಿರಿಯ ಶಿಕ್ಷಕಿ ಸಿ ಬಿ ರಾಜೇಶ್ವರಿ ಅವರಿಗೆ ಕನ್ನಡ ರಾಜ್ಯೋತ್ಸವ ರತ್ನ ಪ್ರಶಸ್ತಿ ಲಭಿಸಿದ ಹಿನ್ನೆಲೆಯಲ್ಲಿ ನಗರದಲ್ಲಿ ಅವರ ಹಳೆಯ ವಿದ್ಯಾರ್ಥಿಗಳಿಂದ ಸನ್ಮಾನ ನೆರವೇರಿಸಲಾಯಿತು.
ನಗರದ ಟೈಲರ್ ಮಂಜಿಲ್ ನಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಶಿಕ್ಷಕಿ ಪ್ರಶಸ್ತಿ ಪುರಸ್ಕೃತ ಸಿ.ಬಿ ರಾಜೇಶ್ವರಿ ಅವರಿಗೆ ಸನ್ಮಾನಿಸಿ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಶಿಕ್ಷಕಿಯ ಸಾಧನೆ ಕುರಿತು ಹಳೆಯ ವಿದ್ಯಾರ್ಥಿ ವಿರೂಪಾಕ್ಷ ಹಿರೇಮಠ ಮಾತನಾಡಿದರು.
ಕಾರ್ಯಕ್ರಮದಲ್ಲಿ ಹಳೆಯ ವಿದ್ಯಾರ್ಥಿಗಳಾದ ಕಮಲೇಶ್ ಜೈನ್, ಜಕ್ಕಪ್ಪ ಕಟ್ಟಿಮನಿ ,ಸುಹಾಸ್ ದಾದಾ, ಗೋವಿಂದ ಮಾಳದಕರ, ರಂಗನಾಥ ಬಿರಾದರ್, ರಂಗನಾಥ ಹೊಸಮನಿ, ಸೋಮನಾಥ ಎಚ್ ಡೊಣ್ಣೆಗೇರ, ಆನಂದ ಜೈನ್ ,ಮಹೇಂದ್ರ ಜೈನ್, ಅಮಿತ್ ಗುರಿಕಾರ್, ಇರ್ಫಾನ್, ದುರ್ಗಾ ವನಕೇರಿ, ಶರಣು ಶಿರವಾಳ, ದೇವಡಿ,ಖಾಜಾ ಇತರರು ಭಾಗವಹಿಸಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…